ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ : ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ
ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಇವರ ಸಂಯುಕ್ತಾ ಶ್ರಯದಲ್ಲಿ “ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್. ವ್ಯಾಲಿ ೩ನೇ ಹಂತದ ೧೬೪ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತು ಗಳ ವಿತರಣಾ ಕಾರ್ಯಕ್ರಮ”ವನ್ನು ನ.೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ( Chief Minister Siddaramaiah) ಅವರು ನೆರವೇರಿಸುವರು.
ಘನ ಉಪಸ್ಥಿತಿಯನ್ನು ಕೇಂದ್ರ ಆಯೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ವಿದ್ಯುತ್ ಮತ್ತು ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ವಹಿಸಲಿದ್ದಾರೆ.
ಗೌರವ ಉಪಸ್ಥಿತಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸಕ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್, ಆಹಾರ ಮತ್ತು ನಾಗರಿಕ ಸರಬ ರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ, ವಸತಿ, ವಕ್ಫ್ ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್, ಜಮೀರ್ ಅಹ್ಮದ್ ಖಾನ್, ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ, ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಕಾರ್ಜುನ್, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್ ಬಿ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಮೀನಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಭಾಗವಹಿಸಲಿದ್ದಾರೆ.
ಉಪಸ್ಥಿತಿಯನ್ನು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ.ಮಲ್ಲೇಶ್ ಬಾಬು, ಶಾಸಕರುಗಳಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಪ್ರದೀಪ್ ಈಶ್ವರ್ ಪಿ.ಇ, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್. ಸಂಪAಗಿ, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಆಂಜಿನಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್, ಹಂಡಿಗನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಡಾ. ಎನ್.ಮಂಜುಳ ಹಾಗೂ ಎಲ್ಲಾ ಇಲಾಖೆಗಳ ಸರ್ಕಾರದ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.