ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lok Adalat: ಅಣ್ಣ ತಮ್ಮಂದಿರು ತಮ್ಮ ಆಸ್ತಿಪಾಸ್ತಿಗಳ ಸಮಸ್ಯೆಗಳನ್ನು ಮೂಲದಲ್ಲೇ ಬಗೆ ಹರಿಸಿಕೊಳ್ಳಿ : ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಮನವಿ

ಅಣ್ಣ ತಮ್ಮಂದಿರು ತಮ್ಮ ಜಮೀನು, ಆಸ್ತಿಪಾಸ್ತಿಗಳ ಸಮಸ್ಯೆಗಳನ್ನು ಮೂಲದಲ್ಲೇ ಬಗೆ ಹರಿಸಿ ಕೊಂಡರೆ ಸಮಸ್ಯೆಗಳು ಪ್ರಕರಣಗಳಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಶ್ಯಕತೆ ಇರುವುದಿಲ್ಲ ಎಂದ ಅವರು ಅಣ್ಣತಮ್ಮಂದಿರ ಆಸ್ತಿ ಸಮಸ್ಯೆಗಳು ನ್ಯಾಯಾಲಯದ ಮೆಟ್ಟಿಲು ಏರಿದಲ್ಲಿ ಸಂಬಂಧ ಗಳು ಹದಗೆಡುತ್ತವೆ ಎಂದರು.

ಲೋಕ ಅದಾಲತ್ ನಲ್ಲಿ ನೀಡುವ ತೀರ್ಪು ನ್ಯಾಯಾಲಯದಲ್ಲಿ ಸಹಜವಾಗಿ ನಡೆಯುವ ಪ್ರಕರಣಗಳ ತೀರ್ಪುಗಳಿಗಿಂತ ಭಿನ್ನವಾಗಿದ್ದು ಉಭಯ ಕಕ್ಷಿದಾರರಿಗೂ ಸಮಾಧಾನ ಮತ್ತು ನೆಮ್ಮದಿ ಹಾಗೂ ಸಮಯ ಉಳಿತಾಯವಾಗಲಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ತಿಳಿಸಿದರು.

ಚಿಕ್ಕಬಳ್ಳಾಪುರ : ಲೋಕ ಅದಾಲತ್ ನಲ್ಲಿ ನೀಡುವ ತೀರ್ಪು ನ್ಯಾಯಾಲಯದಲ್ಲಿ ಸಹಜವಾಗಿ ನಡೆಯುವ ಪ್ರಕರಣಗಳ ತೀರ್ಪುಗಳಿಗಿಂತ ಭಿನ್ನವಾಗಿದ್ದು ಉಭಯ ಕಕ್ಷಿದಾರರಿಗೂ ಸಮಾಧಾನ ಮತ್ತು ನೆಮ್ಮದಿ ಹಾಗೂ ಸಮಯ ಉಳಿತಾಯವಾಗಲಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ(Principal District and Sessions Judge T.P.Ramalinge gowda) ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮೆಗಾ ಲೋಕ ಅದಾಲತ್‌ಗೆ ಚಾಲನೆ ನೀಡಿ ಮಾತನಾಡಿದರು.

ಅಣ್ಣ ತಮ್ಮಂದಿರು ತಮ್ಮ ಜಮೀನು, ಆಸ್ತಿಪಾಸ್ತಿಗಳ ಸಮಸ್ಯೆಗಳನ್ನು ಮೂಲದಲ್ಲೇ ಬಗೆ ಹರಿಸಿ ಕೊಂಡರೆ ಸಮಸ್ಯೆಗಳು ಪ್ರಕರಣಗಳಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಶ್ಯಕತೆ ಇರುವು ದಿಲ್ಲ ಎಂದ ಅವರು ಅಣ್ಣತಮ್ಮಂದಿರ ಆಸ್ತಿ ಸಮಸ್ಯೆಗಳು ನ್ಯಾಯಾಲಯದ ಮೆಟ್ಟಿಲು ಏರಿದಲ್ಲಿ ಸಂಬAಧಗಳು ಹದಗೆಡುತ್ತವೆ ಎಂದರು.

ಕೋರ್ಟಿಗೆ ಬರುವುದರಿಂದ ರಕ್ತಸಂಬಂಧ ಹಾಳಾಗುವ ಜತೆಗೆ ನೆಮ್ಮದಿ ಹಾಳಾಗಿ ದ್ವೇಷ ಅಸೂಯೆ ಗಳ ಹೆಚ್ಚಳಕ್ಕೂ ಕಾರಣವಾಗುತ್ತದೆ. ಕುಟುಂಬಗಳ ಹಂತದಲ್ಲೇ ತಂದೆ ಸಂಪಾದನೆಯ ಆಸ್ತಿಪಾಸ್ತಿ ಗಳನ್ನು ನ್ಯಾಯಯುತ ರೀತಿಯಲ್ಲಿ ಮುಕ್ತವಾಗಿ ಹಂಚಿಕೊAಡರೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದರು.

ಇದನ್ನೂ ಓದಿ: Lok Adalat: ಲೋಕ್ ಅದಾಲತ್ ಮುನ್ನಾ ದಿನವೇ : ಮುನಿಸು ಮರೆತು ಮತ್ತೆ ಒಂದಾದ ದಂಪತಿಗಳು

ಸಣ್ಣಪುಟ್ಟ ವಿಸ್ತೀರ್ಣದ ಜಮೀನುಗಳಿಗಾಗಿ ಪ್ರತಿಷ್ಠೆಗಳಿಗೆ ಬಿದ್ದು ಅನೇಕರು ನ್ಯಾಯಾಲಯಗಳಲ್ಲಿ ಪ್ರಕರಣಗಳಿಗೆ ತಲೆಮಾರುಗಟ್ಟಲೇ  ಮತ್ತು ಅನೇಕ ವರ್ಷಾನುಗಟ್ಟಲೆ ಓಡಾಡುತ್ತಿರುವವರು ಅನೇಕರಿದ್ದಾರೆ. ಪ್ರತಿ ಸಣ್ಣಪುಟ್ಟ ವಿಚಾರಗಳನ್ನೂ ವ್ಯಾಜ್ಯಗಳನ್ನಾಗಿ ಪರಿವರ್ತಿಸಿಕೊಳ್ಳಬಾರದು. ಸಂಯಮದಿಂದ ಪರಿಸ್ಥಿತಿಗಳನ್ನು ನಿಭಾಯಿಸಿ ಮುಂದೆ ಎದುರಾಗುವ ಸಮಸ್ಯೆಗಳಿಗೆ ಮೂಲದಲ್ಲೇ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.

ಪ್ರಕರಣಗಳು ದಾಖಲಾಗುವುದರಿಂದ ಅಮೂಲ್ಯವಾದ ಸಮಯ,ಹಣ, ನೆಮ್ಮದಿ ಹಾಳಾಗುತ್ತದೆ. ಜೊತೆಗೆ ನ್ಯಾಯಾಲಯಗಳಲ್ಲೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗಿರುವುದರಿಂದ ನ್ಯಾಯಾ ಲಯಗಳ ಮೇಲೂ ಒತ್ತಡ ಅಧಿಕವಾಗಿ ಹೊರೆಯೂ ಹೆಚ್ಚಾಗುತ್ತದೆ. ಇದರಿಂದ ಪ್ರಕರಣಗಳನ್ನು ಇತ್ಯರ್ಥಪಡಿಸುವುದು ಸಹಜವಾಗಿ ತಡವಾಗುತ್ತದೆ. ಕೆಲವೊಮ್ಮೆ ದೀರ್ಘಕಾಲ ಹಿಡಿಯುತ್ತದೆ, ಇದನ್ನು  ತಡೆಗಟ್ಟವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆರಂಭಿಸಿದೆ. ಈ ಅದಾಲತ್ ಮೂಲಕ ನ್ಯಾಯಾಲಯದಲ್ಲಿ ಹಾಲಿ ಇರುವ ವಿವಿಧ ಕೆಲವು ಪ್ರಕರಣಗಳು, ವ್ಯಾಜ್ಯಪೂರ್ವ ಪ್ರಕರಣಗಳನ್ನು ವಕೀಲರ ಸಹಕಾರದೊಂದಿಗೆ ಕಕ್ಷಿದಾರರ ಪರಸ್ಪರ  ರಾಜಿ,ಸಂಧಾನದೊಂದಿಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಅದಾಲತ್ ನಲ್ಲಿ ಪ್ರಕರಣ ಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗುವುದರಿಂದ ಪ್ರಕರಣಗಳಿಗೆ ಶೀಘ್ರ ಮುಕ್ತಿ ದೊರೆಯುತ್ತದೆ. ಹಣ, ಸಮಯ ಉಳಿಯುವ ಜೊತೆಗೆ ಪದೇ ಪದೇ ನ್ಯಾಯಾಲಯಕ್ಕೆ ಅಲೆಯುವುದು ತಪ್ಪುತ್ತದೆ ಎಂದರು.

lokaadal

ಜಿಲ್ಲೆಯಲ್ಲಿ ಎರಡನೇ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಆದಾಲತ್‌ನಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿರಾಮಲಿಂಗೇಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯ ಒಟ್ಟು ಪಕರಣಗಳಾದ 50870 ಪೈಕಿ ಜಿಲ್ಲೆಯ ಹಾಗೂ ತಾಲ್ಲೂಕಿನ ಎಲ್ಲಾ ನ್ಯಾಯಾಧೀಶರ ಸತತ ಪುಯತ್ನದಿಂದಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪುಕರಣಗಳಲ್ಲಿ ಒಟ್ಟು 10754 ಪುಕರಣ ಗಳನ್ನು ಗುರುತಿಸಿದ್ದು, ಅದರಲ್ಲಿ 7171  ಪುಕರಣಗಳು ರಾಜಿಯಾಗಿರುತ್ತದೆ ಎಂದು ಕೋರ್ಟಿನ ಮೂಲದ ಮಾಹಿತಿಯಾಗಿದೆ.

ವ್ಯಾಜ್ಯ ಪೂರ್ವ ಪುಕರಣಗಳಿಗೆ ಸಂಬಂಧಿಸಿದಂತೆ 97743 ಗಳನ್ನು ಗುರುತಿಸಿದ್ದು, ಅದರಲ್ಲಿ 90101 ಪ್ರಕರಣಗಳು ರಾಜಿಯಾಗಿದ್ದು, ಒಟ್ಟು ಮೊತ್ತ ರೂ, 21,32,84377 ರೂಗಳಷ್ಟು ರಾಜಿ ಸಂಧಾನದ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥ ಪಡಿಸಲಾಗಿದೆ.

ಆಸ್ತಿ ವಿವಾದದ ಸಿವಿಲ್ ಪುಕರಣಗಳು, ಅಣ್ಣ ತಮ್ಮಂದಿರ ಮಧ್ಯೆ ಇರುವ ಪಾಲು ವಿಭಾಗ ಕೋರಿ ಸಲ್ಲಿಸಿದ ಪ್ರಕರಣಗಳು ಬ್ಯಾಂಕ್ ಸಾಲದ ವಸೂಲಾತಿ ಪುಕರಣಗಳು, ರಸ್ತೆ ನಿಯಮ ಉಲ್ಲಂಘನೆ ದಂಡ ವಸೂಲಾತಿ ಪ್ರಕರಣಗಳು, ಮರಳು ಕಳ್ಳತನ ಪ್ರಕರಣಗಳು ರಾಜಿ ಆಗುವಂತಹ ಅಪರಾಧಿ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು ಹೀಗೆ ಹಲವಾರು ಬಗೆಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು.

ವೈವಾಹಿಕ ವಿಚ್ಛೇದನ ಪಕರಣಗಳಲ್ಲಿ ಒಟ್ಟು 12 ಪುಕರಣಗಳಲ್ಲಿ ರಾಜಿ ಮಾಡಿ ಒಂದುಗೂಡಿಸ ಲಾಯಿತು.

ಈ ಸಂದರ್ಭದಲ್ಲಿ  ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಸೇರಿದಂತೆ ವಕೀಲರು, ಕಕ್ಷಿದಾರರು ಭಾಗವಹಿಸಿದ್ದರು.