ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gauribidanur News: ಬಿಸಲಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬ್ಯಾಂಡ್‌ಸೆಟ್ ವಿತರಣೆ

ವಿದ್ಯಾರ್ಥಿಗಳ ಸರ್ವಾಂಗೀಣ ಕಲಿಕೆಗೆ ಸರ್ಕಾರದ ಜೊತೆಗೆ ಸ್ಥಳೀಯ ಗ್ರಾ.ಪಂ, ನಾಗರೀಕರು ಹಾಗೂ ಖಾಸಗೀ ಸಂಸ್ಥೆಗಳು ಕೈಜೋಡಿಸುವುದು ಅನಿವಾರ್ಯವಾಗಿದೆ. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ನಿಜವಾದ ಜ್ಞಾನ ದೇಗುಲಗಳಾಗಿರುವ ಸರ್ಕಾರಿ ಶಾಲೆಗಳಿಗೆ ಅಗತ್ಯ ಸಹಕಾರ ನೀಡಿದಲ್ಲಿ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಸಾಧ್ಯವಾಗುತ್ತದೆ

ಬಿಸಲಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬ್ಯಾಂಡ್‌ಸೆಟ್ ವಿತರಣೆ

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸುಪ್ತವಾದ ಪ್ರತಿಭೆಯಿದ್ದು, ಅದನ್ನು ಗುರ್ತಿಸಿ ಪ್ರೋತ್ಸಾಹ ನೀಡುವ ಜತೆಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಿದಲ್ಲಿ ಸಮಾಜದಲ್ಲಿ ಸಾಧಕರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಗ್ರಾ.ಪಂ ಅಧ್ಯಕ್ಷೆ ನಾಗರತ್ನಮ್ಮ ತಿಳಿಸಿದರು.

Ashok Nayak Ashok Nayak Aug 19, 2025 10:44 PM

ಗೌರಿಬಿದನೂರು : ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸುಪ್ತವಾದ ಪ್ರತಿಭೆಯಿದ್ದು, ಅದನ್ನು ಗುರ್ತಿಸಿ ಪ್ರೋತ್ಸಾಹ ನೀಡುವ ಜತೆಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಿದಲ್ಲಿ ಸಮಾಜ ದಲ್ಲಿ ಸಾಧಕರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಗ್ರಾ.ಪಂ ಅಧ್ಯಕ್ಷೆ ನಾಗರತ್ನಮ್ಮ ತಿಳಿಸಿದರು.

ತಾಲ್ಲೂಕಿನ ಬಿಸಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ದ್ವಿತೀಯ ಮಾಧ್ಯಮ (ಕನ್ನಡ ಮತ್ತು ಆಂಗ್ಲ) ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಮಂಗಳವಾರ ಬ್ಯಾಂಡ್ ಸೆಟ್ ಗಳನ್ನು ವಿತರಣೆ ಮಾಡಿ ಮಾತನಾಡಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಕಲಿಕೆಗೆ ಸರ್ಕಾರದ ಜೊತೆಗೆ ಸ್ಥಳೀಯ ಗ್ರಾ.ಪಂ, ನಾಗರೀಕರು ಹಾಗೂ ಖಾಸಗೀ ಸಂಸ್ಥೆಗಳು ಕೈಜೋಡಿಸುವುದು ಅನಿವಾರ್ಯವಾಗಿದೆ. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ನಿಜವಾದ ಜ್ಞಾನ ದೇಗುಲಗಳಾಗಿರುವ ಸರ್ಕಾರಿ ಶಾಲೆಗಳಿಗೆ ಅಗತ್ಯ ಸಹಕಾರ ನೀಡಿದಲ್ಲಿ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: India-China Trade: ಭಾರತ- ಚೀನಾ ವ್ಯಾಪಾರ ಮತ್ತೆ ಪುನರಾರಂಭ; ರಸಗೊಬ್ಬರ, ಸುರಂಗ ಯಂತ್ರ ರಫ್ತಿಗೆ ಡ್ರಾಗನ್‌ ರಾಷ್ಟ್ರ ಒಪ್ಪಿಗೆ

ಶಾಲೆಯ ಮುಖ್ಯ ಶಿಕ್ಷಕಿ ಬಿ.ಜಿ.ಲತಾ ಮಾತನಾಡಿ, ಸರ್ಕಾರಿ ಶಾಲೆಗಳು ಗ್ರಾಮೀಣ ಭಾಗದ ಪೋಷಕ ರಿಗೆ ವರದಾನವಾಗಿವೆ. ಅಗತ್ಯ ಸೌಲಭ್ಯಗಳ ಜೊತೆಗೆ ನುರಿತ ಶಿಕ್ಷಕರಿಂದ ಗುಣಮಟ್ಟದ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಕಲಿಸುವ ಪ್ರಾಮಾಣಿಕ ಪ್ರಯತ್ನ ನಡೆಯುತ್ತದೆ. ಜೊತೆಗೆ ಸ್ಥಳೀಯ ಗ್ರಾ.ಪಂ, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಸAಸ್ಥೆಗಳು ಸಾಕಷ್ಟು ನೆರ ವನ್ನು ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಬೆನ್ನೆಲುಬಾಗಿ ಶ್ರಮಿಸುತ್ತಾರೆ. ಪೋಷಕರು ಸರ್ಕಾರಿ ಶಾಲೆಯಲ್ಲಿನ ಶಿಕ್ಷಣದ ಗುಣಮಟ್ಟ ಮತ್ತು ಮೂಲಭೂತ ಸೌಲಭ್ಯಗಳನ್ನು ಅವಲೋಕನ ಮಾಡಿ ತಮ್ಮ ಮಕ್ಕಳನ್ನು ತಪ್ಪದೆ ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ವಿದ್ಯಾರ್ಥಿಗಳ ಕಲೆ, ಸಾಹಿತ್ಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾಂಡ್ ಸೆಟ್ ವಿತರಣೆ ಮಾಡಿದ ದಾನಿಗಳಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಈ ವೇಳೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ನರಸಿಂಹಮೂರ್ತಿ, ಉಪಾಧ್ಯಕ್ಷೆ ರೂಪ, ಗ್ರಾ.ಪಂ ಸದಸ್ಯ ರಾದ ಮೈಲಾರಿ, ಪೋಷಕರಾದ ಮೈಲಾರಪ್ಪ ಶಿಕ್ಷಕರಾದ ಸುಶೀಲಮ್ಮ, ಜಿ.ಯಶೋಧ, ಎಚ್.ಎಸ್.ವಾಸುದೇವಚಾರಿ ಸೇರಿದಂತೆ ಇತರರು ಭಾಗವಹಿಸಿದ್ದರು.