ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Ayudh Pooja: ಪೌರಕಾರ್ಮಿಕರಿಂದ ಶ್ರದ್ಧಾಭಕ್ತಿಯ ಆಯುಧ ಪೂಜೆ

ನಗರಸಭೆಯ 50ಕ್ಕೂ ಹೆಚ್ಚು ವಾಹನಗಳನ್ನು ಸ್ವಚ್ಛಗೊಳಿಸಿ, ಹೂಗಳಿಂದ ಅಲಂಕರಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ನಗರಸಭೆ ಆಯುಕ್ತ ಮನ್ಸೂರ್ ಅಲಿ ಖಾನ್ ಹಾಗೂ ಉಮಾಶಂಕರ್ ಅವರ ಉಪಸ್ಥಿತಿಯಲ್ಲಿ ನಡೆದ ಪೂಜೆಯಲ್ಲಿ ಪೌರಕಾರ್ಮಿಕರು, ವಾಹನ ಚಾಲಕರು ಮತ್ತು ನಗರಸಭೆ ಸಿಬ್ಬಂದಿ ಹೊಸ ಉಡುಪು ಧರಿಸಿ ಪಾಲ್ಗೊಂಡರು.

ಚಿಕ್ಕಬಳ್ಳಾಪುರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಪೌರ ಕಾರ್ಮಿಕರು ನಗರಸಭೆ ಆವರಣದಲ್ಲಿ ಆಯುಧ ಪೂಜೆಯನ್ನು ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ಆಚರಿಸಿದರು.

ನಗರಸಭೆಯ 50ಕ್ಕೂ ಹೆಚ್ಚು ವಾಹನಗಳನ್ನು ಸ್ವಚ್ಛಗೊಳಿಸಿ, ಹೂಗಳಿಂದ ಅಲಂಕರಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ನಗರಸಭೆ ಆಯುಕ್ತ ಮನ್ಸೂರ್ ಅಲಿ ಖಾನ್ ಹಾಗೂ ಉಮಾಶಂಕರ್ ಅವರ ಉಪಸ್ಥಿತಿಯಲ್ಲಿ ನಡೆದ ಪೂಜೆಯಲ್ಲಿ ಪೌರಕಾರ್ಮಿಕರು, ವಾಹನ ಚಾಲಕರು ಮತ್ತು ನಗರಸಭೆ ಸಿಬ್ಬಂದಿ ಹೊಸ ಉಡುಪು ಧರಿಸಿ ಪಾಲ್ಗೊಂಡರು.

ಇದನ್ನೂ ಓದಿ: Ayudha Puja 2026: ಸದಾಶಿವನಗರದ ನಿವಾಸದಲ್ಲಿ ಆಯುಧ ಪೂಜೆ ನೆರವೇರಿಸಿದ ಸಿಎಂ ಡಿ.ಕೆ.ಶಿವಕುಮಾರ್‌

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಆಯುಕ್ತ ಮನ್ಸೂರ್ ಅಲಿ ಖಾನ್, ನಗರದ ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡಲು ಪೌರಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ ಹಾಗೂ ಹೆಚ್ಚಿನ ಶಕ್ತಿ ದೊರೆಯಲಿ, ನಗರಸಭೆಯ ವಾಹನಗಳು ಸುರಕ್ಷಿತವಾಗಿದ್ದು ಸಾರ್ವಜನಿಕ ಸೇವೆಗೆ ಸದಾ ಸಿದ್ಧವಾಗಿರಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ತಾಲೂಕು ಅಧ್ಯಕ್ಷ ಗಿರೀಶ್ ಮಾತನಾಡಿ, ಆಯುಧ ಪೂಜೆಯ ಅಂಗವಾಗಿ ನಗರಸಭೆ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣ ವಾಗಿತ್ತು. ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರು ಹಾಗೂ ಸಿಬ್ಬಂದಿಯ ಬದುಕಿನಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು.

ಸಂಘದ ಉಪಾಧ್ಯಕ್ಷ ಎಂ. ದೇವರಾಜ್ ಸೇರಿದಂತೆ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.