ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

B Y Vijayendra: ಹಂಡಿಗನಾಳದಿಂದ ಪಾದಯಾತ್ರೆ; ಅಕ್ಟೋಬರ್ 2ರಂದು ಶಿಡ್ಲಘಟ್ಟಕ್ಕೆ ಬಿ.ವೈ.ವಿಜಯೇಂದ್ರ

ವಿಜಯೇಂದ್ರ ಅವರು ಶಿಡ್ಲಘಟ್ಟಕ್ಕೆ ಆಗಮಿಸುವ ಸಂದರ್ಭದಲ್ಲಿ ಹಂಡಿಗನಾಳ ಸಮೀಪದಲ್ಲಿ ಪಕ್ಷದ ವತಿಯಿಂದ ಸ್ವಾಗತ ಕೋರಲಾಗುವುದು. ಅಲ್ಲಿಂದ ಪಾದಯಾತ್ರೆಯ ಮೂಲಕ ನಗರದತ್ತ ತೆರಳಲಿದ್ದಾರೆ. ಬಳಿಕ ನಗರದ ಕೋಟೆ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ ಎಂದು ವಿವರಿಸಿದರು.

ಶಿಡ್ಲಘಟ್ಟ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(B Y Vijayendra) ಅವರು ಅಕ್ಟೋಬರ್ 2ರಂದು ಶಿಡ್ಲಘಟ್ಟಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ನಗರದ ಬಿಜೆಪಿ ಸೇವಾ ಸೌಧ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರ ಭೇಟಿಯ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಹಲವು ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ವಿಜಯೇಂದ್ರ ಅವರು ಶಿಡ್ಲಘಟ್ಟಕ್ಕೆ ಆಗಮಿಸುವ ಸಂದರ್ಭದಲ್ಲಿ ಹಂಡಿಗನಾಳ ಸಮೀಪದಲ್ಲಿ ಪಕ್ಷದ ವತಿಯಿಂದ ಸ್ವಾಗತ ಕೋರಲಾಗುವುದು. ಅಲ್ಲಿಂದ ಪಾದಯಾತ್ರೆಯ ಮೂಲಕ ನಗರದತ್ತ ತೆರಳಲಿದ್ದಾರೆ. ಬಳಿಕ ನಗರದ ಕೋಟೆ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ ಎಂದು ವಿವರಿಸಿದರು.

ಇದನ್ನೂ ಓದಿ: B Y Vijayendra Interview: ಸವಾಲು, ಗೊಂದಲ ಮೀರಿ 2028ರಲ್ಲಿ ಬಿಜೆಪಿಗೇ ಅಧಿಕಾರ

ನಂತರ ವಾಸವಿ ಶಾಲಾ ಆವರಣದಲ್ಲಿ ‘ಮೋದಿಜಿ ಹೆಸರಲ್ಲಿ ಸೇವಾ ಸಂಕಲ್ಪ’ ಕಾರ್ಯಕ್ರಮದಡಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪರಿಸರ ಸಂರಕ್ಷಣೆ ಹಾಗೂ ಸೇವಾ ಚಟುವಟಿಕೆಗ ಳಿಗೆ ಒತ್ತು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಮಚಂದ್ರ ಗೌಡ ಹೇಳಿದರು.

ವಿಜಯೇಂದ್ರ ಅವರ ಭೇಟಿಯ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಬಿಜೆಪಿ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೀಕಲ್ ಆನಂದ್‌ಗೌಡ, ದೇವರಾಜು, ಸುರೇಂದ್ರಗೌಡ, ಕನಕಪ್ರಸಾದ್, ಕೊತ್ತನೂರು ರವಿಚಂದ್ರ, ಚೆಲುವರಾಜ್, ಬಾಲು, ರಾಮಕೃಷ್ಣ, ಸುಬ್ಬು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.