ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gudibande News: ಸಮಾವೇಶ ಯಶಸ್ವಿಗೆ ಕರೆ: ಗುಡಿಬಂಡೆಯಲ್ಲಿ ಪೂರ್ವಭಾವಿ ಸಭೆ

ರಾಜ್ಯ ಸರ್ಕಾರದಲ್ಲಿ 7.75 ಲಕ್ಷ ಹುದ್ದೆಗಳು ಮಂಜೂರಾಗಿದ್ದರೂ, ಪ್ರಸ್ತುತ ಸುಮಾರು 4 ಲಕ್ಷ ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 2.84 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಉಳಿದಿವೆ. ಅಲ್ಲದೆ, 24 ಸಾವಿರಕ್ಕೂ ಅಧಿಕ ಬ್ಯಾಕ್‌ಲಾಗ್ ಹುದ್ದೆಗಳು ಭರ್ತಿಯಾಗದೆ ಇರುವುದರಿಂದ ಎಸ್ಸಿ/ಎಸ್ಟಿ ಸಮುದಾಯ ಕ್ಕೆ ಮೀಸಲಾತಿಯ ಸಂಪೂರ್ಣ ಪ್ರಯೋಜನ ದೊರೆಯುತ್ತಿಲ್ಲ

ಗುಡಿಬಂಡೆ ಪಟ್ಟಣದ ಪಿಎಂ ಶ್ರೀ ಸರ್ಕಾರಿ ಶಾಲೆಯಲ್ಲಿ ಆ.28ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್‌ನಲ್ಲಿ ರಾಜ್ಯಮಟ್ಟದ 6ನೇ ಎಸ್ಸಿ-ಎಸ್ಟಿ ನೌಕರರ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.

ಗುಡಿಬಂಡೆ: ಸರ್ಕಾರಿ ಇಲಾಖೆಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.28ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್‌ನಲ್ಲಿ ರಾಜ್ಯಮಟ್ಟದ 6ನೇ ಎಸ್ಸಿ-ಎಸ್ಟಿ ನೌಕರರ ಐಕ್ಯತಾ ಸಮಾವೇಶ ನಡೆಯಲಿದ್ದು, ಈ ಸಮಾವೇಶದ ಕುರಿತು ನೌಕರರಲ್ಲಿ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುವ ಉದ್ದೇಶದಿಂದ ಗುಡಿಬಂಡೆ ಪಟ್ಟಣದ ಪಿಎಂ ಶ್ರೀ ಸರ್ಕಾರಿ ಶಾಲೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯ ತಾಲೂಕು ಅಧ್ಯಕ್ಷ ವಿ. ಶ್ರೀರಾಮಪ್ಪ ಮಾತನಾಡಿ, ಸರ್ಕಾರಿ ಇಲಾಖೆಗಳಲ್ಲಿರುವ ಎಸ್ಸಿ-ಎಸ್ಟಿ ನೌಕರರು ಎದುರಿಸುತ್ತಿರುವ ತಾರತಮ್ಯವನ್ನು ತಡೆಯಲು ಹಾಗೂ ತಮ್ಮ ಹಕ್ಕುಗಳನ್ನು ಪಡೆಯಲು ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ ಸಂಘಟಿತರಾಗಬೇಕು.

ಇದನ್ನೂ ಓದಿ: Gudibande News: ರಕ್ತದಾನದಿಂದ ಮಾನವೀಯತೆ, ಸೇವಾ ಮನೋಭಾವ ಬೆಳೆಯುತ್ತದೆ: ರಾಜಯೋಗಿನಿ ಪದ್ಮಾ

ರಾಜ್ಯ ಸರ್ಕಾರದಲ್ಲಿ 7.75 ಲಕ್ಷ ಹುದ್ದೆಗಳು ಮಂಜೂರಾಗಿದ್ದರೂ, ಪ್ರಸ್ತುತ ಸುಮಾರು 4 ಲಕ್ಷ ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 2.84 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಉಳಿದಿವೆ. ಅಲ್ಲದೆ, 24 ಸಾವಿರಕ್ಕೂ ಅಧಿಕ ಬ್ಯಾಕ್‌ಲಾಗ್ ಹುದ್ದೆಗಳು ಭರ್ತಿಯಾಗದೆ ಇರುವುದರಿಂದ ಎಸ್ಸಿ/ಎಸ್ಟಿ ಸಮುದಾಯಕ್ಕೆ ಮೀಸಲಾತಿಯ ಸಂಪೂರ್ಣ ಪ್ರಯೋಜನ ದೊರೆಯುತ್ತಿಲ್ಲ. ಆ.28ರಂದು ನಡೆಯುವ ಸಮಾವೇಶದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಜನಪ್ರತಿನಿಧಿಗಳು, ದಲಿತ ಹಾಗೂ ಹಿಂದುಳಿದ ವರ್ಗಗಳ ಮುಖಂಡರು ಮತ್ತು ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ನರಸಿಂಹಮೂರ್ತಿ ಮಾತನಾಡಿ, ತಾಲೂಕಿನ ಎಸ್ಸಿ/ಎಸ್ಟಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯ ಖಜಾಂಚಿ ಯು. ರಾಮಾಂಜಿನೇಯ, ಪದಾಧಿಕಾರಿಗಳಾದ ನಾರಾಯಣಸ್ವಾಮಿ, ಸಿ. ಮಂಜೇನಾಯ್ಕ್, ರಾಜಪ್ಪ, ಎಂ.ನಾರಾಯಣಪ್ಪ, ನರಸಿಂಹಮೂರ್ತಿ, ಅಶ್ವತಪ್ಪ ಜಿ., ವೇಣುಗೋಪಾಲ್, ವೈ.ಕೆ. ರಮೇಶ್ ಹಾಗೂ ನಾಗರಾಜ್ ಉಪಸ್ಥಿತರಿದ್ದರು.