Chikkaballapur News: ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಆರ್ ಟಿ ಓ ಅಧಿಕಾರಿ ವಿವೇಕಾನಂದ
ಚಿಂತಾಮಣಿ ನಗರದ ಕೆಎಸ್ಆರ್‌ಟಿಸಿ ಡಿಪೋ ದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಹಾಗೂ ಇಂಧನ ಉಳಿತಾಯ ಮಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದವರು ಸರ್ಕಾರದ ಆದೇಶದಂತೆ ಪ್ರತಿವರ್ಷವೂ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತದೆ
Source : Chikkaballapur Reporter
ಚಿಂತಾಮಣಿ ನಗರದ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮ
ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ ಸಲಹೆ ನೀಡಿದರು.
ಇಂದು ಚಿಂತಾಮಣಿ ನಗರದ ಕೆಎಸ್ಆರ್‌ಟಿಸಿ ಡಿಪೋ ದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಹಾಗೂ ಇಂಧನ ಉಳಿತಾಯ ಮಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದವರು ಸರ್ಕಾರದ ಆದೇಶದಂತೆ ಪ್ರತಿವರ್ಷವೂ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸ ಲಾಗುತ್ತದೆ. ಒಂದು ತಿಂಗಳ ಕಾಲ ಕಾರ್ಯಕ್ರಮದ ಅಂಗವಾಗಿ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ರಸ್ತೆ ನಿಯಮಗಳ ಕುರಿತು ಚಾಲಕರಿಗೆ ಮತ್ತು ವಾಹನ ಮಾಲೀಕ ರಿಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ. ಅಮಾಯಕರು ಜೀವ ಕಳೆದು ಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲ ಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು,ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದುಸೂಚಿಸಿದರು.
ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳ ಬೇಕು.ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯತೆ ತೋರದೆ ನಿಯಮ ಪಾಲನೆ ಮಾಡ ಬೇಕು. ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು.
ಡಿವೈಎಸ್ಪಿ ಮುರುಳಿಧರ್ ಪಿ ರವರು ಮಾತನಾಡಿ ಚಾಲಕರು ಜಾಗರೂಕರಾಗಿದ್ದು, ಅಪಘಾತಗಳನ್ನು ತಪ್ಪಿಸಬೇಕು. ಕರ್ತವ್ಯದ ವೇಳೆ ಮದ್ಯಪಾನ ಮಾಡದೆ ತಮ್ಮ ಮತ್ತು ಪ್ರಯಾಣಿಕರ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಕರ್ತವ್ಯ ಅವಧಿಯಲ್ಲಿ ಸಮಾಧಾನ, ಜಾಗರೂಕರಾಗಿ ಇದ್ದಾಗ ಅಪಘಾತದ ಸಂಖ್ಯೆ ಕುಗ್ಗ ಲಿದೆ. ಶಿಸ್ತಿನಿಂದ,ಜನಸ್ನೇಹಿ ಯಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಆದಾಯ ಹೆಚ್ಚಿಸಲು ನೆರವಾ ಗಬೇಕು ಎಂದರು.
ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಜಿಲ್ಲಾಧಿಕಾರಿ ಬಸವರಾಜ್,ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್,ಕೆಎಸ್ಆರ್‌ಟಿಸಿ ವ್ಯವಸ್ಥಾಪಕರಾದ ಸವಿತಾ,ಸೇರಿದಂತೆ ಮತ್ತಿ ತರರು ಭಾಗವಹಿಸಿದ್ದರು.
ಇದನ್ನೂ ಓದಿ: Chikkaballapur News: ಗ್ರಾಮೀಣ ಜನತೆಗೆ ಕಾನೂನು ಅರಿವು ಅಗತ್ಯ