#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ಪ್ರಬುದ್ಧ ಮತದಾರರು ದಿಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಪಕ್ಷವನ್ನು ಗೆಲ್ಲಿಸಿದ್ದಾರೆ

ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣ ದಲ್ಲಿ ದಿಲ್ಲಿ ರಾಜ್ಯದಲ್ಲಿ ೨೭ ವರ್ಷಗಳ ನಂತರ ಬೆಂಬಲ ನೀಡಿದ್ದಾರೆ  ಎಂದ ಅವರು ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ , ಭ್ರಷ್ಟಾಚಾರದ ನಿರ್ಮೂಲನೆ ಮಾಡುತ್ತೇನೆ ಎಂದು ಅರವಿಂದ್ ಕೇಜ್ರಿವಾಲ್  ಬಹುಕೋಟಿ ಅಬಕಾರಿ ಹಗರಣದಲ್ಲಿ ಸಿಲುಕಿಕೊಂಡರು

ದೆಹಲಿಯಲ್ಲಿ ಬಿಜೆಪಿ ಗೆಲುವು: ಗೌರಿಬಿದನೂರಿನಲ್ಲಿ ಸಂಭ್ರಮಾಚರಣೆ

ಪ್ರಬುದ್ಧ ಮತದಾರರು ದಿಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಪಕ್ಷವನ್ನು ಗೆಲ್ಲಿಸಿದ್ದಾರೆ ನರೇಂದ್ರ ಮೋದಿರವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ಪಕ್ಷದ ಮುಖಂಡರಾದ ಎನ್ ಎಂ ರವಿನಾರಾಯಣರೆಡ್ಡಿ ತಿಳಿಸಿದರು.

Profile Ashok Nayak Feb 9, 2025 11:56 PM

ಗೌರಿಬಿದನೂರು: ಪ್ರಬುದ್ಧ ಮತದಾರರು ದಿಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಪಕ್ಷವನ್ನು ಗೆಲ್ಲಿಸಿದ್ದಾರೆ ನರೇಂದ್ರ ಮೋದಿರವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊ ಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ಪಕ್ಷದ ಮುಖಂಡರಾದ ಎನ್ ಎಂ ರವಿ ನಾರಾಯಣರೆಡ್ಡಿ ತಿಳಿಸಿದರು. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆ ಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆಯ ಬಳಿಕ ಮಾತನಾಡಿದ ಅವರು ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ.

ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲಿಸಿ ದೆಹಲಿ ಜನರು ಆಪ್ ಗೆ ಬೆಂಬಲಿಸಿದ್ದರು. ಆದರೆ ಅವರ ಆಡಳಿತ ವೈಖರಿ ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದಾರೆ ಎಂದರು.

ಇದನ್ನೂ ಓದಿ: Chikkaballapur News: ನೂತನ ಬಿಜೆಪಿ ಜಿಲ್ಲಾಧ್ಯಕ್ಷ 2 ವಾರದಲ್ಲಿ ಬದಲಾಗಲಿದ್ದಾರೆ : ಹೆಚ್.ಆರ್.ಸಂದೀಪ್‌ರೆಡ್ಡಿ ಭವಿಷ್ಯ

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಮಾರ್ಕೆಟ್ ಮೋಹನ್ ರವರು ಮಾತನಾಡಿ  ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ದಿಲ್ಲಿ ರಾಜ್ಯದಲ್ಲಿ ೨೭ ವರ್ಷಗಳ ನಂತರ ಬೆಂಬಲ ನೀಡಿದ್ದಾರೆ  ಎಂದ ಅವರು ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ , ಭ್ರಷ್ಟಾಚಾರದ ನಿರ್ಮೂಲನೆ ಮಾಡುತ್ತೇನೆ ಎಂದು ಅರವಿಂದ್ ಕೇಜ್ರಿವಾಲ್  ಬಹುಕೋಟಿ ಅಬಕಾರಿ ಹಗರಣದಲ್ಲಿ ಸಿಲುಕಿಕೊಂಡರು. ಈ ಎಲ್ಲಾ ಅಕ್ರಮಗಳನ್ನು ನೋಡಿ ಜನ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಇನ್ನು ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಕೂಡ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಎಬಿವಿಪಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಮೃತ್ಯುಂಜಯ ಜಯಣ್ಣ ,ಕೋಡಿರ್ಲಪ್ಪ, ನಕ್ಕಲಹಳ್ಳಿ ರಾಜು, ವೆಂಕಟಾದ್ರಿ, ಮಂಜುನಾಥ್ ರಾವ್, ಪ್ರವೀಣ್ ಕುಮಾರ್, ಪಾರ್ವತಮ್ಮ ,ಫ್ಯಾಕ್ಟರಿ ರಾಮು, ಶಾಂತಕುಮಾರ್, ಅಜಯ್, ಮಾರುತಿ ,ಮಣಿಕಂಠ ,ಅನಿಲ್, ಭರತ್, ಗಂಗಾಧರಪ್ಪ, ರಾಜಕುಮಾರ್  ಹಾಗೂ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.