ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

K M Suresh: ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಂ.ಸುರೇಶ್ ನಾಮಪತ್ರ ಸಲ್ಲಿಕೆ

ಆಗ್ನೇಯ ಪದವೀಧರ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಂ. ಸುರೇಶ್(K M Suresh) ಅವರು ಬೆಂಗಳೂರಿನ ಲಾಲ್‌ಬಾಗ್ ಪಶ್ಚಿಮ ದ್ವಾರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಉಪ ಚುನಾವಣಾಧಿಕಾರಿ ಜಿ. ಪ್ರಭು ಅವರಿಗೆ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮ ಚಂದ್ರಗೌಡ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಯಿತು.

ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಂ.ಸುರೇಶ್ ನಾಮಪತ್ರ ಸಲ್ಲಿಕೆ

-

Profile
Ashok Nayak Oct 6, 2026 11:49 PM

ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಂ. ಸುರೇಶ್(K M Suresh) ಅವರು ಬೆಂಗಳೂರಿನ ಲಾಲ್‌ಬಾಗ್ ಪಶ್ಚಿಮ ದ್ವಾರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಉಪ ಚುನಾವಣಾಧಿಕಾರಿ ಜಿ. ಪ್ರಭು ಅವರಿಗೆ ನಾಮಪತ್ರ ಸಲ್ಲಿಸಿದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಯಿತು.

ನಂತರ ಮಾತನಾಡಿದ ಕೆ.ಎಂ.ಸುರೇಶ್, ಆಗ್ನೇಯ ಪದವೀಧರ ಕ್ಷೇತ್ರದ ಪದವೀಧರರ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ಧ್ವನಿಯಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡುವುದು ತಮ್ಮ ಪ್ರಮುಖ ಗುರಿಯಾಗಿದೆ. ಪದವೀಧರ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸುವಂತೆ ಮನವಿ ಮಾಡಿದರು.

ಬಿಜೆಪಿ–ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣಾ ಪ್ರಚಾರ ನಡೆಸಿ ಗೆಲುವಿಗೆ ಶ್ರಮಿಸುವಂತೆ ಅವರು ಕರೆ ನೀಡಿದರು.

ಛಲವಾದಿ ನಾರಾಯಣಸ್ವಾಮಿ, ಮುಕ್ತ ಮುನಿಯಪ್ಪ, ಸೀಕಲ್ ಆನಂದಗೌಡ, ದೇವರಾಜ್, ಸುರೇಂದ್ರಗೌಡ ಸೇರಿದಂತೆ ಬಿಜೆಪಿ–ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತ ರಿದ್ದರು.

image

ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನ ಶ್ರಮ: “ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಗೆಲುವಿಗಾಗಿ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ. ಪದವೀಧರ ಮತದಾರರನ್ನು ಸಂಪರ್ಕಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಲಾಗುವುದು. ಬಿಜೆಪಿ–ಜೆಡಿಎಸ್ ಮೈತ್ರಿ ಬಲವಾಗಿದ್ದು, ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ವಿಶ್ವಾಸವಿದೆ.”

— ಸೀಕಲ್ ರಾಮಚಂದ್ರಗೌಡ, ಬಿಜೆಪಿ ಜಿಲ್ಲಾಧ್ಯಕ್ಷ