ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಡಿ.ಪಾಳ್ಯ, ನಗರಗೆರೆ ಹೋಬಳಿಯಲ್ಲಿ 1.90ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಸಮಗ್ರ ಗ್ರಾಮಗಳ ಅಭಿವೃದ್ಧಿಯ ಧ್ಯೇಯದೊಂದಿಗೆ ಪ್ರತಿ ಯೊಂದು ಗ್ರಾಮಕ್ಕೂ ಮೂಲಭೂತ ಸೌಕರ್ಯಗಳ ಒದಗಿಸುವುದು, ಅಲ್ಲಿನ ಸ್ಥಳೀಯ ಸಮಸ್ಯೆ ಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಕಾರ್ಯೋನ್ಮುಖವಾಗಿದೆ. ಹಲವು ಗ್ರಾಮ ಗಳಲ್ಲಿ ಈಗಾಗಲೇ ಅನೇಕ ಅಭಿವೃದ್ದಿಯ ಕಾಮಗಾರಿಗಳು ಚಾಲನೆಯಲ್ಲಿವೆ

ನಗರ ಗ್ರಾಮಾಂತರ ಪ್ರದೇಶಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ

ಗೌರಿಬಿದನೂರು ನಗರವೂ ಸೇರಿದಂತೆ ಗ್ರಾಮಾಂತರ ಪ್ರದೇಶಗಳ ಸಮಗ್ರ ಅಭಿವೃದ್ದಿಗೆ ಆಧ್ಯತೆ ನೀಡಲಾಗಿದ್ದು,ಈ ನಿಟ್ಟಿನಲ್ಲಿ ಈಗಾಗಲೇ ಹತ್ತು ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ಶಾಸಕ ಪುಟ್ಟಸ್ವಾಮಿಗೌಡ ತಿಳಿಸಿದರು.

Profile Ashok Nayak Feb 16, 2025 8:53 PM

ಗೌರಿಬಿದನೂರು: ಗೌರಿಬಿದನೂರು ನಗರವೂ ಸೇರಿದಂತೆ ಗ್ರಾಮಾಂತರ ಪ್ರದೇಶಗಳ ಸಮಗ್ರ ಅಭಿವೃದ್ದಿಗೆ ಆದ್ಯತೆ ನೀಡಲಾಗಿದ್ದು,ಈ ನಿಟ್ಟಿನಲ್ಲಿ ಈಗಾಗಲೇ ಹತ್ತು ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ಶಾಸಕ ಪುಟ್ಟಸ್ವಾಮಿಗೌಡ ತಿಳಿಸಿದರು. ತಾಲ್ಲೂಕಿನ ಡಿ.ಪಾಳ್ಯ ಮತ್ತು ನಗರಗೆರೆ ಮತ್ತು ಕಸಬಾ ಹೋಬಳಿ ವ್ಯಾಪ್ತಿಯ ಹುದುಗೂರು, ಮೇಳ್ಯಾ, ನಕ್ಕಲಹಳ್ಳಿ, ದಲೋಡು, ನಗರಗೆರೆ, ಜಿ.ಕೊತ್ತೂರು.ಬಿ.ಬೊಮ್ಮಸಂದ್ರ, ನಾಮಗೊಂಡ್ಲು, ಗಂಗಸಂದ್ರ, ಕುರುಬರಹಳ್ಳಿ ಸೇರಿ 10 ಗ್ರಾಮ ಪಂಚಾಯಿತಿ ವ್ಯಾಪ್ತಿಯ 19 ಗ್ರಾಮಗಳಲ್ಲಿ ಹಮ್ಮಿ ಕೊಂಡಿರುವ ಅಭಿವೃದ್ಧಿ ಕಾಮಗಾರಿ ಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಅಪರಾಧ ಪ್ರಕರಣಗಳ ಪತ್ತೆಗೆ ಸಾರ್ವಜನಿಕರ ಸಹಕಾರ ಅಗತ್ಯ : ಎಸ್ಪಿ.ಕುಶಲ್ ಚೌಕ್ಸೆ

ನಗರಸಭೆ ವ್ಯಾಪ್ತಿಯ ಹಿರೇಬಿದನೂರು ವಾರ್ಡ್ನಲ್ಲಿ ವಿವಿಧ ಇಲಾಖೆಯ ಅನುದಾನಗಳೊಂದಿಗೆ ಒಟ್ಟು ಮೊತ್ತ 1 ಕೋಟಿ 90 ಲಕ್ಷಗಳ ವೆಚ್ಚಗಳಲ್ಲಿ ಸುಸಜ್ಜಿತ ಸಿ.ಸಿ.ರಸ್ತೆಗಳು,ಚರಂಡಿಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದೇ ರೀತಿ ಎಮ್.ಗೊಲ್ಲಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಭೂಮಿ ಪೂಜೆಯನ್ನು ನೆರವೇರಿಸಿ ಶೀಘ್ರವಾಗಿ ಜನ ಬಳಕೆಗೆ ಮುಕ್ತ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.  

ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಸಮಗ್ರ ಗ್ರಾಮಗಳ ಅಭಿವೃದ್ಧಿಯ ಧ್ಯೇಯದೊಂದಿಗೆ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಕರ್ಯಗಳ ಒದಗಿಸುವುದು, ಅಲ್ಲಿನ ಸ್ಥಳೀಯ ಸಮಸ್ಯೆ ಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಕಾರ್ಯೋನ್ಮುಖವಾಗಿದೆ. ಹಲವು ಗ್ರಾಮ ಗಳಲ್ಲಿ ಈಗಾಗಲೇ ಅನೇಕ ಅಭಿವೃದ್ದಿಯ ಕಾಮಗಾರಿಗಳು ಚಾಲನೆಯಲ್ಲಿವೆ. ಮುಂಬರುವ ದಿನ ಗಳಲ್ಲಿ ಉಳಿದ ಗ್ರಾಮಗಳಿಗೂ ಭೇಟಿ ನೀಡಿ ಕಾನಗಾರಿಗಳ ಗುಣಮಟ್ಟ ವೀಕ್ಷಿಸಿ ಅಗತ್ಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುವುದೆಂದು ಭರವಸೆ ನೀಡಿದರು.

ಗುತ್ತಿಗೆದಾರರು ಸಹ ತಾವು ಪಡೆದಿರುವ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಿಗದಿತ ಕಾಲಮಿತಿಯಲ್ಲಿ ಮುಗಿಸಬೇಕೆಂಕು ಇಲ್ಲವಾದಲ್ಲಿ ನಿಮ್ಮ ಮೇಲೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಯುಕ್ತೆ ಡಿ. ಎಮ್. ಗೀತಾ ನಗರಸಭಾ ಅಧ್ಯಕ್ಷರು ಲಕ್ಷ್ಮೀ ನಾರಾಯಣ. ಉಪಾಧ್ಯಕ್ಷರು ಫರೀದ್ ಹಾಗೂ ಆಯಾ ಹೋಬಳಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಅಧ್ಯಕ್ಷರುಗಳು,ಸದಸ್ಯರುಗಳು, ಕೆ.ಹೆಚ್.ಪಿ.ಬಣದ ಪ್ರಮುಖ ಮುಖಂಡರುಗಳು, ಚುನಾಯಿತ ಜನ ಪ್ರತಿನಿಧಿಗಳು, ಅಧಿಕಾರಿವರ್ಗದವರು,ಗುತ್ತಿಗೆದಾರರುಗಳು, ಕಾರ್ಯಕರ್ತರು, ಗ್ರಾಮಸ್ಥರುಗಳು ಉಪಸ್ಥಿತರಿದ್ದರು.