Chikkaballapur News: 'ಬೇಡ ಬ್ರೋ–ರೈಸ್ ಕರ್ನಾಟಕ' ಜಾಗೃತಿ ಜಾಥಾ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯ ಕರೆ
ಜಾಗೃತಿ ಅಭಿಯಾನದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕ್ಯೂಆರ್ ಕೋಡ್ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಸ್ಕ್ಯಾನ್ ಮಾಡುವ ಮೂಲಕ ನಾಗರಿಕರು ತಮ್ಮ ಸುತ್ತಮುತ್ತ ನಡೆಯುವ ಮಾದಕ ವಸ್ತುಗಳ ಮಾರಾಟ, ಬಳಕೆ ಹಾಗೂ ಇತರೆ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದಾಗಿದೆ
-
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ನಿರ್ದೇಶನದಂತೆ ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ 'ಬೇಡ ಬ್ರೋ–ರೈಸ್ ಕರ್ನಾಟಕ' ಧ್ಯೇಯವಾಕ್ಯದಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ(District Superintendent of Police Kushal Chowkse) ಹೇಳಿದರು.
ಇದನ್ನೂ ಓದಿ: Chikkaballapur News: ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದ ಸಂದೀಪ್ ರೆಡ್ಡಿ
ನಗರದ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದ ಎದುರು ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಸಾಗಾಟ ತಡೆಗಟ್ಟಲು ಪೊಲೀಸ್ ಇಲಾಖೆ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ, ನೂರಾರು ಪೊಲೀಸ್ ಸಿಬ್ಬಂದಿ ಭಾಗವಹಿಸಿದ ಬೈಕ್ ರ‍್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.
ಜಾಗೃತಿ ಅಭಿಯಾನದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕ್ಯೂಆರ್ ಕೋಡ್ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಸ್ಕ್ಯಾನ್ ಮಾಡುವ ಮೂಲಕ ನಾಗರಿಕರು ತಮ್ಮ ಸುತ್ತಮುತ್ತ ನಡೆಯುವ ಮಾದಕ ವಸ್ತುಗಳ ಮಾರಾಟ, ಬಳಕೆ ಹಾಗೂ ಇತರೆ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.
ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಪೊಲೀಸ್ ಇಲಾಖೆಯೊಂದಿಗೆ ಜನತೆ ಕೈಜೋಡಿಸಿದರೆ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿ ಯಾಗಿ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.
![]()
"ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಶಾಲೆ ಮತ್ತು ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳು ಹಾಗೂ ಬೀದಿ ನಾಟಕಗಳನ್ನು ಆಯೋಜಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಕ್ಯೂಆರ್ ಕೋಡ್‌ಗಳ ಮೂಲಕ ನಾಗರಿಕರು ಮಾದಕ ವಸ್ತುಗಳ ಮಾರಾಟ, ಗಾಂಜಾ ಬಳಕೆ ಸೇರಿದಂತೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ಗೌಪ್ಯವಾಗಿ ಮಾಹಿತಿ ನೀಡಬಹುದು."
– ಕುಶಾಲ್ ಚೌಕ್ಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ