ಚಿಂತಾಮಣಿ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಜನಗಣತಿ ಕಾರ್ಯ ಕ್ರಮವು ಚಿಂತಾಮಣಿ ನಗರ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಅಧಿಕೃತವಾಗಿ ಚಾಲನೆ ಪಡೆಯಲಿದೆ ಎಂದು ಚಿಂತಾಮಣಿ ನಗರಸಭೆ ಪೌರಾಯುಕ್ತರಾದ ಜೆ.ಎನ್. ಚಲಪತಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಜನಗಣತಿ ಪ್ರಕ್ರಿಯೆ ಜನಗಣತಿ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿದೆ.
ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ಸಾರ್ವಜನಿಕರು ಸ್ವಯಂ ಘೋಷಿತವಾಗಿ ಮಾಹಿತಿ ನೀಡಲು ಅವಕಾಶವಿದೆ.ಸಾರ್ವಜನಿಕರು ಎಲೆಕ್ಷನ್ ಕಮಿಷನ್ ಪೋರ್ಟಲ್‌ಗೆ ಲಾಗಿನ್ ಆಗಿ ತಮ್ಮ ಕುಟುಂಬದ ವಿವರಗಳನ್ನು ದಾಖಲಿಸಬಹುದು.
ಇದನ್ನೂ ಓದಿ: Chinthamani News: ಮನಸ್ಸು ಸ್ಥಿರವಾಗಿಸಲು ಗುರುಚಿಂತನೆ ಅಗತ್ಯ: ಡಾ.ಜಯರಾಮ್
ಏಪ್ರಿಲ್ ೧೫ರ ನಂತರ ನುರಿತ ಬಿಎಲ್‌ಒ ಹಾಗೂ ಶಿಕ್ಷಕರು ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.ನಗರದ ಪ್ರತಿ ಬ್ಲಾಕ್‌ಗೆ ಒಬ್ಬರಂತೆ ಒಟ್ಟು 140 ಬಿಎಲ್‌ಒ ಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ವಿವರಿಸಿದರು.
ಜನಗಣತಿಯ ಸಂದರ್ಭದಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯು ಅತ್ಯಂತ ಗೌಪ್ಯ ವಾಗಿರುತ್ತದೆ. ಈ ಮಾಹಿತಿಯನ್ನು ಯಾವುದೇ ತನಿಖಾ ಸಂಸ್ಥೆಗಳಿಗಾಗಲಿ ಅಥವಾ ಇತರ ಉದ್ದೇಶಗಳಿಗಾಗಲಿ ಬಳಸಲಾಗುವುದಿಲ್ಲ. ಇದು ಕೇವಲ ರಾಷ್ಟ್ರದ ಅಭಿವೃದ್ಧಿ ಮತ್ತು ಯೋಜನಾ ರೂಪಣೆಯ ಉದ್ದೇಶಕ್ಕಾಗಿ ಮಾತ್ರ ಬಳಸಲ್ಪಡುತ್ತದೆ ಎಂದು ಪೌರಾಯುಕ್ತರು ಸ್ಪಷ್ಟಪಡಿಸಿದರು.
ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ತಮ್ಮ ಮನೆಗೆ ಬರುವ ಅಧಿಕಾರಿಗಳಿಗೆ ನಿಖರವಾದ ಮಾಹಿತಿ ನೀಡಿ ಸಹಕರಿಸಬೇಕು.ಈಗಾಗಲೇ ಬಸ್ ನಿಲ್ದಾಣ ಮತ್ತು ನಗರದ ವಿವಿಧ ವಾರ್ಡ್ಗಳಲ್ಲಿ ಆಟೋ ಅನೌನ್ಸ್ಮೆಂಟ್ ಮೂಲಕ ಜಾಗೃತಿ ಮೂಡಿಸ ಲಾಗುತ್ತಿದೆ ಎಂದು ಹೇಳಿದ ಅವರು ಆಸ್ತಿ ತೆರಿಗೆ ಪಾವತಿದಾರರಿಗೆ ಶೇ.5 ರಷ್ಟು ರಿಯಾಯಿತಿ ಏಪ್ರಿಲ್ 1ರಿಂದ ನಗರದಾದ್ಯಂತ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ ಶೇ.5 ರಷ್ಟು ರಿಯಾಯಿತಿ ಘೋಷಿಸಲಾಗಿದೆ.
ನಾಗರಿಕರು ಸುಲಭವಾಗಿ ತೆರಿಗೆ ಪಾವತಿಸಲು ಅನುಕೂಲವಾಗುವಂತೆ ನಗರಸಭೆ ಕಚೇರಿ ಯಲ್ಲೇ ಬ್ಯಾಂಕ್ ಕೌಂಟರ್ ತೆರೆಯಲಾಗಿದೆ.ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯ ಕತೆ ಇಲ್ಲದೆ ಶೀಘ್ರವಾಗಿ ಚಲನ್ ಪಡೆದು ತೆರಿಗೆ ಪಾವತಿಸಬಹುದು. ವಾಣಿಜ್ಯ ಮಳಿಗೆಗಳ ತೆರಿಗೆ ಮೌಲ್ಯಮಾಪನವನ್ನು ಕ್ರಾಸ್ ವೆರಿಫಿಕೇಶನ್ ಮಾಡಲಾಗುವುದು. ತೆರಿಗೆಯಲ್ಲಿ ಮೋಸ ಕಂಡುಬಂದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು ಎಂದರು.
ಕುಡಿಯುವ ನೀರು ಮತ್ತು ಬೀದಿ ದೀಪಗಳ ವ್ಯವಸ್ಥೆ ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಈಗಾಗಲೇ 20 ಹೊಸ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ.
ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು ಮತ್ತು ಪೋಲು ಮಾಡಬಾರದು ಎಂದು ವಿನಂತಿಸಲಾಗಿದೆ. ನಗರದಾದ್ಯಂತ ಸುಮಾರು ಸಾವಿರ ಹೊಸ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕಾರ್ಯ ಪೂರ್ಣ ಗೊಳ್ಳಲಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ನಾಗರಿಕರು ಸಹಕರಿಸ ಬೇಕೆಂದು ಪೌರಾಯುಕ್ತರು ಮನವಿ ಮಾಡಿದರು.