ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Women's Reservation Bill: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ಗುಡಿಬಂಡೆಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಸಮಾನ ಅವಕಾಶ ನೀಡುವ ಉದ್ದೇಶದಿಂದ ಈ ಕ್ರಾಂತಿಕಾರಿ ಮಸೂದೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಆದರೆ ಇದನ್ನು ವಿರೋಧಿ ಸುವ ಮೂಲಕ ವಿರೋಧ ಪಕ್ಷಗಳು ಮಹಿಳೆಯರ ಪ್ರಗತಿಗೆ ಅಡ್ಡಿಪಡಿಸುತ್ತಿವೆ. ಆದರೆ ಚುನಾವಣೆ ಗಳಲ್ಲಿ ಮಾತ್ರ ತಾವು ಮಹಿಳೆಯರ ಪರ ಕೆಲಸ ಮಾಡುತ್ತೇವೆ.

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನೆ

ಮಹಿಳಾ ಮೀಸಲಾತಿ ಕಾಯ್ದೆ ವಿರೋಧಿಸಿ ಕಾಂಗ್ರೇಸ್ ಹಾಗೂ ಮಿತ್ರಕೂಟದ ವಿರುದ್ದ ಗುಡಿಬಂಡೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. -

Profile
Ashok Nayak Apr 27, 2026 11:07 PM

ಗುಡಿಬಂಡೆ: ಕೇಂದ್ರ ಸರ್ಕಾರ(Central Govt) ಜಾರಿಗೆ ತರಲು ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆ (Women's Reservation Bill)ಯನ್ನು ಕಾಂಗ್ರೆಸ್ ನೇತೃತ್ವದ ಮಿತ್ರಕೂಟ ವಿರೋಧಿಸಿರುವು ದನ್ನು ಖಂಡಿಸಿ, ಗುಡಿಬಂಡೆಯಲ್ಲಿ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

​ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಮುಖಂಡೆ ಆಶಾ ಜಯಪ್ಪ, ತಾವು ಮಹಿಳಾ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮಿತ್ರಕೂಟವು ಮಹಿಳಾ ಮೀಸಲಾತಿ ಮಸೂದೆ(Women's Reservation Bill) ವಿರೋಧಿಸುವ ಮೂಲಕ ಮಹಿಳೆಯರಿಗೆ ದೊಡ್ಡ ಮಟ್ಟದ ದ್ರೋಹ ಎಸಗಿದೆ. ಸಂವಿಧಾನದಲ್ಲಿಯೇ ಬಾಬಾ ಸಾಹೇಬ್ ಅಂಬೇಡ್ಕರ್‌ʼರವರು ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕೆಂದು ತಿಳಿಸಿದ್ದರು. ಆದರೆ ಕಾಂಗ್ರೆಸ್‌ನ ಈ ನಡೆ ಅಂಬೇಡ್ಕರ್ ಅವರ ಆಶಯಗಳಿಗೆ ವಿರುದ್ಧವಾಗಿದ್ದು, ಮುಂಬರುವ ದಿನಗಳಲ್ಲಿ ಜನತೆ ಈ ಕೂಟಕ್ಕೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: Gudibande News: ಎಲ್ಲವನ್ನೂ ನೀಡುವ ಭೂ ತಾಯಿಯನ್ನು ನಾವು ಸಂರಕ್ಷಿಸೋಣ : ನಾಗಮಣಿ

​ಬಳಿಕ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಜಿ ಎ ಅಮರೇಶ, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಸಮಾನ ಅವಕಾಶ ನೀಡುವ ಉದ್ದೇಶದಿಂದ ಈ ಕ್ರಾಂತಿಕಾರಿ ಮಸೂದೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಆದರೆ ಇದನ್ನು ವಿರೋಧಿಸುವ ಮೂಲಕ ವಿರೋಧ ಪಕ್ಷಗಳು ಮಹಿಳೆಯರ ಪ್ರಗತಿಗೆ ಅಡ್ಡಿಪಡಿಸುತ್ತಿವೆ. ಆದರೆ ಚುನಾವಣೆ ಗಳಲ್ಲಿ ಮಾತ್ರ ತಾವು ಮಹಿಳೆಯರ ಪರ ಕೆಲಸ ಮಾಡುತ್ತೇವೆ. ಮಹಿಳೆಯರಿಗೆ ಸಾಕಷ್ಟು ಸೌಲಭ್ಯಗಳನ್ನು ಕೊಟ್ಟಿದ್ದೇವೆ ಎಂದು ಹೇಳುವ ಕಾಂಗ್ರೇಸ್ ಮಿತ್ರ ಕೂಟ, ಇದೀಗ ಮಹಿಳಾ ಮೀಸಲಾತಿಗೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಕಂಡರೇ ಅವರ ಮನಸ್ಸು ಹೇಗೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಂಗರೆಡ್ಡಿ, ಕಾರ್ಯದರ್ಶಿ ಮದನ ಮೋಹನ ರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸಿಂಗ್, ಪ್ರಧಾನ ಕಾರ್ಯದರ್ಶಿ ಗಳಾದ ಅರುಣಾ ಹಾಗೂ ಜ್ಯೋತಿ, ಯುವ ಮೋರ್ಚಾ ಅಧ್ಯಕ್ಷ ನರಸಿಂಹಮೂರ್ತಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬೀಚಗಾನಹಳ್ಳಿ ಸುರೇಶ್, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಪ್ರೆಸ್ ಶಿವಪ್ಪ, ಗಜನಾಣ್ಯ ನಾಗರಾಜ್, ಪದ್ಮಾವತಿ, ಈಶ್ವರ್ ರೆಡ್ಡಿ, ಚೇತನ್, ವಿಜಯ ರಾಘವರೆಡ್ಡಿ ಸೇರಿದಂತೆ ಹಲವು ಕಾರ್ಯ ಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.