ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Eyesight loss: ಶಿಕ್ಷಕಿ ಎಡವಟ್ಟು; ಮಾಡದ ತಪ್ಪಿಗೆ ಕಣ್ಣು ಕಳೆದುಕೊಂಡ ಬಾಲಕ

Eyesight loss: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕಿ ಹೊಡೆದಿದ್ದರಿಂದಲೇ ತಮ್ಮ ಪುತ್ರ ಕಣ್ಣು ಕಳೆದುಕೊಂಡಿದ್ದಾನೆ ಎಂದು ಬಾಲಕನ ಪೋಷಕರು ಆರೋಪಿಸಿದ್ದಾರೆ.

ಶಿಕ್ಷಕಿ ಎಡವಟ್ಟು; ಮಾಡದ ತಪ್ಪಿಗೆ ಕಣ್ಣು ಕಳೆದುಕೊಂಡ ಬಾಲಕ

Profile Prabhakara R Apr 6, 2025 3:25 PM

ಚಿಕ್ಕಬಳ್ಳಾಪುರ: ಶಿಕ್ಷಕಯೊಬ್ಬರ ಎಡವಟ್ಟಿಗೆ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿರುವ ಘಟನೆ (Eyesight loss) ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಶಿಕ್ಷಕಿ ಕೋಲಿನಿಂದ ಹೊಡೆದಿದ್ದರಿಂದಲೇ ತಮ್ಮ ಮಗನ ಕಣ್ಣಿಗೆ ಹಾನಿಯಾಗಿದೆ. ಹೀಗಾಗಿ ಶಿಕ್ಷಕಿ ವಿರುದ್ಧ ಕ್ರಮ ಕೈಗೊಂಡು, ತಮಗೆ ನ್ಯಾಯ ಕೊಡಿಸಬೇಕು ಎಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ. ಕಣ್ಣು ಕಳೆದುಕೊಂಡ ಬಾಲಕನ ತಂದೆ-ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ.

ಯಗವಕೋಟೆ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಟರಾಜ್ - ಅಂಜಲಿ ದಂಪತಿ ಪುತ್ರನಾದ ಯಶ್ವಂತ್ (8) ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿಕ್ಷಕಿ ಸರಸ್ವತಿ ಕೋಲಿನಿಂದ ಬೇರೆ ಬಾಲಕನಿಗೆ ಹೊಡೆಯಲು ಹೋದಾಗ ಯಶ್ವಂತ್ ಕಣ್ಣಿಗೆ ಪೆಟ್ಟು ಬಿದ್ದಿದೆ. ಇದರಿಂದ ಬಲಗಣ್ಣಿಗೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪೋಷಕರು ಬಾಲಕನಿಗೆ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ವೈದ್ಯರು ಬಾಲಕನ ಕಣ್ಣು ಕಾಣುವುದಿಲ್ಲ ಎಂದು ದೃಢಕರಿಸಿದ್ದರಿಂದ ಪೋಷಕರು ಶಿಕ್ಷಕಿಯ ವಿರುದ್ಧ ಪೊಲೀಸ್‌ ಠಾಣೆಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು. ಆದರೆ ಯಾವುದೇ ರೀತಿಯ ಕ್ರಮ ಜರುಗಿಸದ ಕಾರಣಕ್ಕೆ ನ್ಯಾಯಕ್ಕಾಗಿ ಬಾಲಕ ಹಾಗೂ ಅವರ ತಂದೆ-ತಾಯಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ. ಶಿಕ್ಷಕಿಯ ಮೇಲೆ ಕ್ರಮ ಜರುಗಿಸುವವರೆಗೂ ಕಾನೂನು ಹೋರಾಟ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Viral news: ಕೆಲಸ ಸಿಗದೆ ತನಗೆ ತಾನೇ ಶ್ರದ್ಧಾಂಜಲಿ ಪೋಸ್ಟ್‌ ಮಾಡಿದ ಬೆಂಗಳೂರು ಯುವಕ!

ಕಳ್ಳತನದ ಆರೋಪ; ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ವಿಕೃತಿ

Physical Assault

ದಾವಣಗೆರೆ: ಹಕ್ಕಿಪಿಕ್ಕಿ ಜನಾಂಗದ ಅಪ್ರಾಪ್ತ ಬಾಲಕನನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಹಲ್ಲೆ (Physical Assault) ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಬಾಲಕನನ್ನು ಬೆತ್ತಲೆಗೊಳಿಸಿ ಆತನ ಕಾಲು ಕೈ ಕಟ್ಟಿದ್ದಾರೆ. ನಂತರ ಆತನ ಮೇಲೆ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ ನೀಡಿದ್ದಾರೆ. ಈ ಘಟನೆ ದಾವಣೆಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿಯಲ್ಲಿ ನಡೆದಿದೆ. ಸದ್ಯ ಬಾಲಕನ ಮೇಲಿನ ಹಲ್ಲೆಯ ದೃಶ್ಯ ವೈರಲ್‌ ಆಗಿದೆ. ವೈರಲ್‌ ಆಗುತ್ತಿರುವ ದೃಶ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 10-15 ಯುವಕರು ಬಾಲಕನಿಗೆ ತೋಟದಲ್ಲಿ ದೊಣ್ಣೆ, ಡ್ರಿಪ್‌ ಪೈಪ್‌ ಸೇರಿ ಸಿಕ್ಕ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ನಂತರ ಆತನನ್ನು ಬೆತ್ತಲೆ ಮಾಡಿ ಮರಕ್ಕೆ ಕಟ್ಟಿ ಹಾಕಿದ್ದಾರೆ.

ಬಾಲಕ ತನ್ನನ್ನು ಬಿಟ್ಟುಬಿಡುವಂತೆ ಅವರ ಬಳಿ ಮನವಿ ಮಾಡಿಕೊಂಡಿದ್ದಾನೆ. ಆದರೂ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಕೆಂಪಿರುವೆ ಬಿಟ್ಟು ತಮ್ಮ ವಿಕೃತಿ ಮೆರೆದಿದ್ದಾರೆ.ಬಾಲಕ ಪದೇ ಪದೇ ಕಳವು ನಡೆಸುತ್ತಿದ್ದ ಎನ್ನುವ ಆರೋಪವಿತ್ತು. ಹೀಗಾಗಿ ಈತನಿಗೆ ಪಾಠ ಕಲಿಸಲು ಈ ರೀತಿಯ ದುಷ್ಕೃತ್ಯ ಮಾಡಿದ್ದಾರೆನ್ನಲಾಗಿದೆ. ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನ ಕುಟುಂಬ ಗಿಡಮೂಲಿಕೆಗಳನ್ನು ಮಾರಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಈತನ ಪೋಷಕರು ಗಿಡಮೂಲಿಕೆಗಳ ಮಾರಾಟಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Assault Case: ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್‌ಮನ್‌ಗೆ ಹಿಗ್ಗಾಮುಗ್ಗಾ ಥಳಿತ!

ಇತ್ತೀಚೆಗೆ ಉಡುಪಿಯಲ್ಲಿ ಮೀನು ಕದ್ದ ಆರೋಪದ ಮೇಲೆ ಮಹಿಳೆಯೊಬ್ಬಳಿಗೆ ಥಳಿಸಲಾಗಿತ್ತು. ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ಸಂದರ್ಭ, ಮಹಿಳೆ ದುಬಾರಿ ಸಿಗಡಿ ಮೀನನ್ನು ಕದ್ದಿದ್ದಾಳೆ. ಮೀನು ಕದ್ದಿದ್ದನ್ನು ವಿಚಾರಣೆ ಮಾಡಿದಾಗ ಆಕೆ ಒಪ್ಪಿಕೊಂಡಿಲ್ಲ. ಸ್ಥಳದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿ ಬೋಟಿಗೆ ಸಂಬಂಧಪಟ್ಟವರು ಥಳಿಸಿದ್ದರು. ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮಹಿಳೆ ತಾನು ಕದ್ದಿರುವುದಾಗಿ ಒಪ್ಪಿಕೊಂಡು, ದಂಡ ಕಟ್ಟಿದ್ದಾಳೆ. ಬೋಟ್‌ನ ಮಾಲೀಕರು ಮತ್ತು ಮಹಿಳೆಗೆ ಸಂಬಂಧಪಟ್ಟವರು ಕುಳಿತು ರಾಜಿ ಪಂಚಾಯಿತಿ ನಡೆಸಿ ವಾಪಸ್ಸಾಗಿದ್ದಾರೆ.