ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ಜೂ.10ರಂದು ಕಾಂಗ್ರೆಸ್ ಭವನದಲ್ಲಿ ಕೇಕ್ ಕಟಿಂಗ್, ಬಿರಿಯಾನಿ ಊಟ; ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು|

ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಜೂನ್ 10ರಂದು ಶಿಡ್ಲಘಟ್ಟದಲ್ಲಿ ಅದ್ದೂರಿ ಸಂಭ್ರಮಾ ಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶಿಡ್ಲಘಟ್ಟ ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರುಗಳು ಸಂಭ್ರಮಾಚರಣೆ ಕುರಿತು ಚರ್ಚೆ ನಡೆಯಿತು

ಶಿಡ್ಲಘಟ್ಟ: ಇದು ಕೇವಲ ಸಂಭ್ರಮಾಚರಣೆಯ ಕಾರ್ಯಕ್ರಮವಲ್ಲ; ಕಾಂಗ್ರೆಸ್ ಪಕ್ಷದ ಒಗ್ಗಟ್ಟು, ಶಕ್ತಿ ಮತ್ತು ಕಾರ್ಯಕರ್ತರ ಉತ್ಸಾಹದ ಪ್ರತೀಕವಾಗಿದೆ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು" ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಹಾಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಜೂನ್ 10ರಂದು ಶಿಡ್ಲಘಟ್ಟದಲ್ಲಿ ಅದ್ದೂರಿ ಸಂಭ್ರಮಾ ಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

"ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿದ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸ್ಥಾನಕ್ಕೇರಿರುವುದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಹೆಮ್ಮೆಯ ಸಂಗತಿಯಾಗಿದೆ. ಅವರ ಹೋರಾಟ, ಸಂಘಟನಾ ಶಕ್ತಿ ಮತ್ತು ಪಕ್ಷದ ಮೇಲಿನ ನಿಷ್ಠೆಗೆ ದೊರೆತ ಗೌರವ ಇದಾಗಿದೆ. ಆದ್ದರಿಂದ ಈ ಸಂತಸದ ಕ್ಷಣವನ್ನು ಜನರೊಂದಿಗೆ ಹಾಗೂ ಕಾರ್ಯಕರ್ತ ರೊಂದಿಗೆ ಹಂಚಿಕೊಳ್ಳಲು ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ" ಎಂದು ಹೇಳಿದರು.

ಇದನ್ನೂ ಓದಿ: Shidlaghatta News: ಸಲ್ಲಾಪುರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ; ಸಾರ್ವಜನಿಕರಿಗೆ ಬಿರಿಯಾನಿ ವಿತರಣೆ

ಜೂ.10ರಂದು ಶಿಡ್ಲಘಟ್ಟ ನಗರದ ಕಾಂಗ್ರೆಸ್ ಭವನದಲ್ಲಿ ಕೇಕ್ ಕಟಿಂಗ್, ಸಿಹಿ ವಿತರಣೆ, ಬಿರಿಯಾನಿ ಊಟ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ತಾಲೂಕಿನ ಎಲ್ಲಾ ಗ್ರಾಮಗಳು ಹಾಗೂ ನಗರ ಪ್ರದೇಶಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

"ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ಅಧ್ಯಾಯ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷದ ಶಕ್ತಿ ಕಾರ್ಯಕರ್ತರೇ ಆಗಿದ್ದು, ಅವರ ಉತ್ಸಾಹ ಮತ್ತು ಒಗ್ಗಟ್ಟಿನ ಪ್ರತೀಕವಾಗಿ ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಆಚರಿಸ ಲಾಗುತ್ತಿದೆ" ಎಂದು ರಾಜೀವ್ ಗೌಡ ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿದ್ದು, ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಮನೆಮಾಡಿದೆ. ಜೂ.10 ರಂದು ನಡೆಯಲಿರುವ ಈ ಸಂಭ್ರಮಾಚರಣೆ ಕ್ಷೇತ್ರದ ರಾಜಕೀಯ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ, ಚಿಲಕಲನೆರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂಪಲ್ಲಿ ಕೃಷ್ಣಾರೆಡ್ಡಿ ಡಾಲ್ಫಿನ್ ನಾಗರಾಜು, ರಾಯಪ್ಪಲ್ಲಿ ಅಶ್ವಥ್, ನಾರಾಯಣರೆಡ್ಡಿ, ಅಪ್ಸರ್ ಪಾಷ, ಕಂಪನಿ ದೇವರಾಜು, ಬ್ಯಾಟರಾಯಶೆಟ್ಟಿ, ಡಿ.ಪಿ.ನಾಗರಾಜು , ಗೋಪಾಲ ರೆಡ್ಡಿ, ಮೇಲೂರು ಮಂಜುನಾಥ್, ಸಾದಲಿ ಗೋವಿಂದ ರಾಜು, ಸಮಿವುಲ್ಲಾ, ನಾಗನರಸಿಂಹ, ಮೌಲಾ, ರಿಯಾಜ್ ಪಾಷ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಮುಂತಾದವರು ಹಾಜರಿದ್ದರು.