ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಎಸ್‌ಡಿಎಂಸಿ ಸಮಿತಿ, ಅಧ್ಯಕ್ಷರು ಹಾಗೂ ಪಿ.ಎಂ.ಶ್ರೀ ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಇಂತಹ ಶಾಲೆಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿದರೆ ಮತ್ತಷ್ಟು ಅಭಿವೃದ್ಧಿಗೆ ಹಾಗೂ ಇತರ ಶಾಲೆಗಳ ಅಭಿವೃದ್ಧಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಈ ಯೋಜನೆ ರೂಪಿಸಿದೆ

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

-

Ashok Nayak
Ashok Nayak Mar 7, 2026 11:42 PM

ಬಾಗೇಪಲ್ಲಿ: ಅತ್ಯುತ್ತಮ ಎಸ್ ಡಿ ಎಂಸಿ ಪ್ರಶಸ್ತಿಗೆ ಬಾಗೇಪಲ್ಲಿ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯವೈಖರಿಯನ್ನು ಪರಿಗಣಿಸಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುವ ನೀಡುವ ಅತ್ಯುತ್ತಮ ಪ್ರಶಸ್ತಿ ಇದಾಗಿದೆ.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರಶಸ್ತಿ ಪತ್ರ ಹಾಗೂ 75 ಸಾವಿರ ಚೆಕ್ ವಿತರಣೆ ಮಾಡಿ ಮಾತನಾಡಿ, ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷ ಕಾಳಜಿ ವಹಿಸುವ ಮೂಲಕ  ಎಸ್‌ಡಿಎಂಸಿ ಸಮಿತಿ , ಅಧ್ಯಕ್ಷರು ಹಾಗೂ ಪಿ.ಎಂ.ಶ್ರೀ ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಇಂತಹ ಶಾಲೆಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿದರೆ ಮತ್ತಷ್ಟು ಅಭಿವೃದ್ಧಿಗೆ ಹಾಗೂ ಇತರ ಶಾಲೆಗಳ ಅಭಿವೃದ್ಧಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಈ ಯೋಜನೆ ರೂಪಿಸಿದೆ ಎಂದು ಹೇಳಿದರು.

ಇದನ್ನೂ ಓದಿ: Bagepally News: ಶ್ರದ್ಧಾಭಕ್ತಿಯಿಂದ ನಡೆದ ಐತಿಹಾಸಿಕ ಮಿಟ್ಟೇಮರಿ ಪ್ರಸಿದ್ಧ ಗರುಡಾದ್ರಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಲಕ್ಷ ರೂ. ನಗದು ಬಹುಮಾನ  
ಉತ್ತಮ ಎಸ್‌ಡಿಎಂಸಿ ಪ್ರಶಸ್ತಿಯು ಮೂರು ಶಾಲೆಗಳ ವಿಭಾಗದಲ್ಲಿ ನಗದು ಬಹುಮಾನ ವನ್ನು ಒಳಗೊಂಡಿದೆ. ಪ್ರತಿ ತಾಲೂಕಿನಲ್ಲಿ 1 ಪ್ರಾಥಮಿಕ ಶಾಲೆಗೆ 50000 ರೂ., ಹಿರಿಯ ಪ್ರಾಥಮಿಕ ಶಾಲೆಗೆ 75000 ರೂ. ಹಾಗೂ ಪ್ರೌಢಶಾಲೆಗೆ 1 ಲಕ್ಷ ರೂ. ಅನುದಾನದ ರೂಪ ದಲ್ಲಿ ಬಹುಮಾನ ಸಿಗಲಿದೆ. ಎಸ್‌ಡಿಎಂಸಿ ಖಾತೆಗೆ ಹಣ ಜಮೆಯಾಗಲಿದ್ದು, ಇದನ್ನು ಶಾಲೆಯ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಬಿಇಓ ಎನ್. ವೆಂಕಟೇಶಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಆರ್.ವೆಂಕಟರಾಮ್, ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ, ಎಸ್.ಡಿ.ಎಂ.ಸಿ.ಅಧ್ಯಕ್ಷೆ ಉಷಾ ರಾಣಿ, ಹಿರಿಯ ಶಿಕ್ಷಕಿ ಧರ್ಮಪುತ್ರಿ, ಶಿಕ್ಷಕ ವೈ. ಮಂಜುನಾಥ್
ನೋಡಲ್ ಅಧಿಕಾರಿಗಳಾದ ಪಿ.ಎನ್.ನಾರಾಯಣ ಸ್ವಾಮಿ, ಶಿವಪ್ಪ ಹಾಗೂ ಇತರರು ಹಾಜರಿದ್ದರು.