ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani News: 3 ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು: ಚಿಂತಾಮಣಿಯಲ್ಲಿ ಬಿ ಜೆ ಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬಿಜೆಪಿ ಯುವ ಮುಖಂಡರಾದ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಮಹೇಶ್ ಬೈ ಮಾತನಾಡಿ ದೇಶದ ಮೂರು ಪ್ರಮುಖ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿರುವುದು ಹೆಮ್ಮೆಯ ವಿಷಯ.ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳಿಗೆ ಈ ಫಲಿ ತಾಂಶವೇ ಸಾಕ್ಷಿಯಾಗಿದೆ.ಇದು ಬರೀ ಚುನಾವಣಾ ಗೆಲುವಲ್ಲ,ಭಾರತದ ಅಖಂಡತೆಯ ವಿಜಯ ಎಂದು ಹರ್ಷ ವ್ಯಕ್ತಪಡಿಸಿದರು

ದೇಶಾದ್ಯಂತ ಹಬ್ಬಿದ ಕೇಸರಿ ಅಲೆ:ಚಿಂತಾಮಣಿಯಲ್ಲಿ ವಿಜಯೋತ್ಸವದ ಮೆರುಗು

-

Profile
Ashok Nayak May 5, 2026 8:54 PM

ಚಿಂತಾಮಣಿ: ಪಶ್ಚಿಮ ಬಂಗಾಳ,ಪಾಂಡಿಚೇರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಚಿಂತಾ ಮಣಿ ನಗರದ ಬಿಜೆಪಿ ಕಾರ್ಯಕರ್ತರು ಇಂದು ಸಂಭ್ರಮಾಚರಣೆ ನಡೆಸಿದರು.

ನಗರದ ತಾಲೂಕು ಕಚೇರಿ ಆವರಣದ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಪಕ್ಷದ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ ತಮ್ಮ ಸಂತೋಷವನ್ನು ಹಂಚಿ ಕೊಂಡರು. ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಯುವ ಮುಖಂಡರಾದ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಮಹೇಶ್ ಬೈ ಮಾತನಾಡಿ ದೇಶದ ಮೂರು ಪ್ರಮುಖ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿರುವುದು ಹೆಮ್ಮೆಯ ವಿಷಯ.ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳಿಗೆ ಈ ಫಲಿತಾಂಶವೇ ಸಾಕ್ಷಿಯಾಗಿದೆ.ಇದು ಬರೀ ಚುನಾವಣಾ ಗೆಲುವಲ್ಲ,ಭಾರತದ ಅಖಂಡತೆಯ ವಿಜಯ ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: Chinthamani News: ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಗೆಲುವು: ಚಿಂತಾಮಣಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ

ಬಿಜೆಪಿ ಹಿರಿಯ ಮುಖಂಡರಾದ ಶಿವಾರೆಡ್ಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ.ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು,ಕೇವಲ ಸುಳ್ಳು ಭರವಸೆಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸು ತ್ತಿಲ್ಲ ಎಂದು ಶಿವಾರೆಡ್ಡಿ ದೂರಿದರು.

ಈ ಸಂದರ್ಭದಲ್ಲಿ ಕೆ ಎಂ ರಾಜಶೇಖರ ರೆಡ್ಡಿ,ಪಕ್ಷದ ತಾಲೂಕು ಮಾಜಿ ಅಧ್ಯಕ್ಷರಾದ ಬ್ಯಾಲಹಳ್ಳಿ ಆಂಜನೇಯ ರೆಡ್ಡಿ,ಕುರಟಹಳ್ಳಿ ಮಂಜು,ಆಂಜನಪ್ಪ,ನಗರ ಪ್ರಧಾನ ಕಾರ್ಯದರ್ಶಿ ಗಾಜಲ ಶಿವ, ಶೃತಿ, ಪ್ರಕಾಶ್ ಗುಪ್ತ,,ಆನಂದ್,ವೆಂಕಟ ಶಿವಪ್ಪ,ಹೊಸೂರ್ ಆಂಜನಪ್ಪ, ನರ್ನಕಲ್ ಚಂದ್ರಶೇಖರ್, ಬಾಲಕೃಷ್ಣ, ಬನಹಳ್ಳಿ ಮಂಜು, ಸದಾಶಿವ, ಮಮತಾ, ನಂದಕುಮಾರಿ, ವೇದಾವತಿ, ಪದ್ಮ, ಅರ್ಜುನ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.