ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಬಾಗೇಪಲ್ಲಿ ಲೋಕ್ ಅದಾಲತ್ ಯಶಸ್ವಿ: 788 ಪ್ರಕರಣಗಳ ರಾಜಿ ಮೂಲಕ ಇತ್ಯರ್ಥ

ಪಟ್ಟಣದ ಜೆ.ಎಂ.ಎಫ್.ಸಿ. ನ್ಯಾಯಾ ಲಯದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ನಡೆದ ವಿಶೇಷ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೈಗೆತ್ತಿ ಕೊಂಡ ೧೨೮೮ ಪ್ರಕರಣಗಳಲ್ಲಿ ೭೮೮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿ ೧೭,೧೨,೨೯೪ ರೂ ಇತ್ಯರ್ಥ ಪಡಿಸಲಾಯಿತು

ಬಾಗೇಪಲ್ಲಿ ಲೋಕ್ ಅದಾಲತ್ ಯಶಸ್ವಿ

ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ ಬಾಗೇಪಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಹಕಾರದೊಂದಿಗೆ ಲೋಕ್ ಅದಾಲತ್ ಯಶಸ್ವಿಗೊಳಿಸಲಾಯಿತು.

Profile Ashok Nayak Jul 12, 2025 11:31 PM

ಬಾಗೇಪಲ್ಲಿ: ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ ಬಾಗೇಪಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಹಕಾರದೊಂದಿಗೆ ಲೋಕ್ ಅದಾಲತ್ ಇಂದು ಯಶಸ್ವಿಗೊಳಿಸಲಾಯಿತು ಎಂದು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಜೆ.ಎಂ.ಎಫ್.ಸಿ ನ್ಯಾಯಾಧೀಶ ಮಂಜುನಾಥಾಚಾರಿ ತಿಳಿಸಿದರು.

ಇಂದು ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಲೋಕ್ ಅದಾಲತ್ ನಲ್ಲಿ ಪತ್ರಕರ್ತರೊಂದಿಗೆ ಮಾಹಿತಿ ಹಂಚಿಕೊಂಡು ಮಾತನಾಡಿ, ಪಟ್ಟಣದ ಜೆ.ಎಂ.ಎಫ್. ಸಿ. ನ್ಯಾಯಾ ಲಯದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ವಕೀಲರ ಸಂಘದ ಸಹಯೋಗ ದಲ್ಲಿ ನಡೆದ ವಿಶೇಷ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೈಗೆತ್ತಿಕೊಂಡ ೧೨೮೮ ಪ್ರಕರಣಗಳಲ್ಲಿ ೭೮೮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿ ? ೧೭,೧೨,೨೯೪ ರೂ. ಇತ್ಯರ್ಥಪಡಿಸ ಲಾಯಿತು ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ಕಾಯ್ದೆಗಳು ಕಾರ್ಮಿಕರ ಬದುಕನ್ನು ದುಸ್ತರಗೊಳಿಸುತ್ತದೆ: ಜಿ.ಸಿದ್ದಗಂಗಪ್ಪ

ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿದ್ದ ವಿವಿಧ ರೀತಿಯ ಬಾಕಿ ಇದ್ದ ಹಾಲಿ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು.

ಈ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕೆ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳ ಪ್ರಕರಣಗಳ ವಿಚಾರಣೆ ನಡೆಸಲಾಯಿತು.

bage

ಲೋಕ ಅದಾಲತ್‌ನ ಮುಖ್ಯ ಉದ್ದೇಶವೆಂದರೆ, ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ನ್ಯಾಯ ಒದಗಿಸುವುದು ಮತ್ತು ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸಹಾಯ ಮಾಡು ವುದು. ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಹಣ ಮತ್ತು ಸಮಯ ಉಳಿತಾಯವಾಗುತ್ತದೆ.

ಕಕ್ಷಿದಾರರು ಬಹಳ ವರ್ಷ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ’ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಮಂಜುನಾಥ, ಉಪಾಧ್ಯಕ್ಷ ಸಿ.ರವಿ, ಕಾರ್ಯದರ್ಶಿ ಜಯಪ್ಪ, ಖಜಾಂಚಿ ಬಿಂದೂ ಕುಮಾರಿ, ಹಿರಿಯ ವಕೀಲರಾದ ನರಸಿಂಹ ರೆಡ್ಡಿ, ವಕೀಲರಾದ ಶ್ರೀನಿವಾಸ್, ಬಾಲೂ ನಾಯಕ್ ಹಾಗೂ ಸಾರ್ವಜನಿಕರು ಹಾಜರಿದ್ದರು.