Matru Bhojana: ಸಂವಿಧಾನದ ಪೀಠಿಕೆಗೆ ಜೀವ ತುಂಬಿದ ಬಿಜಿಎಸ್ ಆಂಗ್ಲ ಶಾಲೆಯ‘ಮಾತೃ ಭೋಜನ’ ಎಂಬ ದಾಸೋಹ ಕಾರ್ಯಕ್ರಮ
ಅನ್ನ ಸಾಂಬರ್, ಪಾಯಸದಿಂದ ಮೊದಲಾಗಿ ತರಕಾರಿ ಪಲಾವ್, ಕೇಸರಿ ಬಾತ್, ಉಪ್ಪಿಟ್ಟು, ಚಿತ್ರಾನ್ನ, ಮೊಸರನ್ನ, ಅನ್ನ ಸಾಂಬಾರ್, ವಡೆ,ಹಪ್ಪಳ, ಹೋಳಿಗೆ, ಡ್ರೆöÊ ಜಾಮೂನು, ಹೆಸರು ಬೇಳೆ, ಮೊಸರು ಬಜ್ಜಿ, ಸಂಡಿಗೆ, ಉಪ್ಪಿಟ್ಟು, ಮೊಸರನ್ನ, ಪೂರಿ ಸಾಗು, ತರಹೆವಾರಿ ಪಲ್ಯಗಳು. ಹೀಗೆ ನಮ ನಮೂನೆಯ ನಳಪಾಕ ಪ್ರಪಂಚವೇ ಅಲ್ಲಿತ್ತು. ಎಲ್ಲವನ್ನೂ ಕೂಡ ಶಿಸ್ತುಬದ್ದವಾಗಿ ಮಕ್ಕಳಿಗೆ ಉಣಬಡಿಸಿ ತಾಯಿ ಪ್ರೀತಿಯನ್ನು ಬಹುರಂಗವಾಗಿ ತೋರ್ಪಡಿಸಿದರು
-
ಚುಂಚಶ್ರೀಗಳ ಉಪಸ್ಥಿತಿಯಲ್ಲಿ ಸರ್ವಧರ್ಮ ಸಮನ್ವಯಕ್ಕೆ ಹೊಸ ಭಾಷ್ಯ ಬರೆದ ನೂತನ ವರ್ಷದ ಕಾರ್ಯಕ್ರಮ ಅಮ್ಮಾಸ್ ಕೇರ್ ಇನ್ ಎವೆರಿ ಮೀಲ್
ಚಿಕ್ಕಬಳ್ಳಾಪುರ: ಚುಂಚಶ್ರೀಗಳ ಉಪಸ್ಥಿತಿಯಲ್ಲಿ ಸರ್ವಧರ್ಮ ಸಮನ್ವಯಕ್ಕೆ ಹೊಸ ಭಾಷ್ಯ ಬರೆದಂತಿದ್ದ ನೂತನ ವರ್ಷದ ಚೊಚ್ಚಲ ಕಾರ್ಯಕ್ರಮ " ಮಾತೃಭೋಜನ " ಅಮ್ಮಾಸ್ ಕೇರ್ ಇನ್ ಎವೆರಿ ಮೀಲ್ ಎಂಬುದು ಅಕ್ಷರಶಃ ಸಂವಿಧಾನದ ಪೀಠಿಕೆಗೆ ಜೀವ ತುಂಬುವ ಸಲುವಾಗಿಯೇ ನಡೆದ ಕಾರ್ಯಕ್ರಮದಂತೆ ಭಾಸವಾಯಿತು.
ನಗರ ಹೊರವಲಯ ಅಗಲಗುರ್ಕಿ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ಆಯೋಜಿಸಿದ್ದ ‘ಮಾತೃ ಭೋಜನ’ದಲ್ಲಿ ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳು ಪೋಷಕರು ಐಕ್ಯತೆಯ ಸಂದೇಶವನ್ನು ಜಗತ್ತಿಗೆ ಸಾರಿದರು. ಭಿನ್ನಬೇದಗಳನ್ನು ಮರೆತು ಎಲ್ಲಾ ವಿದ್ಯಾರ್ಥಿಗಳು ತಾಯಂದಿರ ಕೈ ತುತ್ತು ಸವಿದು ಸಂಭ್ರಮಿಸಿದರು.
2026ರ ಮೊದಲ ಶನಿವಾರ ನಡೆದ ಮಾತೃಭೋಜನ ಕಾರ್ಯಕ್ರಮಕ್ಕಾಗಿಯೇ ವಾರದಿಂದಲೇ ಅಮ್ಮಂದಿರು ತಮ್ಮ ಮಕ್ಕಳಿಗಾಗಿ ತರಹೆವಾರಿ ಆಹಾರವನ್ನು ಮಾಡುವ ಬಗ್ಗೆ ಕನಸು ಕಂಡಿದ್ದು ಅದನ್ನು ಇಂದು ನನಸು ಮಾಡಿ ಮಕ್ಕಳಿಗೆ ಉಣಬಡಿಸುವ ಮೂಲಕ ನಿರಾಳರಾದರು.
ಅನ್ನ ಸಾಂಬರ್, ಪಾಯಸದಿಂದ ಮೊದಲಾಗಿ ತರಕಾರಿ ಪಲಾವ್, ಕೇಸರಿ ಬಾತ್, ಉಪ್ಪಿಟ್ಟು, ಚಿತ್ರಾನ್ನ, ಮೊಸರನ್ನ, ಅನ್ನ ಸಾಂಬಾರ್, ವಡೆ,ಹಪ್ಪಳ, ಹೋಳಿಗೆ, ಡ್ರೆöÊ ಜಾಮೂನು, ಹೆಸರು ಬೇಳೆ, ಮೊಸರು ಬಜ್ಜಿ, ಸಂಡಿಗೆ, ಉಪ್ಪಿಟ್ಟು, ಮೊಸರನ್ನ, ಪೂರಿ ಸಾಗು, ತರಹೆವಾರಿ ಪಲ್ಯಗಳು. ಹೀಗೆ ನಮ ನಮೂನೆಯ ನಳಪಾಕ ಪ್ರಪಂಚವೇ ಅಲ್ಲಿತ್ತು. ಎಲ್ಲವನ್ನೂ ಕೂಡ ಶಿಸ್ತುಬದ್ದವಾಗಿ ಮಕ್ಕಳಿಗೆ ಉಣಬಡಿಸಿ ತಾಯಿ ಪ್ರೀತಿಯನ್ನು ಬಹುರಂಗವಾಗಿ ತೋರ್ಪಡಿಸಿದರು. ಇಡೀ ಸನ್ನಿವೇಶ ಹಬ್ಬದ ವಾತಾವರಣದಂತೆ ಭಾಸವಾಯಿತು. ಅವರಿವರೆನ್ನದೆ ಎಲ್ಲರೂ ಬಡಿಸಿದ ಊಟವನ್ನು ಸವಿದ ಮಕ್ಕಳ ಮೊಗದಲ್ಲಿ ಸಂತಸ ಮನೆ ಮಾಡಿದ್ದರೆ, ಊಣ ಬಡಿಸಿದ ತಾಯಂದಿರಲ್ಲಿ ಧನ್ಯತೆಯ ಭಾವ ಕಂಡುಬಂತು.
ಆದಿಚುಂಚನಗಿರಿ ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಮಕ್ಕಳಿಗೆ ಊಟ ಬಡಿಸುವ ಮೂಲಕ ಮಾತೃಭೋಜನಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಮಕ್ಕಳಿಗೆ ಮಾತೃ ಪ್ರೇಮದ ಸವಿತುತ್ತು ಉಣಿಸುವ ಈ ಕಾರ್ಯಕ್ರಮ ತುಂಬಾ ವಿಶಿಷ್ಟ್ಯವಾಗಿದೆ. ನಮ್ಮ ಸಂಸ್ಕತಿಯಲ್ಲಿನ ತಾಯಿ ಮಕ್ಕಳ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಅಗತ್ಯವಿದೆ’ ಎಂದು ಹೇಳಿದರು.
ಇದನ್ನೂ ಓದಿ: Chikkaballapur New: ಜಲಮೂಲಗಳಿಗೆ ಸಂಸ್ಕರಿಸದ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಎಚ್ಚರಿಕೆ
‘ಪ್ರತಿ ಮನೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಪ್ರತಿಯೊಬ್ಬರ ಆರೋಗ್ಯ ಕಾಪಾಡುವಲ್ಲಿ ನಿತ್ಯವೂ ತಾಯಿಯಾದವಳು ಶ್ರಮಿಸುತ್ತಾಳೆ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ದುಡಿಯುತ್ತಾಳೆ. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಲು ಹೋರಾಟ ಮಾಡುತ್ತಾಳೆ. ತಾಯಿಯು ಸರಿಯಾದ ಗಮನವನ್ನು ಮಕ್ಕಳ ಕಡೆ ಹರಿಸಿದರೆ ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ. ಕೆಟ್ಟವರಾಗುತ್ತಾರೆ’ ಎಂದು ತಿಳಿಸಿದರು.
‘ಮಕ್ಕಳ ಬೆಳವಣಿಗೆಯಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಸಮಾನವಾಗಿ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಕಾರಣಕ್ಕೂ ಪೋಷಕರು ಮಕ್ಕಳ ಮುಂದೆ ಜಗಳವಾಡಬಾರದು.
ಇಂದು ಎಲ್ಲಾ ತಾಯಂದಿರು ವೈವಿಧ್ಯಮಯ ಹಾಗೂ ರುಚಿಕರವಾದ ಅಡಿಗೆ ಮಾಡಿಕೊಂಡು ಜಾತಿ, ಮತ ಭೇದ ಬದಿಗಿಟ್ಟು ಶಾಲೆಯ ಮಕ್ಕಳಿಗೆ ಕೈತುತ್ತು ನೀಡಿ, ಊಟ ಮಾಡಿಸಿ ಜಾತ್ಯಾತಿತೆಯನ್ನು ಎತ್ತಿಹಿಡಿದಿದ್ದಾರೆ. ಇದೇ ಮಾತೃಭೋಜನದ ಬಹುಮುಖ್ಯ ಆಶಯ’ ಎಂದರು.
ಬಿಜಿಎಸ್ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ ಮಾತನಾಡಿ, ‘ಎಲ್ಲಾ ಶಾಲೆಗಳಂತೆ ನಮ್ಮ ಶಾಲೆ ಕೇವಲ ಅಂಕಪಟ್ಟಿ ವಿತರಿಸುವ ಸಂಸ್ಥೆಯಾಗಿಲ್ಲ. ನಾವು ಮಕ್ಕಳಿಗೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಹಾಗೂ ಸ್ವ-ಕೌಶಲದಿಂದ ಜೀವನವನ್ನು ಅತ್ಯಂತ ಸುಂದರವಾಗಿ ನಡೆಸುವ ವೈವಿಧ್ಯಮಯ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುತ್ತಿದ್ದೇವೆ. ಪ್ರತಿಯೊಬ್ಬ ಮಗುವಿನ ಜೀವನ ರೂಪಿಸುವಲ್ಲಿ, ಶೈಕ್ಷಣಿಕ ಅಭಿವೃದ್ಧಿಯಲ್ಲಿ ಬಿಜಿಎಸ್ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ’ ಎಂದು ಹೇಳಿದರು.
ಬೆಂಗಳೂರಿನ ಖ್ಯಾತ ಉದ್ಯಮಿ ಪದ್ಮಶ್ರೀ ಪ್ರಶಾಂತ್ ಪ್ರಕಾಶ್ ಮಾತನಾಡಿ, ‘ಮಕ್ಕಳಿಗೆ ಮಾತೃ ಪ್ರೇಮದ ಸವಿತುತ್ತು ಉಣಿಸುವ ಈ ಕಾರ್ಯಕ್ರಮ ತುಂಬಾ ವೈಶಿಷ್ಟ್ಯವಾಗಿದೆ. ನಮ್ಮ ಸಂಸ್ಕೃತಿ ಯಲ್ಲಿನ ತಾಯಿ ಮಕ್ಕಳ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಗಳು ಹೆಚ್ಚೆಚ್ಚು ನಡೆಯುವ ಅಗತ್ಯವಿದೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ಅತಿಥಿಗಳೊಂದಿಗೆ ಪಂಕ್ತಿ ಭೋಜನ ಮಾಡಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ, ಅಮಿತ ಪ್ರಶಾಂತ್ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುಕನ್ಯಾ, ಕೃಷ್ಣಕುಮಾರಿ, ಪ್ರಾಂಶುಪಾಲ ಡಿ.ಸಿ ಮೋಹನ್ ಕುಮಾರ್, ಬಿಜಿಎಸ್ ಪಿಯು ಕಾಲೇಜುಗಳ ಡೀನ್ ಮಧುಸೂದನ್, ಪ್ರಾಂಶುಪಾಲ ರಮೇಶ್, ನಿಲಯ ಪಾಲಕ ರಾಜು, ಶಿಕ್ಷಕರಾದ ಗೋಪಾಲಕೃಷ್ಣ, ಮಾನಸಿ, ಕ್ಯಾತಪ್ಪ, ಶಾಲೆಯ ಭೋಧಕ,ಭೋಧಕೇತರ ಸಿಬ್ಬಂಧಿ, ವಿದ್ಯಾರ್ಥಿಗಳು, ಪೋಷಕರು ಇದ್ದರು.
ನಗರದ ಹೊರವಲಯದ ಅಗಲಗುರ್ಕಿ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ‘ಮಾತೃ ಭೋಜನ’ದಲ್ಲಿ ಜಾತಿ, ಭೇದ ಮರೆತು ವಿದ್ಯಾರ್ಥಿಗಳು ತಾಯಂದಿರ ಕೈ ತುತ್ತು ಸವಿದು ಸಂಭ್ರಮಿಸಿದರು.
ಮಕ್ಕಳಿಗಾಗಿ ಪೋಷಕರು ತರಕಾರಿ ಪಲಾವ್, ಕೇಸರಿ ಬಾತ್, ಉಪ್ಪಿಟ್ಟು, ಚಿತ್ರಾನ್ನ, ಮೊಸರನ್ನ, ಅನ್ನ ಸಾಂಬಾರ್ ಸೇರಿದಂತೆ ವಿವಿಧ ಬಗೆಯ ಅಡುಗೆ ಸಿದ್ಧಪಡಿಸಿಕೊಂಡು ಬಂದಿದ್ದರು. ಅವರಿವರೆನ್ನದೆ ಎಲ್ಲರೂ ಬಡಿಸಿದ ಊಟವನ್ನು ಸವಿದ ಮಕ್ಕಳ ಮೊಗದಲ್ಲಿ ಸಂತಸ ಮನೆ ಮಾಡಿದರೆ, ಊಣ ಬಡಿಸಿದ ತಾಯಂದಿರಲ್ಲಿ ಧನ್ಯತೆಯ ಭಾವ ಕಂಡುಬಂತು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಮಕ್ಕಳಿಗೆ ಊಟ ಬಡಿಸುವ ಮೂಲಕ ಮಾತೃಭೋಜನಕ್ಕೆ ಚಾಲನೆ ನೀಡಿ ಮಾತನಾಡಿ, ‘ಮಕ್ಕಳಿಗೆ ಮಾತೃ ಪ್ರೇಮದ ಸವಿತುತ್ತು ಉಣಿಸುವ ಈ ಕಾರ್ಯಕ್ರಮ ತುಂಬಾ ವೈಶಿಷ್ಟ್ಯವಾಗಿದೆ. ನಮ್ಮ ಸಂಸ್ಕೃತಿ ಯಲ್ಲಿನ ತಾಯಿ ಮಕ್ಕಳ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಗಳು ಹೆಚ್ಚೆಚ್ಚು ನಡೆಯುವ ಅಗತ್ಯವಿದೆ’ ಎಂದು ಹೇಳಿದರು.
‘ಪ್ರತಿ ಮನೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಪ್ರತಿಯೊಬ್ಬರ ಆರೋಗ್ಯ ಕಾಪಾಡುವಲ್ಲಿ ನಿತ್ಯವೂ ತಾಯಿಯಾದವಳು ಶ್ರಮಿಸುತ್ತಾಳೆ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ದುಡಿಯುತ್ತಾಳೆ. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಲು ಹೋರಾಟ ಮಾಡುತ್ತಾಳೆ. ತಾಯಿಯು ಸರಿಯಾದ ಗಮನವನ್ನು ಮಕ್ಕಳ ಕಡೆ ಹರಿಸಿದರೆ ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ. ಕೆಟ್ಟವರಾಗುತ್ತಾರೆ’ ಎಂದು ತಿಳಿಸಿದರು.
‘ಮಕ್ಕಳ ಬೆಳವಣಿಗೆಯಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಸಮಾನವಾಗಿ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಕಾರಣಕ್ಕೂ ಪೋಷಕರು ಮಕ್ಕಳ ಮುಂದೆ ಜಗಳವಾಡಬಾರದು.ಇಂದು ಎಲ್ಲಾ ತಾಯಂದಿರು ವೈವಿಧ್ಯಮಯ ಹಾಗೂ ರುಚಿಕರವಾದ ಅಡಿಗೆ ಮಾಡಿಕೊಂಡು ಜಾತಿ, ಮತ ಭೇದ ಬದಿಗಿಟ್ಟು ಶಾಲೆಯ ಮಕ್ಕಳಿಗೆ ಕೈತುತ್ತು ನೀಡಿ, ಊಟ ಮಾಡಿಸಿ ಜಾತ್ಯಾತಿತೆಯನ್ನು ಎತ್ತಿ ಹಿಡಿದಿ ದ್ದಾರೆ. ಇದೇ ಮಾತೃಭೋಜನದ ಬಹುಮುಖ್ಯ ಆಶಯ’ ಎಂದರು.
ಬಿಜಿಎಸ್ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ ಮಾತನಾಡಿ, ‘ಎಲ್ಲಾ ಶಾಲೆಗಳಂತೆ ನಮ್ಮ ಶಾಲೆ ಕೇವಲ ಅಂಕಪಟ್ಟಿ ವಿತರಿಸುವ ಸಂಸ್ಥೆಯಾಗಿಲ್ಲ. ನಾವು ಮಕ್ಕಳಿಗೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಹಾಗೂ ಸ್ವ-ಕೌಶಲದಿಂದ ಜೀವನವನ್ನು ಅತ್ಯಂತ ಸುಂದರವಾಗಿ ನಡೆಸುವ ವೈವಿಧ್ಯಮಯ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುತ್ತಿದ್ದೇವೆ. ಪ್ರತಿಯೊಬ್ಬ ಮಗುವಿನ ಜೀವನ ರೂಪಿಸುವಲ್ಲಿ, ಶೈಕ್ಷಣಿಕ ಅಭಿವೃದ್ಧಿಯಲ್ಲಿ ಬಿಜಿಎಸ್ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ’ ಎಂದು ಹೇಳಿದರು.
ಬೆಂಗಳೂರಿನ ಖ್ಯಾತ ಉದ್ಯಮಿ ಪದ್ಮಶ್ರೀ ಪ್ರಶಾಂತ್ ಪ್ರಕಾಶ್ ಮಾತನಾಡಿ, ‘ಮಕ್ಕಳಿಗೆ ಮಾತೃ ಪ್ರೇಮದ ಸವಿತುತ್ತು ಉಣಿಸುವ ಈ ಕಾರ್ಯಕ್ರಮ ತುಂಬಾ ವೈಶಿಷ್ಟ್ಯವಾಗಿದೆ. ನಮ್ಮ ಸಂಸ್ಕೃತಿ ಯಲ್ಲಿನ ತಾಯಿ ಮಕ್ಕಳ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಗಳು ಹೆಚ್ಚೆಚ್ಚು ನಡೆಯುವ ಅಗತ್ಯವಿದೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ಅತಿಥಿಗಳೊಂದಿಗೆ ಪಂಕ್ತಿ ಭೋಜನ ಮಾಡಿದರು. ವಿದ್ಯಾರ್ಥಿಗಳು ನಡೆಸಿ ಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡವು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ, ಅಮಿತ ಪ್ರಶಾಂತ್ ಪ್ರಕಾಶ್, ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸುಕನ್ಯಾ, ಕೃಷ್ಣಕುಮಾರಿ, ಪ್ರಾಂಶುಪಾಲ ಡಿ.ಸಿ ಮೋಹನ್ ಕುಮಾರ್, ಬಿಜಿಎಸ್ ಪಿಯು ಕಾಲೇಜುಗಳ ಡೀನ್ ಮಧುಸೂಧನ್, ಪ್ರಾಂಶುಪಾಲ ರಮೇಶ್, ನಿಲಯ ಪಾಲಕ ರಾಜು, ಶಿಕ್ಷಕರಾದ ಗೋಪಾಲಕೃಷ್ಣ, ಮಾನಸಿ, ಕ್ಯಾತಪ್ಪ, ಶಾಲೆಯ ಭೋಧಕ, ಭೋಧಕೇತರ ಸಿಬ್ಬಂಧಿ, ವಿದ್ಯಾರ್ಥಿಗಳು, ಪೋಷಕರು ಇದ್ದರು.