ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ಜಯಂತಿ

ಹಸಿರು ಕ್ರಾಂತಿಯ ಹರಿಕಾರ ಧೀಮಂತ ನಾಯಕ ದಿ. ಡಾ. ಬಾಬು  ಜಗಜೀವನ್ ರಾಮ್ ಅವರ ಆದರ್ಶಗಳನ್ನು ತಮ್ಮ ವ್ಯಕ್ತಿತ್ವದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಒಳ್ಳೆಯ ಪ್ರಜೆಗಳಾಗಿ ಅವರಂತೆ ದೇಶಕ್ಕೆ ದೊಡ್ಡ ಕೊಡುಗೆ ನೀಡಬೇಕು. ವಿದ್ಯಾರ್ಥಿಗಳು ಅವರಂತೆ ಸಾಧನೆ ಮಾಡಿ ದೇಶದ ಅಭಿವೃದ್ದಿಯಲ್ಲಿ ಭಾಗಿಯಾಗಬೇಕು

ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ಜಯಂತಿ

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಾ.ಬಾಬು ಜಗಜೀವನ್ ರಾಂ ರವರ 119 ನೇ ಜಯಂತಿಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. -

Profile
Ashok Nayak Apr 5, 2026 10:13 PM

ಗುಡಿಬಂಡೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಾ.ಬಾಬು ಜಗಜೀವನ್ ರಾಂ ರವರ 119 ನೇ ಜಯಂತಿ ಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರೆಸ್ ಸುಬ್ಬರಾಯಪ್ಪ ಸ್ವಾತಂತ್ರ್ಯ ಹೋರಾಟಗಾರ, ದೇಶದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಕಾರ್ಮಿಕರ ಕಲ್ಯಾಣಕ್ಕಾಗಿ ದುಡಿದ ಮಹನೀಯ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲನೆ ಮಾಡಬೇಕು. ಅವರ ಆದರ್ಶಗಳು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಬೇಕು.

ಶಾಲಾ ಹಂತದಲ್ಲಿಯೇ ಅವರು ಅಸ್ಪೃಶ್ಯತೆಯ ಬಗ್ಗೆ ಹೊರಾಡಿ ದಂತಹವರು. ಜಗಜೀವನ ರಾಂ ರವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಲ್ಲ. ಎಲ್ಲಾ ಸಮುದಾಯಗಳಿಗೂ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಿದಂತವರು. ಅವರನ್ನು ಪ್ರತಿಯೊಬ್ಬರು ನೆನಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಪಂ ಇಒ ನಾಗಮಣಿ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರ ಧೀಮಂತ ನಾಯಕ ದಿ. ಡಾ. ಬಾಬು  ಜಗಜೀವನ್ ರಾಮ್ ಅವರ ಆದರ್ಶಗಳನ್ನು ತಮ್ಮ ವ್ಯಕ್ತಿತ್ವದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಒಳ್ಳೆಯ ಪ್ರಜೆಗಳಾಗಿ ಅವರಂತೆ ದೇಶಕ್ಕೆ ದೊಡ್ಡ ಕೊಡುಗೆ ನೀಡಬೇಕು. ವಿದ್ಯಾರ್ಥಿಗಳು ಅವರಂತೆ ಸಾಧನೆ ಮಾಡಿ ದೇಶದ ಅಭಿವೃದ್ದಿಯಲ್ಲಿ ಭಾಗಿಯಾಗಬೇಕು ಎಂದರು.

ಇದೇ ಸಮಯದಲ್ಲಿ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಲಾಯಿತು. ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಲಕ್ಷ್ಮೀಪತಿರೆಡ್ಡಿ, ಬಿಇಒ ಕೃಷ್ಣಕುಮಾರಿ, ಪಪಂ ಮುಖ್ಯಾಧಿಕಾರಿ ಆರತಿ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ಬಿ.ಆರ್‍.ಸಿ ಸಂಯೋಜಕ ರಾಘವೇಂದ್ರ, ಶಿಕ್ಷಕರ ಸಂಘದ ಶ್ರೀರಾಮಪ್ಪ, ರಾಜಶೇಖರ್ ಸೇರಿದಂತೆ ದಲಿತ ಮುಖಂಡರುಗಳು ಹಾಜರಿದ್ದರು.‌