ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಜು.11ರಂದು ಬೆಂಗಳೂರಿಗೆ ಚಿಂತಾಮಣಿಯಿಂದ ಬಸ್ ವ್ಯವಸ್ಥೆ; ಸರ್ಕಾರಿ ನೌಕರರಿಗೆ ಆರ್. ಅಶೋಕ್ ಕುಮಾರ್ ಕರೆ

ಜು.11ರಂದು ಬೆಳಗ್ಗೆ 7 ಗಂಟೆಗೆ ಚಿಂತಾಮಣಿ ನಗರದ ಸರ್ಕಾರಿ ಭವನದ ಮುಂಭಾಗದಿಂದ ಬೆಂಗಳೂರಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ನೌಕರರು, ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಈ ಸೌಲಭ್ಯವನ್ನು ಬಳಸಿ ಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಚಿಂತಾಮಣಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜು.11ರಂದು ನಡೆಯಲಿರುವ 'ನಮ್ಮ ಅಭಿಮಾನದ ಅಭಿನಂದನೆ' ಬೃಹತ್ ಕಾರ್ಯಕ್ರಮದಲ್ಲಿ ಚಿಂತಾಮಣಿ ತಾಲ್ಲೂಕಿನ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಅಶೋಕ್ ಕುಮಾರ್ ಕರೆ ನೀಡಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಮ್ಮುಖ ದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Chinthamani News: ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ: ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ!

ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗಳಾದ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿ, ಕೇಂದ್ರದ ಸಮಾನ ವೇತನ ಜಾರಿಗೆ ಹಕ್ಕೊತ್ತಾಯ ಸೇರಿದಂತೆ ಪ್ರಮುಖ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಜು.11ರಂದು ಬೆಳಗ್ಗೆ 7 ಗಂಟೆಗೆ ಚಿಂತಾಮಣಿ ನಗರದ ಸರ್ಕಾರಿ ಭವನದ ಮುಂಭಾಗದಿಂದ ಬೆಂಗಳೂರಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ನೌಕರರು, ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಈ ಸೌಲಭ್ಯವನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಆಂಜನೇಯಪ್ಪ, ಖಜಾಂಚಿ ಜನಾರ್ದನ ಮೂರ್ತಿ, ರಾಜ್ಯ ಪರಿಷತ್ ಸದಸ್ಯ ಕೆ.ಆರ್. ಮಂಜುನಾಥ್, ಉಪಾಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಡಾ. ಮುನಿರೆಡ್ಡಿ, ನಿರ್ದೇಶಕರಾದ ಪ್ರಸನ್ನ, ತಿಮ್ಮಯ್ಯ ಸೇರಿದಂತೆ ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.