Chikkaballapur News: ಜಾನುವಾರು ಗಣತಿಗೆ ಸಹಕಾರ ನೀಡುವಂತೆ ಪಶುಪಾಲನಾ ಇಲಾಖೆಯ ನಿರ್ದೇಶಕ ವಿ.ಪಿ.ಸಿಂಗ್ ಮನವಿ

ಜಾನುವಾರು ಗಣತಿ ಕಾರ್ಯವು ಮುಂದಿನ ಫೆಬ್ರವರಿ ಮಾಹೆಯಲ್ಲಿ ಪೂರ್ಣಗೊಳ್ಳಲಿದೆ. ಗಣತಿ ದಾರರು ರೈತರ ಮನೆಗಳಿಗೆ ತೆರಳಿ ಜಾನುವಾರುಗಳ ವಿವರಗಳನ್ನು ದಾಖಲಿಸುವ ಪ್ರಕ್ರಿಯೆಯು ನಿರಂತರವಾಗಿ ಚಾಲನೆಯಲ್ಲಿರಲಿದೆ

census
Profile Ashok Nayak Jan 16, 2025 9:58 PM

Source : Chikkaballapur Reporter

ಚಿಕ್ಕಬಳ್ಳಾಪುರ : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ದೇಶ ದಲ್ಲಿ ಕಳೆದ ಅಕ್ಟೋಬರ್ 25 ರಿಂದ ಆರಂಭವಾಗಿರುವ 21ನೇ ಜಾನುವಾರು ಗಣತಿ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದಲ್ಲಿ ಶೇಕಡ 35 ರಷ್ಟು ಗಣತಿ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಭಾರತ ಸರ್ಕಾರದ ಪಶುಪಾಲನಾ ಇಲಾಖೆಯ ನಿರ್ದೇಶಕ ರಾದ ವಿ.ಪಿ.ಸಿಂಗ್ ತಿಳಿಸಿದರು.

ನಗರದ ಜಿಲ್ಲಾ ಪಶು ಆಸ್ಪತ್ರೆಯ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಾನುವಾರು ಗಣತಿ ಕಾರ್ಯವು ಮುಂದಿನ ಫೆಬ್ರವರಿ ಮಾಹೆಯಲ್ಲಿ ಪೂರ್ಣಗೊಳ್ಳಲಿದೆ. ಗಣತಿದಾರರು ರೈತರ ಮನೆಗಳಿಗೆ ತೆರಳಿ ಜಾನುವಾರುಗಳ ವಿವರಗಳನ್ನು ದಾಖಲಿಸುವ ಪ್ರಕ್ರಿಯೆಯು ನಿರಂತರವಾಗಿ ಚಾಲನೆಯಲ್ಲಿರಲಿದೆ. ರಾಜ್ಯದಲ್ಲಿ ಜಾನುವಾರು ಗಣತಿಗಾಗಿ ನಗರದ ಪ್ರದೇಶದ ವಾರ್ಡ್ ಗಳನ್ನು ಒಳಗೊಂಡಂತೆ 36426 ಗ್ರಾಮಗಳನ್ನು ಗುರುತಿಸ ಲಾಗಿದೆ. ಈ ಗಣತಿ ಕಾರ್ಯಕ್ಕಾಗಿ ರಾಜ್ಯದಲ್ಲಿ 4868 ಗಣತಿದಾರರನ್ನು ಹಾಗೂ 725 ಮೇಲ್ವಿಚಾರಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಗಣತಿ ಸಂದರ್ಭದಲ್ಲಿ ರೈತರು ಜಾನುವಾರುಗಳ ನಿಖರ ಹಾಗೂ ಸ್ಪಷ್ಟ ಮಾಹಿತಿಯನ್ನು ನೀಡುವ ಮೂಲಕ ಗಣತಿಗೆ ಸಹಕರಿಸಬೇಕೆಂದು ಅವರು ರೈತರಲ್ಲಿ ಮನವಿ ಮಾಡಿದರು.

ಇದುವರೆಗೆ ಗಣತಿಯ ಮಾಹಿತಿಯನ್ನು ಪುಸ್ತಕದಲ್ಲಿ ನಮೂದಿಸುತ್ತಿತ್ತು. ಈ ಬಾರಿ ಮೊದಲ ಬಾರಿಗೆ ಸ್ಮಾರ್ಟ್ ಫೋನ್ ಬಳಸಿ ಗಣತಿದಾರರು ಮನೆ ಮನೆಗೆ ತೆರಳಿ ಗಣತಿಯಲ್ಲಿ ತೊಡಗಿ ದ್ದಾರೆ.  ಈ ಕಾರ್ಯಕ್ಕೆ ಕೇಂದ್ರ ಪಶುಸಂಗೋಪನ ಇಲಾಖೆಯಿಂದಲೇ 21 ಲೈವ್‌ಸ್ಟಾಕ್ ಸೆನ್ಸಸ್ ಎನ್ನುವ ಪ್ರತ್ಯೇಕ ಆಪ್ ಅಭಿವೃದ್ಧಿ ಪಡಿಸಲಾಗಿದ್ದು, ಬಳಸುವ ಬಗ್ಗೆಯೂ ತರಬೇತಿ ನೀಡಲಾಗಿದೆ. ಹಿಂದೆ ಪುಸ್ತಕದಲ್ಲಿ 200 ಕಾಲಂಗಳನ್ನು ಭರ್ತಿ ಮಾಡಬೇಕಿದ್ದರೆ, ಈ ಬಾರಿ ಚುಟುಕಾಗಿ ಆಪ್ ಮೂಲಕ ಮಾಹಿತಿ ನಮೂದಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ತಂತ್ರಾಂಶವನ್ನು ಬಳಕೆ ಮಾಡಿಕೊಳ್ಳುವ ರೀತಿಯಲ್ಲಿ ಆಪ್ ನ್ನು ವಿನ್ಯಾಸ ಪಡಿಸಲಾಗಿದೆ ಎಂದು ತಿಳಿಸಿದರು.

೧೯೧೯ ರಿಂದ ಜಾನುವಾರು ಗಣತಿ ನಡೆಯುತ್ತಾ ಬಂದಿದ್ದು, ಕಳೆದ ೧೦೦ ವರ್ಷಗಳಲ್ಲಿ ೨೦ ಗಣತಿ ನಡೆದಿದೆ. ಇದು ೨೧ನೇ ಜಾನುವಾರು ಗಣತಿಯಾಗಿರುತ್ತದೆ. ನಗರ ಭಾಗದಲ್ಲಿ ೬೦೦೦ ಮನೆಗಳಿಗೊಬ್ಬ ಗಣತಿದಾರ ಇದ್ದರೆ, ಗ್ರಾಮೀಣ ಭಾಗದಲ್ಲಿ 4500 ಮನೆಗಳಿಗೊಬ್ಬ ಗಣತಿ ದಾರರನ್ನು ನಿಯೋಜಿಸಲಾಗಿದೆ. ಎಲ್ಲ ಮನೆಗಳಿಗೆ ಗಣತಿದಾರರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 72 ಗಣತಿದಾರರು, ೨೦ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

“ಮನೆಮನೆಗೆ ಜಾನುವಾರು ಗಣತಿದಾರರು ಬರಲಿದ್ದಾರೆ. ಇದು ರೈತರು ಜಾನುವಾರು ಸಾಕಾ ಣಿಕೆದಾರರಿಗೆ ಬೇಕಾದ ಯೋಜನೆಗಳನ್ನು ರೂಪಿಸಲು ಸಹಾಯಕವಾಗುತ್ತದೆ, ಹಾಗಾಗಿ ಸೂಕ್ತ ಮಾಹಿತಿಗಳನ್ನು ಗಣತಿದಾರರಿಗೆ ಸಾರ್ವಜನಿಕರು ನೀಡಿ ಸಹಕರಿಸಬೇಕು" ಎಂದು ಮನವಿ ಮಾಡಿದರು.

ಏನೆಲ್ಲ ಮಾಹಿತಿ ಪಡೆಯಲಿದ್ದಾರೆ:

ಯಾವ ತಳಿಯ ಜಾನುವಾರುಗಳು? ಯಾವ ವಯಸ್ಸು, ಎಷ್ಟು ರೈತರು, ಯಾವ ವರ್ಗದ ರೈತರು, ಎಷ್ಟು ಮಹಿಳೆಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ತಿಳಿದು ಕೊಳ್ಳಲಾಗುತ್ತದೆ. ಈ ಮೂಲಕ ಸರ್ಕಾರ ಮುಂದಿನ ಯೋಜನೆಯಗಳನ್ನು ಸಿದ್ಧಪಡಿಸು ವುದು ಇದರ ಮುಖ್ಯ ಉದ್ದೇಶ, ರೈತರು ಹಾಗೂ ಹೈನುಗಾರಿಕೆ ಕ್ಷೇತ್ರಗಳಿಗೆ ಬೇಕಾದ ನೀತಿ, ಕಾರ್ಯಕ್ರಮ ನಿರೂಪಿಸುವುದಕ್ಕಾಗಿ ಗಣತಿಯ ಅಂಶಗಳು ಬಳಕೆಯಾಗುತ್ತವೆ.

ಮನೆಗಳಲ್ಲಿ ಸಾಕಲಾಗುವ ದನ, ಎತ್ತು ಎಮ್ಮೆ, ಕೋಣ, ಆಡು, ಕುರಿ, ಕೋಳಿ, ನಾಯಿ, ಕುದುರೆ, ಎಮು ಹಾಗೂ ಆಸ್ಟ್ರಿಚ್ ಹಕ್ಕಿಗಳ ಮಾಹಿತಿಯನ್ನು ಪಡೆಯುಲಾಗುತ್ತದೆ. ಬೀಡಾಡಿ ದನ, ನಾಯಿಗಳ ಮಾಹಿತಿಯನ್ನೂ ಸೇರಿಸಲಾಗುತ್ತದೆ. ದೇವಸ್ಥಾನದಲ್ಲಿ ಆನೆ, ದನ ಸಾಕುವುದಿದ್ದರೆ, ಗೋಶಾಲೆಗಳಿದ್ದರೆ ಮಾಹಿತಿ ಪಡೆಯುಲಾಗುತ್ತದೆ. 10 ಕ್ಕಿಂತ ಜಾಸ್ತಿ ದನಗಳಿದ್ದರೆ, ೧೦೦೦ ಕ್ಕಿಂತ ಜಾಸ್ತಿ ಕೋಳಿ ಸಾಕಿದರೆ, 50ರ ಮೇಲ್ಪಟ್ಟು ಆಡು ಸಾಕಣೆ ಯಿದ್ದರೆ ಅವುಗಳನ್ನು ಫಾರಂ ಎಂದು ಪರಿಗಣಿಸಿ ಮಾಹಿತಿ ನಮೂದಿಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ದೇಶದ ಜಿ.ಡಿ.ಪಿಗೆ ೩.೬ ರಷ್ಟು ಕೊಡುಗೆಯನ್ನು ಜಾನುವಾರು ಉತ್ಪನ್ನಗಳು ನೀಡುತ್ತಿವೆ. ಕರ್ನಾಟಕ ರಾಜ್ಯವು ದೇಶದಲ್ಲಿ ಹಾಲು ಉತ್ಪಾದನೆಯಲ್ಲಿ ೮ ನೇ ಸ್ಥಾನ, ಮೊಟ್ಟೆ ಉತ್ಪಾ ದನೆಯಲ್ಲಿ ೫ನೇ ಸ್ಥಾನ ಹಾಗೂ ಮಾಂಸ ಉತ್ಪಾದನೆಯಲ್ಲಿ ೯ನೇ ಸ್ಥಾನದಲ್ಲಿದೆ ಎಂದು ಪಶುಪಾಲನಾ ಇಲಾಖೆಯ ನಿರ್ದೇಶಕರು ವಿ.ಪಿ. ಸಿಂಗ್ ರವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಶುಪಾಲನಾ ಇಲಾಖೆಯ ಜಂಟಿ ನಿರ್ದೇಶಕಿ ಡಾ ಸವಿತ, ಪಶುಪಾ ಲನಾ ಇಲಾಖೆಯ ಉಪನಿರ್ದೇಶಕ ಡಾ. ರಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

urea
2:13 PM January 22, 2025

ಕೃಷಿ ಸಬ್ಸಿಡಿಗೆ ರೈತರು ಬಿಟ್ಟು ಉಳಿದವರೆಲ್ಲ ಫಲಾನುಭವಿಗಳು!

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು