ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಇಒ ಡಾ.ನವೀನ್ ಭಟ್

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್, ಭಾ.ಆ.ಸೇ., ಅವರು ಶುಕ್ರವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ ಯನ್ನು ವೀಕ್ಷಿಸಿ ಪರಿಶೀಲಿಸಿದರು

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್, ಭಾ.ಆ.ಸೇ., ಅವರು ಶುಕ್ರವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲಿಸಿದರು.

ಇದನ್ನೂ ಓದಿ: Chikkaballapur News: ಕಾವ್ಯಕ್ಕೆ ಸ್ವರವೇ ಜೀವ, ಸಾಹಿತ್ಯಕ್ಕೆ ಅದು ಬದುಕಿನ ದಾರಿ: ಚಿಕ್ಕಬಳ್ಳಾಪುರವನ್ನು ಸಾಂಸ್ಕೃತಿಕ ಜಿಲ್ಲೆ ಎಂದು ಘೋಷಿಸಿ ನಾಗೇಂದ್ರಬಾಬು ಆಗ್ರಹ

ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಕೈಗೊಳ್ಳಲಾಗುತ್ತಿರುವ ನಿರ್ಮಾಣ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾಮಗಾರಿಯನ್ನು ನಿಗದಿತ ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಿದ ಅವರು, ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಯಾವುದೇ ರೀತಿಯ ರಾಜಿಯಾಗದಂತೆ ಎಚ್ಚರ ವಹಿಸು ವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಮತ್ತು ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.