ಅಭಿನಂದನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅಭಿಮತ
ಚಿಂತಾಮಣಿ : ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೇಣು ಗೋಪಾಲ್ ರವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಹೇಳಿದರು.
ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆ ಹಾಗೂ ನೂತನ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡರಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದ ನಾ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ನಿರ್ನಾಮವಾಗುವ ಮೂಲಕ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡಲು ನಾವೆಲ್ಲರೂ ಪಣತೊಡೋಣ ಎಂದ ಅವರು ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ವಿನಾಕಾರಣ ಬಿಜೆಪಿ ಮುಖಂಡರ ಮೇಲೆ ಕೇಸುಗಳನ್ನು ದಾಖಲಿಸುವ ಮೂಲಕ ದೌರ್ಜನ್ಯ ದಬ್ಬಾಳಿಕೆ ಮಿತಿ ಮೀರುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬೇಕಾಗಿದ್ದು ಆ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮವಹಿಸಿ ಪಕ್ಷವನ್ನು ಗಟ್ಟಿಗೊಳಿಸಲು ಮುಂದಾಗ ಬೇಕೆಂದು ತಿಳಿಸಿದರು.
ಇದನ್ನೂ ಓದಿ: Chikkaballapur News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ
ಮಾಜಿ ಸಂಸದ ಮುನಿಸ್ವಾಮಿ ಮಾತನಾಡಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳ ನಡೆಸಲು ಕಾಂಗ್ರೆಸ್ ಪಕ್ಷದ ಈ ಸರ್ಕಾರದಲ್ಲಿ ಹಣವಿಲ್ಲ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲೇ ಬೇಕಾಗಿದ್ದು ಆ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳು ನಡೆಯಲಿದ್ದು,ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಹಾಗೂ ಪಕ್ಷದ ತತ್ವಸಿದ್ಧಾಂತಗಳ ಅನ್ವಯ ಯಾವುದೇ ತ್ಯಾಗಕ್ಕೂ ಸಿದ್ಧವಾಗಿರಬೇಕು ಅದರಂತೆ ಕಳೆದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ತೀರ್ಮಾನದಂತೆ ಮೈತ್ರಿಯಲ್ಲಿ ಜೆಡಿಎಸ್ ಪಕ್ಷಕ್ಕೆ ನಾವು ಸೀಟನ್ನು ಬಿಟ್ಟುಕೊಟ್ಟೆ ಆ ರೀತಿ ತ್ಯಾಗದ ಮನೋಭಾವ ಪಕ್ಷದ ಕಾರ್ಯ ಕರ್ತರಲ್ಲಿ ಮೈಗೂಡಿಸಿ ಕೊಳ್ಳಬೇಕೆಂದರು.
ಬಿಜೆಪಿ ಪಕ್ಷದ ಮುಖಂಡರು ಹಾಗೂ ಸಮಾಜ ಸೇವಕ ಜಿ.ಎನ್.ವೇಣುಗೋಪಾಲ್ ಮಾತನಾಡಿ, 2028ರಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಯಾರೇ ಬಿಜೆಪಿ ಅಭ್ಯರ್ಥಿ ಆದರೂ ಬಿಜೆಪಿ ಪಕ್ಷವನ್ನು ಈ ಕ್ಷೇತ್ರದಲ್ಲಿ ಗೆಲ್ಲಿಸಬೇಕೆಂದು ಆ ನಿಟ್ಟಿನಲ್ಲಿ ಮುಂದಾಗಬೇಕೆಂದು ಕಾರ್ಯಕರ್ತರಿಗೆ ಕಿವಿ ಮಾತು ನೀಡಿದರು.
ಈ ವೇಳೆ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅವರುಗಳನ್ನು ಕೂಡ ಆತ್ಮೀಯವಾಗಿ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದಗೌಡ ಸತ್ಯ ನಾರಾಯಣ ಮಹೇಶ್,ಅರುಣ್ ಬಾಬು,ಕೆ.ಎಂ.ರಾಜಶೇಖರ್‌ರೆಡ್ಡಿ,ತಾಲೂಕಾಧ್ಯಕ್ಷ ರಾಜಣ್ಣ ಮಹೇಶ್ ಬೈ,ಗೋವಿಂದ ಹಲವರು ಉಪಸ್ಥಿತರಿದ್ದರು.