Dr. M. C. Sudhakar: ನವೆಂಬರ್ 8ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ, 1000 ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಚಾಲನೆ
ಸರ್ಕಾರ ಕಳೆದ ಎರಡುವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಏನೆಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳ ಲಾಗಿದೆ ಅದರ ವಿವರ ಹಾಗೂ ಉದ್ಘಾಟನೆಗೆ ಸಿದ್ಧವಾಗಿರುವ ಎಲ್ಲಾ ಕಾಮಗಾರಿಗಳ ವಿವರವನ್ನು ನೀಡಬೇಕು. ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮ ವನ್ನು ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಶಿಷ್ಟಾಚಾರದ ರೀತ್ಯಾ ಮಾಡಿಕೊಳ್ಳ ಬೇಕು ಎಂದರು.

-

ಚಿಕ್ಕಬಳ್ಳಾಪುರ : ನವೆಂಬರ್ 8ನೇ ತಾರೀಕು ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah) ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ಕೈಗೊಂಡು 1000 ಕೋಟಿಗೂ ಹೆಚ್ಚು ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್ ( Dr. M. C. Sudhakar) ಅವರು ತಿಳಿಸಿದರು.
ನಗರ ಹೊರ ವಲಯ ಜಿಲ್ಲಾಡಳಿತ ಭವನದ ಸರ್. ಎಂ.ವಿ ಸಭಾಂಗಣದಲ್ಲಿ ಬುಧವಾರ ನಡೆದ "ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದ ಪೂರ್ವ ಭಾವಿ" ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸರ್ಕಾರ ಕಳೆದ ಎರಡುವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಏನೆಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಅದರ ವಿವರ ಹಾಗೂ ಉದ್ಘಾಟನೆಗೆ ಸಿದ್ಧವಾಗಿರುವ ಎಲ್ಲಾ ಕಾಮಗಾರಿಗಳ ವಿವರವನ್ನು ನೀಡಬೇಕು. ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಶಿಷ್ಟಾಚಾರದ ರೀತ್ಯಾ ಮಾಡಿಕೊಳ್ಳಬೇಕು ಎಂದರು.
ಇದನ್ನೂ ಓದಿ: Minister Dr. M.C. Sudhakar: ಅ.7ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವ : ಜಿಲ್ಲಾಉಸ್ತುವಾರಿ ಸಚಿವ ಭಾಗಿ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗಿರುವ ಕಾಮಗಾರಿಗಳ ಶಂಕುಸ್ಥಾಪನೆ ಅಡಿಗಲ್ಲಿನಲ್ಲಿ ಹೆಸರುಗಳು ಶಿಷ್ಟಾಚಾರದ ರೀತ್ಯಾ ಇರಬೇಕು. ಸ್ಥಳೀಯ ಸಂಸದರು,ಜನಪ್ರತಿನಿಧಿಗಳು ಸಂಬಂಧಪಟ್ಟ ಸಚಿವರನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮಗಳು ಶಿಷ್ಟಾಚಾರದ ರೀತ್ಯಾ ಆಯೋಜನೆ ಆಗಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೇದಿಕೆ ಕಾರ್ಯಕ್ರಮದ ಬಳಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಪ್ರದರ್ಶಿಸುವ ಜಾಗೃತಿ ಮಳಿಗೆಗಳನ್ನು ನಿರ್ಮಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ವಿವರವನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆ ತೆರೆಯಬೇಕು. ಅಂದು ಚಾಲನೆ ಆಗುವ ವಿವಿಧ ಕಾಮಗಾರಿ ಗಳ ವಿವರವನ್ನು ಕಿರು ಚಿತ್ರದ ರೂಪದಲ್ಲಿ ವೇದಿಕೆಯಲ್ಲಿ ಪ್ರದರ್ಶಿಸಬೇಕು. ಆಹ್ವಾನ ಪತ್ರಿಕೆ ಮುದ್ರಣ,ವಿತರಣೆ, ವೇದಿಕೆ ಸಿದ್ಧತೆ,ಅಲಂಕಾರ, ಮೂಲಭೂತ ಸೌಕರ್ಯಗಳ ವ್ಯವಸ್ಥೆ,ಸಂಚಾರ ದಟ್ಟಣೆ ನಿಯಂತ್ರಣ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ 1000 ಕೋಟಿ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲು ಯೋಜಿಸಲಾಗಿದೆ ಮುಖ್ಯವಾಗಿ ಶಿಡ್ಲಘಟ್ಟ ತಾಲೂಕಿನಲ್ಲಿ 200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ, 237 ಕೋಟಿ ವೆಚ್ಚದ ಹೆಚ್ ಎನ್ ವ್ಯಾಲಿ ಮತ್ತು ಕೆ ಸಿ ವ್ಯಾಲಿಯ ನೀರಾವರಿ ಕಾಮಗಾರಿಗಳಿಗೆ ಚಾಲನೆ, ಗಂಟಲಮಲ್ಲಮ್ಮ ಮತ್ತು ರಾಮಸಮುದ್ರ ನೀರಾವರಿ ಯೋಜನೆಗಳಿಗೂ ಅಂದು ಚಾಲನೆ ದೊರೆಯಲಿದೆ ಅಲ್ಲದೆ ಲೋಕೋಪಯೋಗಿ ಇಲಾಖೆಯಡಿ ಹಾಗೂ ಜಲ್ ಜೀವನ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ವಿವಿಧ ಕಾಮಗಾರಿಗಳು ಚಾಲನೆಯಾಗಲಿವೆ ಒಟ್ಟಾರೆ ಒಂದು ಸಾವಿರಕ್ಕೂ ಹೆಚ್ಚು ಮೆಚ್ಚದ ಕಾಮಗಾರಿಗಳಿಗೆ ಅಂದು ಚಾಲನೆ ದೊರೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.