ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA KH Puttaswamy Gowda: ಶೋಷಿತ ಸಮುದಾಯದ ಘನತೆಯ ಬದುಕಿಗೆ ಬಾಬಾ ಸಾಹೇಬ ಅಂಬೇಡ್ಕರ್ ಕಾರಣ : ಶಾಸಕ ಪುಟ್ಟಸ್ವಾಮಿಗೌಡ: ಶಾಸಕ ಪುಟ್ಟಸ್ವಾಮಿಗೌಡ

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿ ದ್ದಾರೆ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ದೇಶ ವಿದೇಶಗಳ ಸಂವಿ ಧಾನ, ಧರ್ಮ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿ,ದೇಶದ ಜನರ ಆಚಾರ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಸಮಬಾಳು, ಸಮಪಾಲು ಸಿಗಬಹುದಾದಂತಹ ಸಂವಿಧಾನವನ್ನು ರಚನೆ ಮಾಡಿ ಈ ದೇಶಕ್ಕೆ ನೀಡಿದ್ದಾರೆ

ಶೋಷಿತ ಸಮುದಾಯದ ಘನತೆಯ ಬದುಕಿಗೆ ಬಾಬಾ ಸಾಹೇಬ ಅಂಬೇಡ್ಕರ್ ಕಾರಣ

ಇವತ್ತು ಶೋಷಿತ ವರ್ಗದವರು ಸಮಾಜದಲ್ಲಿ ತಲೆಎತ್ತಿ ಗೌರವ,ಘನತೆಯಿಂದ ಬದುಕುತ್ತಿದ್ದಾರೆ ಎಂದರೆ,ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನವೇ ಕಾರಣ ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು ತಿಳಿಸಿದರು. -

Profile
Ashok Nayak Apr 15, 2026 12:13 AM

ಗೌರಿಬಿದನೂರು : ಇವತ್ತು ಶೋಷಿತ ವರ್ಗದವರು ಸಮಾಜದಲ್ಲಿ ತಲೆ ಎತ್ತಿ ಗೌರವ, ಘನತೆಯಿಂದ ಬದುಕುತ್ತಿದ್ದಾರೆ ಎಂದರೆ,ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನವೇ ಕಾರಣ ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡ(MLA KH Puttaswamy Gowda)ರು ತಿಳಿಸಿದರು.

ಅವರು ನಗರದ ನ್ಯಾಷನಲ್ ಕಾಲೇಜು ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಇನ್ನಿತರರ ಇಲಾಖೆಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಂ ಅವರ 119 ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

gowri

ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಶೇಕಡ ತೊಂಬತ್ತ ರಷ್ಟು ತೊಲಗಿದ್ದು, ಉಳಿದ ಹತ್ತರಷ್ಟನ್ನು ನಾವು ಜನರಲ್ಲಿ ಅರಿವು ಮೂಡಿಸುವ ಮೂಲಕ ಸಮ ಸಮಾಜ ನಿರ್ಮಾಣ ಮಾಡಬೇಕಿದೆ ಎಂದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿದ್ದಾರೆ.ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ದೇಶ ವಿದೇಶಗಳ ಸಂವಿಧಾನ, ಧರ್ಮ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿ,ದೇಶದ ಜನರ ಆಚಾರ ವಿಚಾರ ಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಸಮಬಾಳು, ಸಮಪಾಲು ಸಿಗಬಹುದಾದಂತಹ ಸಂವಿಧಾನವನ್ನು ರಚನೆ ಮಾಡಿ ಈ ದೇಶಕ್ಕೆ ನೀಡಿದ್ದಾರೆ ಎಂದರು.

ಪ್ರತಿಯೊಬ್ಬರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ರೋಲ್ ಮಾಡಲ್ ಆಗಿ ತೆಗೆದು ಕೊಂಡು ಅವರು ಬರೆದ ಪುಸ್ತಕಗಳನ್ನು ಅಧ್ಯಯನ ಮಾಡಿದರೆ ಮಾತ್ರ ಅಂಬೇಡ್ಕರ್ ಅವರ ಮಾರ್ಗದರ್ಶನ ನಮಗೆ ದೊರೆಯುತ್ತದೆ ಎಂದು ಕರೆ ನೀಡಿದರು.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ತಹಶಿಲ್ದಾರ್ ಅರವಿಂದ್,ತಾಲೂಕು ಪಂಚಾಯತಿ ಇಓ ಜಿಕೆ. ಹೊನ್ನಯ್ಯ, ಸಮಾರಂಭದ ಮುಖ್ಯ ಭಾಷಣಕಾರ ಡಾ.ಕೆಪಿ.ನಾರಾಯಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ,ಕೃಷಿ ಇಲಾಖೆಯ ಸಹಾಯಕಿ ನಿರ್ದೇಶಕಿ ರಾಜೇಶ್ವರಿ, ,ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಪ್ಪಗೌಡ ನಾಯ್ಕರ್, ನಗರಸಭೆ ಆಯುಕ್ತ ರಮೇಶ್, ನಗರ ಪೊಲೀಸ್ ಠಾಣೆಯ ಪಿಎಂ ವರಲಕ್ಷ್ಮಿ, ಸಹಾಯಕ ನಿರ್ದೇಶಕ ಡಾ.ಮಾರುತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.