ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಜೆಬಿಎಂ ಒಗಿಹಾರಾ ಆಟೋಮೊಟಿವ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಹಿರಿಯ ವ್ಯವಸ್ಥಾಪಕ (ಮಾನವ ಸಂಪನ್ಮೂಲ ವಿಭಾಗ) ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಅರುಣ್ ಕುಮಾರ್ ಲೇಪಾಕ್ಷಿ ಅವರು ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಾಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬರುತ್ತಿದ್ದಾರೆ.

ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ

-

Profile
Ashok Nayak Jun 20, 2026 8:45 PM

ಗೌರಿಬಿದನೂರು: ಸಾಮಾಜಿಕ ಕಳಕಳಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಗೌರಿಬಿದನೂರು ತಾಲ್ಲೂಕಿನ ನಕ್ಕಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಮಾಜಮುಖಿ ಸೇವೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ನೀರಿನ ಬಾಟಲಿಗಳು ಹಾಗೂ ಇತರ ಶೈಕ್ಷಣಿಕ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೆಬಿಎಂ ಒಗಿಹಾರಾ ಆಟೋಮೊಟಿವ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಹಿರಿಯ ವ್ಯವಸ್ಥಾಪಕ (ಮಾನವ ಸಂಪನ್ಮೂಲ ವಿಭಾಗ) ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಅರುಣ್ ಕುಮಾರ್ ಲೇಪಾಕ್ಷಿ ಅವರು ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಾಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬರುತ್ತಿದ್ದಾರೆ. ಈ ವರ್ಷವೂ ಅವರು ತಮ್ಮ ಸ್ನೇಹಿತರಾದ ಶ್ರೀ ಅಶ್ವಿನಿ, ಶ್ರೀಮತಿ ಸುಮಾ ಸುರೇಶ್, ಶ್ರೀಮತಿ ರಾಧಾ ಹಾಗೂ ರವಿ ಕುಮಾರ್ ಅವರ ಸಹಯೋಗ ದೊಂದಿಗೆ ಸುಮಾರು 60 ವಿದ್ಯಾರ್ಥಿಗಳಿಗೆ ಪುಸ್ತಕಗಳು, ನೀರಿನ ಬಾಟಲಿಗಳು ಮತ್ತು ಇತರೆ ಅಗತ್ಯ ವಸ್ತು ಗಳನ್ನು ವಿತರಿಸಿದರು.

ಇದನ್ನೂ ಓದಿ: Gauribidanur News: ತೊಂಡೆಬಾವಿ ಹಾಲು ಡೇರಿಯ ಹಣ ದುರುಪಯೋಗ ಚಿಮುಲ್ ನಿರ್ದೇಶಕ ಜೆ.ಕಾಂತರಾಜು ಬೇಸರ

ಈ ಸಮಾಜಸೇವಾ ಕಾರ್ಯಕ್ರಮಕ್ಕೆ ಶ್ರೀಧರ್ ಎಚ್.ಟಿ. ಅವರು ವಿಶೇಷ ಸಹಕಾರ ನೀಡಿದರು.

ಶಾಲೆಯ ಶಿಕ್ಷಕರಾದ ಶ್ರೀ ಬಾಲಪ್ಪ ಹಾಗೂ ಶ್ರೀಮತಿ ಮಂಜುಳ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ವಿದ್ಯೆಯ ಮಹತ್ವದ ಕುರಿತು ತಿಳಿಸಿ, ಇಂತಹ ಕಾರ್ಯಗಳು ವಿದ್ಯಾರ್ಥಿಗಳಲ್ಲಿ ಓದಿನ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಚಿ.ಪ್ರಣತಿ, ಶ್ರೀ ಶಾಂತಿ ಕೇಶವ ಜಿ.ಎಸ್., ಶ್ರೀ ಅರುಣ್ ಕುಮಾರ್ ಲೇಪಾಕ್ಷಿ ಹಾಗೂ ಶ್ರೀ ಮಧು ಅವರು ನೆರವೇರಿಸಿದರು. ನಂತರ ಶಾಲಾ ಆವರಣದಲ್ಲಿ ಸಸಿಗಳು ನೆಟ್ಟುವ ಕಾರ್ಯಕ್ರಮವನ್ನು ನಡೆಸಿ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಶಿಕ್ಷಣ ಮತ್ತು ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಇಂತಹ ಸಮಾಜಮುಖಿ ಕಾರ್ಯಗಳು ಇತರರಿಗೂ ಮಾದರಿಯಾಗಿದ್ದು, ಗ್ರಾಮಸ್ಥರು, ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜಕರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು.