ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಿಎಸ್‌ಎಸ್ ಮೈಕ್ರೋಫೈನಾನ್ಸ್ ವತಿಯಿಂದ ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜಿನ 250 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಒಂದು ಕಡೆ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿಗೆ ಕಿರುಕುಳ ಮಾಡುವ ಘಟನೆಗಳು ನಡೆಯುತ್ತಿವೆ ಇದರ ನಡುವೆ ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಲಿಮಿಟೆಡ್ ಸಾಮಾ ಜಿಕ ಜವಾಬ್ದಾರಿ ಹೊತ್ತು ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ.ಶಿಕ್ಷಣಕ್ಕೆ ನೆರವು ಯಾರೇ ನೀಡಿದರೂ ಅದನ್ನು ಸ್ವಾಗತಿಸುತ್ತೇವೆ

ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಕೆಲಸ

ಅಂಬೇಡ್ಕರ್ ಭವನದಲ್ಲಿ ನಡೆದ ಬಿಎಸ್‌ಎಸ್ ಕಂಪನಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಮಾಡಿ ಎಸ್ಪಿ ಮಾತನಾಡಿದರು.

Profile Ashok Nayak Mar 27, 2025 8:58 PM

ಚಿಕ್ಕಬಳ್ಳಾಪುರ : ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಶೇ.60 ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡುತ್ತಿರುವುದು ಬಿಎಸ್‌ಎಸ್ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಲಿಮಿಟೆಡ್ ಕಂಪೆನಿ ವತಿಯಿಂದ ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜಿ ನಲ್ಲಿ ವ್ಯಾಸಂಗ ಮಾಡುತ್ತಿರುವ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಕಾರ್ಯಕ್ರಮದಲ್ಲಿ ವಿಶೇಷ ಅಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು.

ಒಂದು ಕಡೆ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿಗೆ ಕಿರುಕುಳ ಮಾಡುವ ಘಟನೆಗಳು ನಡೆಯುತ್ತಿವೆ ಇದರ ನಡುವೆ ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಲಿಮಿಟೆಡ್ ಸಾಮಾಜಿಕ ಜವಾಬ್ದಾರಿ ಹೊತ್ತು ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ.ಶಿಕ್ಷಣಕ್ಕೆ ನೆರವು ಯಾರೇ ನೀಡಿದರೂ ಅದನ್ನು ಸ್ವಾಗತಿಸು ತ್ತೇವೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕುಗ್ಗಬಾರದು.ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು. ಸೋಮಾರಿತನವೇ ವಿದ್ಯಾರ್ಥಿಗಳ ಪರಮ ವೈರಿ. ಇದನ್ನು ಬಿಟ್ಟು
ನಿರಂತರ ಶ್ರಮ ವಹಿಸಿದರೆ ಗುರಿ ಮುಟ್ಟಲು ಸಾಧ್ಯ ಎಂದರು.

ಇದನ್ನೂ ಓದಿ: Chikkaballapur News: ಬಲಿಜ ಕುಲ ಬಾಂಧವರು ಸಂಘಟಿತರಾಗಬೇಕು : ವೆಂಕಟೇಶ್

ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಲಿಮಿಟೆಡ್ ನಿಮ್ಮ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ನೀಡಿದ್ದಾರೆ. ಇದನ್ನು ಸೌಭಾಗ್ಯ ಎಂದು ತಿಳಿದು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್.ಪಿ ಕುಶಾಲ್ ಚೌಕ್ಸೆ ಸೈಬರ್ ಅಪರಾಧ,ಸಂಚಾರಿ ನಿಯಮ, ದುಶ್ಚಟಗಳು, ಡಿಜಿಟಲ್ ಅರೆಸ್ಟ್, ಮೊಬೈಲ್ ಫೋನ್ ಮಿತಿ ಬಳಕೆ ಬಗ್ಗೆ ತಿಳಿ ಹೇಳಿ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಪ್ರತಿ ಅಪರಾಧದ ಕುರಿತು ಜನರಿಗೆ ಅರಿವು ಮೂಡಿಸ ಲಾಗುತ್ತಿದೆ ಎಂದರು.

ಬಿಎಸ್‌ಎಸ್ ಮೈಕ್ರೋಫೈನಾನ್ಸ್ನ ಪಂಚಾಕ್ಷರಿ ಮಾತನಾಡಿ ಈ ಸಂಸ್ಥೆ ಕಳೆದ 27 ವರ್ಷ ಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ರಾಜ್ಯದಲ್ಲಿ ೨೫೦ ಶಾಖೆಗಳು ಹೊಂದಿದೆ,ಇದರ ಮುಖ್ಯ ಉದ್ದೇಶ ಮಹಿಳೆಯರ ಸಬಲೀಕರಣ,ಅವರ ಆರ್ಥಿಕತೆ ಉತ್ತಮ ಪಡಿಸುವುದಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಸಾಲದ ರೂಪದಲ್ಲಿ ಬಂಡವಾಳ ನೀಡಲಾಗುತ್ತಿದ್ದು ಇದರ ಉಪಯೋಗ ಪಡೆದು ಮಹಿಳೆಯರು ಉತ್ತಮ ಜೀವನ ನಡೆಸುತ್ತಿದ್ದಾರೆ.

ಇನ್ನು ನಮ್ಮ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ವಿಭಾಗ(ಸಿ ಎಸ್ ಆರ್) ಕಾರ್ಯಕ್ರಮದ ಮೂಲಕ ಗ್ರಾಮದ ಆರ್ಥಿಕತೆ,ಗ್ರಾಮೀಣ ಶಿಕ್ಷಣ, ಹೈನೋದ್ಯಮ ಹಾಗೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಐದು ಸಾವಿರ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ಇನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮೊಟಕಾಗಬಾರದು ಎಂದು 2023-24 ಸಾಲಿನಲ್ಲಿ ಸರ್ಕಾರಿ ಶಾಲಾ ಕಾಲೇಜಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 60 ರಷ್ಟು ಅಂಕ ಪಡೆದ ರಾಜ್ಯದ 16 ಜಿಲ್ಲೆಗಳಲ್ಲಿ ಜಿಲ್ಲೆಗೆ ತಲಾ 300 ವಿಧ್ಯಾರ್ಥಿಗಳಂತೆ 5000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಚಾರಿ ಮಾತನಾಡಿ ಜೀವನನ್ನು ರೊಪಿಸು ವಂತಹ ಏಕೈಕ ಮಾರ್ಗ ವಿದ್ಯೆ, ವಿದ್ಯೆಯಿಂದಲೇ ದೊಡ್ಡ ಹುದ್ದೆಗಳನ್ನು ಅಲಂಕರಿಸಲು ಸಾಧ್ಯ ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಉಪಯುಕ್ತ ಮಾಹಿತಿ ಪಡೆಯಲು ಮಾತ್ರ ಮೊಬೈಲ್ ಬಳಕೆ ಮಾಡಿ. ಸಮಾಜಕ್ಕೆ ಕೊಡುಗೆ ನೀಡುವ ದೃಡ ಸಂಕಲ್ಪದೊಂದಿಗೆ ಮುನ್ನಡೆಯಬೇಕೆಂದ ಅವರು ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಕಂಪನಿಯ ಸಾಮಾಜಿಕ ಕಳಕಳಿಗೆ ಶರಣು ಎಂದರು.

ಕಾರ್ಯಕ್ರಮದಲ್ಲಿ ಲೀಡ್ ಜಿಲ್ಲಾ ವ್ಯವಸ್ಥಾಪಕ ವಿ.ನಾಗರಾಜ್,ಬಿ ಎಸ್ ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಸಹಾಯಕ ವ್ಯವಸ್ಥಾಪಕ ಪ್ರಶಾಂತ್ ಕುಮಾರ್,ಜೂ?ನಲ್ ಮ್ಯಾನೇಜರ್ ಬಿ ಎನ್ ರಂಗನಾಥ್, ಸಹಾಯಕ ಜೂ?ನಲ್ ಮ್ಯಾನೇಜರ್ ಅಭಿ, ಸ್ಟೇಟ್ ಟ್ರೈನರ್ ಕರುಣ ಕುಮಾರ್ ಇತರರು ಉಪಸ್ಥಿತರಿದ್ದರು.