Chikkaballapur News: ಜಿಲ್ಲಾಧಿಕಾರಿಗಳಿಂದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ

ಗಂಗಾ ಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳಲ್ಲಿ ಮಂಜೂರಾಗಿರುವ ಕೊಳವೆ ಬಾವಿಗಳನ್ನು ಕೊರೆಯುವ ಕಾರ್ಯ ಚುರುಕುಗೊಂಡಿದೆ. ಕಳೆದ ತಿಂಗಳಲ್ಲಿ ೭೦ ಕೊಳವೆ ಬಾವಿ

Profile Ashok Nayak December 30, 2024
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ತಾಲ್ಲೂಕಿನ ನೇರಳೆ ಮರದಹಳ್ಳಿ ಗ್ರಾಮದ ಸರ್ವೆ ನಂಬರ್ 103ರಲ್ಲಿನ ಮೀಸಲು ಅರಣ್ಯ ವ್ಯಾಪ್ತಿಯ ಖಾತೆದಾರರಾಗಿರುವ ರೈತರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಯಾವುದೇ ವ್ಯಕ್ತಿಗಳು ಅಡಚಣೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಸಂಬAಧಪಟ್ಟ  ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ “ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ವಿವಿಧ ಪ್ರಕರಣಗಳ ಕುರಿತು ಚರ್ಚೆ ಮಾಡಿ ಅವರು ಮಾತನಾಡಿದರು.
ಖಾತೆದಾರ ರೈತರ ಜಮೀನು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಒಳಗಡೆ ಇದ್ದಲ್ಲಿ ಅಂತಹ ಜಮೀನನ್ನು ಕಂದಾಯ ಮತ್ತು ಅರಣ್ಯ ಇಲಾಖೆಯ ಸಮಕ್ಷಮದಲ್ಲಿ ಜಂಟಿ ಸಮೀಕ್ಷೆ ನಡೆಸಿ ವರದಿ ಮಾಡಬೇಕು. ಇಂತಹ ಜಮೀನುಗಳಿಗೆ ಇರುವ ವಿವಾದಗಳು ಸರ್ಕಾರದ ಮಟ್ಟದಲ್ಲಿನ  ತೀರ್ಮಾನದಂತೆ ಕ್ರಮ ಕೈಗೊಳ್ಳಲು ತೀರ್ಮಾಸ ಲಾಗಿದೆ. ಆದ್ದರಿಂದ ಇಂತಹ ಜಮೀನಿನಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹೆಚ್ಚಿನ ಆತಂಕಕ್ಕೆ ಒಳಗಾಗುವ ಅಗತ್ಯ ಇರುವುದಿಲ್ಲ. ತಮ್ಮ ಹೆಸರಿಗೆ ಎಷ್ಟು ಜಮೀನು ಮಂಜೂರಾಗಿರುತ್ತದೆ ಆ ಜಮೀನಿನಲ್ಲಿ ಮಾತ್ರ ಸ್ವಾಧೀನದಲ್ಲಿ ಇರಬೇಕು. ಅಕ್ಕ ಪಕ್ಕದ ಅರಣ್ಯದ ಜಮೀನನ್ನು ಒತ್ತುವರಿ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳಲ್ಲಿ ಮಂಜೂರಾಗಿರುವ ಕೊಳವೆ ಬಾವಿಗಳನ್ನು ಕೊರೆಯುವ ಕಾರ್ಯ ಚುರುಕುಗೊಂಡಿದೆ. ಕಳೆದ ತಿಂಗಳಲ್ಲಿ ೭೦ ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಈ ಕಾರ್ಯವನ್ನು ಹೀಗೆಯೇ ಮುಂದುವರೆಸಬೇಕು. ೨೦೧೬ರ ಸಾಲಿನಿಂದ ಕೊರೆಯಲು ಬಾಕಿ ಇರುವ ಕೊಳವೆ ಬಾವಿಗಳನ್ನು ಜೇಷ್ಠತೆಯ ಆಧಾರದ ಮೇಲೆ ಕೊರೆಯಲು ಕ್ರಮ ವಹಿಸಬೇಕು. ವಿವಿಧ ಯೋಜನೆಗಳಡಿ ಸರ್ಕಾರದಿಂದ ಮಂಜೂರಾಗಿರುವ ಸಾಲ ಸೌಲಭ್ಯಗಳನ್ನು ಬ್ಯಾಂಕ್ ಗಳಿಂದ ಜನರಿಗೆ ತಲುಪಿಸಬೇಕು. ಈ ಕುರಿತು ಜಿಲ್ಲಾ ಮಾರ್ಗ ದರ್ಶಿ ಬ್ಯಾಂಕಿನ ಮುಖಾಂತರ ಪರಿಣಾಮಕಾರಿಯಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು, ಬ್ಯಾಂಕ್ ಗಳಿಂದ ಅಡಚಣೆಗಳಿದ್ದರೆ ಈ ಕುರಿತು ತಾಲ್ಲೂಕುವಾರು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ನೀಡುವ ಬಗ್ಗೆ, ಸ್ಮಶಾನಕ್ಕೆ ಸಂಬAಧಪಟ್ಟ ವಿವಾದಗಳ ವಿಲೇ ಬಗ್ಗೆ, ವಿವಿಧ ಸಮುದಾಯ ಭವನಗಳ ನಿರ್ಮಾಣದ ಬಗ್ಗೆ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಯ್ದೆಯಡಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚಿಸಿ ಸಂಬAಧ ಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: chikkaballapurnews
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ