ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

G Parameshwar: ಬಾಬಾಸಾಹೇಬರ ದೂರದೃಷ್ಟಿಯ ಚಿಂತನೆಗಳು ದೇಶದ ಪ್ರಗತಿಗೆ ಬುನಾದಿ: ಡಿಸಿಎಂ ಡಾ.ಜಿ.ಪರಮೇಶ್ವರ

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ, ಹೋರಾಟ, ಸಾಧನೆ ಹಾಗೂ ವೈಚಾರಿಕ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಚಿಂತಾಮಣಿ ಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ–ಅನುಭವ ಕೇಂದ್ರ ರಾಜ್ಯಕ್ಕೆ ಮಾದರಿ ಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ(DCM G Parameshwar) ಹೇಳಿದರು

ಚಿಕ್ಕಬಳ್ಳಾಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ, ಹೋರಾಟ, ಸಾಧನೆ ಹಾಗೂ ವೈಚಾರಿಕ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಚಿಂತಾಮಣಿ ಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ–ಅನುಭವ ಕೇಂದ್ರ ರಾಜ್ಯಕ್ಕೆ ಮಾದರಿ ಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ(DCM G Parameshwar) ಹೇಳಿದರು.

ಚಿಂತಾಮಣಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರೂಪಾಯಿ 20.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಭವನ–ಅನುಭವ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಆಯುಷ್ ಆಸ್ಪತ್ರೆ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ

ಅಂಬೇಡ್ಕರ್ ಅವರು ಸಾಮಾಜಿಕವಾಗಿ ಶೋಷಿತ ಹಾಗೂ ಬಡ ಕುಟುಂಬದಿಂದ ಬಂದರೂ ಕಠಿಣ ಪರಿಶ್ರಮದ ಮೂಲಕ ಅಪಾರ ಜ್ಞಾನ ಸಂಪಾದಿಸಿ ವಿಶ್ವಮಟ್ಟದ ಆರ್ಥಿಕ ತಜ್ಞರಾಗಿ ಹೊರಹೊಮ್ಮಿ ದರು. ಕೊಲಂಬಿಯಾ ವಿಶ್ವವಿದ್ಯಾಲಯ ಹಾಗೂ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ವ್ಯಾಸಂಗ ಮಾಡಿದ ಅವರು, ವಿದೇಶಗಳಲ್ಲಿ ಉತ್ತಮ ಅವಕಾಶಗಳಿದ್ದರೂ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಪರಿವರ್ತನೆಗಾಗಿ ತಮ್ಮ ಜ್ಞಾನವನ್ನು ಧಾರೆ ಎರೆದರು. ಅವರ ಆರ್ಥಿಕ ಚಿಂತನೆಗಳು ದೇಶದ ಆರ್ಥಿಕ ವ್ಯವಸ್ಥೆಯ ರೂಪುಗೊಳ್ಳುವಿಕೆಗೆ ಮಹತ್ವದ ಕೊಡುಗೆ ನೀಡಿವೆ ಎಂದರು.

ಅಂಬೇಡ್ಕರ್ ಅವರ ಬದುಕು ಪ್ರತಿಕೂಲ ಪರಿಸ್ಥಿತಿಗಳ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ರಿಗೂ ಸ್ಫೂರ್ತಿಯ ದಾರಿದೀಪವಾಗಿದೆ. ಅವರ ವಿಚಾರಧಾರೆಗಳನ್ನು ಕೇವಲ ಪುಸ್ತಕಗಳಿಗೆ ಅಥವಾ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಯುವಜನತೆ ಅನುಭವಿಸಿ, ಅರಿತು ಅಧ್ಯಯನ ಮಾಡಲು ಈ ಕೇಂದ್ರ ನಿರ್ಮಿಸಲಾಗಿದೆ. ಇದು ಜ್ಞಾನಕ್ಕೆ ದಾರಿ ತೋರಿಸುವ ಕೇಂದ್ರವಾಗಿದ್ದು, ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ಮತ್ತು ಚೈತನ್ಯ ತುಂಬಲಿದೆ ಎಂದು ಹೇಳಿದರು.

979914 ಚಹಿ

ಡಿಜಿಟಲ್ ಅಧ್ಯಯನ ಕೇಂದ್ರ, ಅಂಬೇಡ್ಕರ್ ಜೀವನಯಾನದ ವರ್ಣಚಿತ್ರಗಳ ಗ್ಯಾಲರಿ, ಕಂಚಿನ ಪ್ರತಿಮೆ ಹಾಗೂ ಬುದ್ಧನ ಅಮೃತಶಿಲೆಯ ಪುತ್ಥಳಿ ಕೇಂದ್ರದ ವಿಶೇಷ ಆಕರ್ಷಣೆಗಳಾಗಿವೆ. ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಧ್ಯಯನ ಕೇಂದ್ರ ಉಪಯುಕ್ತವಾಗಲಿದೆ. ತಾಲೂಕು ಹಂತದಲ್ಲಿ ಇಷ್ಟೊಂದು ಭವ್ಯ ಹಾಗೂ ಅರ್ಥಪೂರ್ಣ ವಾಗಿ ನಿರ್ಮಿಸಿರುವ ಕೇಂದ್ರ ಚಿಂತಾಮಣಿಯ ಹೆಮ್ಮೆಯ ಪ್ರತೀಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ, ಅಂಬೇಡ್ಕರ್ ಅವರು ಯಾವುದೇ ಜಾತಿ, ಧರ್ಮ ಅಥವಾ ಪ್ರಾಂತ್ಯಕ್ಕೆ ಸೀಮಿತರಲ್ಲ. ಇಡೀ ವಿಶ್ವಕ್ಕೆ ಬೆಳಕು ನೀಡಿದ ಮಹಾನ್ ಮಾನವತಾವಾದಿ. ಭಾರತ ಸಾಮಾಜಿಕ, ಆರ್ಥಿಕ ಹಾಗೂ ವೈಜ್ಞಾನಿಕ ವಾಗಿ ಮುನ್ನಡೆಯಲು ಅವರು ನೀಡಿದ ಸಂವಿಧಾನ ಪ್ರಮುಖ ಶಕ್ತಿಯಾಗಿದೆ ಎಂದರು.

ಸಮಾಜ ಕಲ್ಯಾಣ ಸಚಿವ ವಿ.ಮುನಿಯಪ್ಪ(V Muniyappa) ಮಾತನಾಡಿ, ಸಚಿವ ಡಾ.ಎಂ.ಸಿ.ಸುಧಾಕರ್(Dr M C Sudhakar) ಅವರ ಹಲವು ವರ್ಷಗಳ ಶ್ರಮದ ಫಲವಾಗಿ ನಿರ್ಮಾಣಗೊಂಡಿರುವ ಈ ಅನುಭವ ಕೇಂದ್ರದಲ್ಲಿ ಅಂಬೇಡ್ಕರ್ ಅವರ ಬಾಲ್ಯದಿಂದ ಪರಿನಿರ್ವಾಣದವರೆಗಿನ ಜೀವನದ ಸಂಪೂರ್ಣ ಚಿತ್ರಣ ದೊರೆಯಲಿದೆ. ಮುಂದಿನ ಪೀಳಿಗೆಗೆ ಅವರ ಜೀವನದರ್ಶನ ಪರಿಚಯಿಸಲು ಇದು ಸಹಕಾರಿಯಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ರೂಪಾಯಿ 1.75 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಆಜಾದ್ ಚೌಕ್ ವೃತ್ತ ಹಾಗೂ ರೂಪಾಯಿ 7.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಾಮರ್ಥ್ಯಸೌಧ, ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಸಭಾಭವನವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ.ಮಲ್ಲೇಶ್ ಬಾಬು(M Malleshbabu), ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಶಾಸಕ ಡಾ.ಹೆಚ್.ಸಿ.ಮಹದೇವಪ್ಪ(Dr H C Mahadevappa), ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್(Dr M C Sudhakar), ವಿಧಾನಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಅನಿಲ್ ಕುಮಾರ್, ಸರ್ಕಾರದ ಕಾರ್ಯದರ್ಶಿ ಮಣಿವಣ್ಣನ್, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.