Chikkaballapur News: ಕ್ಷಯ ರೋಗ ನಿಯಂತ್ರಣದಲ್ಲಿ ರಾಜ್ಯಕ್ಕೆ ಚಿಕ್ಕಬಳ್ಳಾಪುರ ಪ್ರಥಮ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ
ವಿಶ್ವ ಕ್ಷಯರೋಗ ನಿರ್ಮೂಲನೆಗಾಗಿ ಕಳೆದ 5 ವರ್ಷಗಳಲ್ಲಿ ಕೈಗೊಂಡಿರುವ ಕ್ರಮಗಳ ವಿವಿಧ ಸೂಚ್ಯಂಕಗಳನ್ನು ರಾಜ್ಯ ಮಟ್ಟದಲ್ಲಿ ಪರಿಶೀಲಿಸಿ ಈ ಸ್ಥಾನಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಅಯ್ಕೆ ಯಾಗಿದೆ. ಮರಣ ಪ್ರಮಾಣ ಇಳಿಕೆ, ಕ್ಷಯರೋಗಗಳ ಪ್ರಕರಣಗಳ ಇಳಿಕೆ, ಪತ್ತೆಹಚ್ಚುವಿಕೆ, ಚಿಕಿತ್ಸಾ ವಿಧಾನ ಸೇರಿದಂತೆ 12 ರೀತಿಯ ಮಾನದಂಡಗಳಲ್ಲಿ ಪರಿಶೀಲಿಸಿ ಈ ಸ್ಥಾನವನ್ನು ಚಿಕ್ಕಬಳ್ಳಾಪುರ ಗಳಿಸಿದೆ

ಕ್ಷಯಮುಕ್ತ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಸದಸ್ಯರು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ, ಬಹುಮಾನ ವಿತರಿಸಿ ಗೌರವಿಸಲಾಯಿತು.

ಚಿಕ್ಕಬಳ್ಳಾಪುರ: ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನದಲ್ಲಿ ಚಿಕ್ಕಬಳ್ಳಾ ಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.
ಜಿಲ್ಲಾಡಳಿತ ಭವನದ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಶ್ವ ಕ್ಷಯರೋಗ ನಿರ್ಮೂಲನೆಗಾಗಿ ಕಳೆದ 5 ವರ್ಷಗಳಲ್ಲಿ ಕೈಗೊಂಡಿರುವ ಕ್ರಮಗಳ ವಿವಿಧ ಸೂಚ್ಯಂಕಗಳನ್ನು ರಾಜ್ಯ ಮಟ್ಟದಲ್ಲಿ ಪರಿಶೀಲಿಸಿ ಈ ಸ್ಥಾನಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಅಯ್ಕೆಯಾಗಿದೆ. ಮರಣ ಪ್ರಮಾಣ ಇಳಿಕೆ, ಕ್ಷಯರೋಗಗಳ ಪ್ರಕರಣಗಳ ಇಳಿಕೆ, ಪತ್ತೆಹಚ್ಚುವಿಕೆ, ಚಿಕಿತ್ಸಾ ವಿಧಾನ ಸೇರಿದಂತೆ 12 ರೀತಿಯ ಮಾನದಂಡಗಳಲ್ಲಿ ಪರಿಶೀಲಿಸಿ ಈ ಸ್ಥಾನವನ್ನು ಚಿಕ್ಕಬಳ್ಳಾಪುರ ಗಳಿಸಿದೆ. ಈ ಕಾರ್ಯಕ್ಕೆ ಶ್ರಮಿಸಿದ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು, ಶುಶ್ರುಷಕಿಯರು, ಆರೋಗ್ಯ ಆಶಾ ಕಾರ್ಯಕರ್ತೆಯರು ಹಾಗೂ ಇತರ ಸಿಬ್ಬಂದಿಗಳಿಗೆ ಈ ಸಂದರ್ಭಧಲ್ಲಿ ಧನ್ಯವಾದ ತಿಳಿಸಲು ಇಚ್ಚಿಸುತ್ತೇನೆ ಎಂದರು.
2024ನೇ ಸಾಲಿನಲ್ಲಿ ಜಿಲ್ಲೆಯ 157 ಗ್ರಾಮ ಪಂಚಾಯ್ತಿಗಳ ಪೈಕಿ ಕ್ಷಯರೋಗ ನಿರ್ಮೂಲನೆ ಯಲ್ಲಿ ಉತ್ತಮ ಸಾಧನೆ ತೋರಿದ 23 ಗ್ರಾಮ ಪಂಚಾಯ್ತಿಗಳನ್ನು ಕ್ಷಯರೋಗ ಮುಕ್ತ ಗ್ರಾಮ ಪಂಚಾಯ್ತಿಗಳೆಂದು ಘೋಷಿಸಿದೆ, ಇಂದು ಬಹುಮಾನವನ್ನು ವಿತರಿಸಿ ಗೌರವಿಸು ತ್ತಿರುವುದು ಶ್ಲಾಘನೀಯವಾದ ವಿಚಾರವಾಗಿದ್ದು, ಇದೇ ರೀತಿ 2025ರ ರೊಳಗೆ ಕ್ಷಯ ರೋಗ ನಿರ್ಮೂಲನೆ ಮಾಡಿ ಎಲ್ಲಾ ಗ್ರಾಮ ಪಂಚಾಯ್ತಿಗಳು ಹಾಗೂ ನಗರ ಆಡಳಿತ ಸಂಸ್ಥೆಗಳು ಜಿಲ್ಲೆಯನ್ನು ಕ್ಞಯರೋಗ ಮುಕ್ತ ಜಿಲ್ಲೆಯೆಂದು ಘೋಷಿಸುವಂತಾಗಲು ತ್ವರಿತ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಳೆದ ಡಿಸೆಂಬರ್ ಮಾಹೆಯಿಂದ ಜಿಲ್ಲೆಯಲ್ಲಿ ನೂರು ದಿನಗಳ ಕಾಲ ಕ್ಷಯರೋಗ ಪತ್ತೆ ಅಭಿಯಾನವನ್ನು ಯಶಸ್ವಿಯಾಗಿ ಮಾಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 23 ಗ್ರಾಮ ಪಂಚಾ ಯಿತಿಗಳನ್ನು ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳನ್ನಾಗಿ ಘೋಷಿಸಲಾಗಿದೆ. 2025 ನೇ ವರ್ಷದ ಅಂತ್ಯದೊಳಗೆ ಇಡೀ ಜಿಲ್ಲೆಯನ್ನು ಕ್ಷಯಮುಕ್ತ ಎಂದು ಘೋಷಿಸಲು ಉದ್ದೇಶಿಸಿ ರುವ ಜಿಲ್ಲಾಡಳಿತಕ್ಕೆ ಜಿಲ್ಲೆಯ ಪ್ರತಿಯೊಬ್ಬರೂ ಸಹಕರಿಸಬೇಕೆಂದು ಜಿಲ್ಲಾಧಿ ಕಾರಿಗಳು ಮನವಿ ಮಾಡಿದರು.
ಕ್ಷಯಮುಕ್ತ ಜಿಲ್ಲೆ ಮಾಡುವ ವಿಶೇಷ ಅಭಿಯಾನದಲ್ಲಿ ಆಶಾ, ಆರೋಗ್ಯ ಮತ್ತು ಅಂಗನ ವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ಗ್ರಾಮೀಣ ಮತ್ತು ನಗರ ಭಾಗದ ಪ್ರತಿ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬರನ್ನು ಕ್ಷಯರೋಗ ತಪಾಸಣೆಗೊಳಪಡಿಸಿ, ಒಂದು ವೇಳೆ ಯಾರಿಗಾದರೂ ರೋಗ ಪತ್ತೆಯಾದರೆ ಅವರಿಗೆ ಸರ್ಕಾರದಿಂದ ಸಿಗುವ ಸಂಪೂರ್ಣ ಉಚಿತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ನೀಡುವ ಸೌಲಭ್ಯಗಳನ್ನು ತಲುಪಿ ಸಲು ಶ್ರಮಿಸುವ ಜೊತೆಗೆ ಚಿಕಿತ್ಸಾ ಅವಧಿ ಮುಗಿಯುವವರೆಗೂ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಶ್ರಮಿಸಿದ್ದಾರೆ. ಇದರಿಂದ ೩,೭೫,೭೧೪ ಜನರನ್ನು ತಪಾಸಣೆಗೆ ಒಳಪಡಿಸಿ ೧೫ ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಿ ಆರೋಗ್ಯ ಇಲಾಖೆಯ ಮಾರ್ಗ ಸೂಚಿಗಳಂತೆ ರೋಗಿಗಳಿಗೆ ಅಗತ್ಯ ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಸ್.ಎಸ್ ಮಹೇಶ್ ಕುಮಾರ್ ಮಾತನಾಡಿ, ಕ್ಷಯ ಮತ್ತು ಕುಷ್ಠರೋಗಿಗಳನ್ನು ಹಲವು ವರ್ಷಗಳ ಹಿಂದೆ ಅತ್ಯಂತ ಅಮಾನವೀಯವಾಗಿ ಮತ್ತು ಹೀನಾಯವಾಗಿ ನೋಡಲಾಗುತ್ತಿತ್ತು. ಆದರೆ ಆಧುನಿಕತೆ, ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಭಾವ ಪರಿಣಾಮದಿಂದ ನಾಗರೀಕತೆ ಬೆಳೆದಂತೆ ಪರಿಸ್ಥಿತಿ ಬದಲಾಗಿದೆ ಎಂದರು.
ಆ ಸಂದರ್ಭದಲ್ಲಿ ಸರಿಯಾದ ಚಿಕಿತ್ಸೆ ಮತ್ತು ಅರಿವಿನ ಕೊರತೆ ಕಾರಣದಿಂದ ಈ ಎರಡೂ ಕಾಯಿಲೆಗಳ ರೋಗಿಗಳನ್ನು ಹೀನವಾಗಿ ನಡೆಸಿಕೊಳ್ಳಲಾಗುತ್ತಿತ್ತು ಮತ್ತು ನೋಡಲಾಗು ತ್ತಿತ್ತು. ಈಗ ಕ್ಷಯ ಮತ್ತು ಕುಷ್ಠರೋಗಗಳು ಸಂಪೂರ್ಣವಾಗಿ ಗುಣಪಡಿಸಬಹುದಾದಂತಹ ಕಾಯಿಲೆಗಳೆಂದು ವೈದ್ಯಕೀಯ ವಿಜ್ಞಾನ ದೃಢಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾ ರವು ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಇಡೀ ದೇಶಾದ್ಯಂತ ಕ್ಷಯ ಮತ್ತು ಕುಷ್ಠರೋಗ ವನ್ನು ನಿರ್ಮೂಲನೆ ಮಾಡಲು ಸಂಪೂರ್ಣ ಉಚಿತ ಚಿಕಿತ್ಸೆಗಳನ್ನೊಳಗೊಂಡ ರಾಷ್ಟ್ರೀ ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೂ ಹಲವು ವರ್ಷಗಳಿಂದ ಆರೋಗ್ಯ ಇಲಾಖೆ ಕೈಗೊಂಡ ಪರಿಣಾಮಕಾರಿ ಕ್ರಮಗಳ ಪರಿಣಾಮವಾಗಿ ಕ್ಷಯರೋಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದರು.
ಕ್ಷಯರೋಗ ಭಾರತದಲ್ಲಿ ಸವಾಲಾಗಿ ಉಳಿದಿದೆ, ಪ್ರತಿವರ್ಷ ಲಕ್ಷಾಂತರ ಹೊಸ ಪ್ರಕರಣ ಗಳು ವರದಿಯಾಗುತ್ತಿದೆ. ಪರಿಣಾಮಕಾರಿ ಚಿಕಿತ್ಸೆ ಮತ್ತು ತಡೆಗಟ್ಟುವಿಕೆಗಾಗಿ ಆರಂಭಿಕ ಮತ್ತು ನಿಖರವಾದ ರೋಗ ನಿರ್ಣಯವನ್ನು ಕಂಡುಹಿಡಿಯಲು ಓಂAಖಿ ಯಂತ್ರಗಳು ಪ್ರಬಲ ಸಾಧನವಾಗಿದೆ. ಮೈಕ್ರೋಸ್ಕೋಪಿ (೬೦-೬೫%) ಪರೀಕ್ಷೆಗಿಂತ ಓಂAಖಿ ಪರೀಕ್ಷೆಯು ೯೫%ರಷ್ಟು ಸೂಕ್ಷ್ಮದರ್ಶಕವಾಗಿರುತ್ತದೆ. ಕಡಿಮೆ ಬ್ಯಾಕ್ಷೀರಿಯಾದ ಉಪಸ್ಥಿತಿಯಿರುವ ಸಂದರ್ಭಗಳಲ್ಲಿಯೂ ಸಹ ಕ್ಷಯರೋಗವನ್ನು ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ. ಓಂAಖಿ ಯಂತ್ರದಲ್ಲಿ ಸಾಮಾನ್ಯ ಜನರಲ್ಲಿ ಮಾತ್ರವಲ್ಲದೆ ಮಕ್ಕಳು, ಹೆಚ್‌ಐವಿ ಯೊಂದಿಗೆ ವಾಸಿಸುವ ಜನರು ಮತ್ತು ಇxಣಡಿಚಿ ಠಿuಟmoಟಿಚಿಡಿಥಿ ಟಿಬಿ ಹೊಂದಿರುವ ವ್ಯಕ್ತಿಗಳಲ್ಲಿ ಟಿಬಿಯನ್ನು ಪತ್ತೆ ಹಚ್ಚಲು ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ ಎಂದರು. ಕ್ಷಯ ಪರೀಕ್ಷೆಯ ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ ೧೦೪ಕ್ಕೆ ಸಂಪರ್ಕಿಸ ಬಹುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಂಜುಳ, ಡಾ. ಉಮಾ, ನಾಯನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಕೊಂಡೇನಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಸಿಬ್ಬಂದಿಗಳು, ಆಶಾಕಾರ್ಯಕರ್ತಯರು ಮುಂತಾದವರು ಇದ್ದರು.