Chikkaballapur News: 18 ವರ್ಷದ ಒಳಗಿನವರು ವಾಹನ ಚಲಾಯಿಸಿದರೆ ಪರವಾನಗಿ ಶಾಶ್ವತ ರದ್ದು, ಪೋಷಕರ ಮೇಲೂ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಎಚ್ಚರಿಕೆ
ಜೂನ್ 2024ರಿಂದ ಈ ವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ವಾಹನ ಅಪಘಾತಗಳಿಂದ 430 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಮತ್ತು ೧೬೧ಸಾವು ನೋವುಗಳು ಸಂಭವಿಸಿವೆ. ಮುಖ್ಯವಾಗಿ ಚಿಕ್ಕಬಳ್ಳಾ ಪುರ ನಗರ, ಪೆರೇಸಂದ್ರ ಮತ್ತು ಚಿಂತಾಮಣಿ ನಗರ ಸಂಚಾರಿ ಠಾಣೆಗಳ ವ್ಯಾಪ್ತಿಯಲ್ಲಿ ಅಪಘಾತ ಗಳು ಹೆಚ್ಚಾಗಿ ಸಂಭವಿಸುತ್ತಿವೆ

೧೮ ವರ್ಷದ ಒಳಗಿನ ಯುವಕ, ಯುವತಿಯರು ವಾಹನ ಸವಾರಿ ಅಥವಾ ಚಲಾಯಿಸಿ ಅಪಘಾತ ಮಾಡಿದರೆ ಅಂತಹವರಿಗೆ ಶಾಶ್ವತವಾಗಿ ವಾಹನ ಚಲಾವಣೆಯ ಪರವಾನಗಿಯನ್ನು ಡಿಎಲ್ ನೀಡದಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಖಡಕ್ ಸೂಚನೆ ನೀಡಿದರು.

ಚಿಕ್ಕಬಳ್ಳಾಪುರ : 18 ವರ್ಷದ ಒಳಗಿನ ಯುವಕ, ಯುವತಿಯರು ವಾಹನ ಸವಾರಿ ಅಥವಾ ಚಲಾ ಯಿಸಿ ಅಪಘಾತ ಮಾಡಿದರೆ ಅಂತಹವರಿಗೆ ಶಾಶ್ವತವಾಗಿ ವಾಹನ ಚಲಾವಣೆಯ ಪರವಾನಗಿ ಯನ್ನು ಡಿಎಲ್ ನೀಡದಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಖಡಕ್ ಸೂಚನೆ ನೀಡಿದರು.
ನಗರ ಹೊರವಲಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ‘ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
೧೮ ವರ್ಷದ ಒಳಗಿನವರು ಯಾವುದೇ ಕಾರಣಕ್ಕೂ ದ್ವಿಚಕ್ರ ವಾಹನಗಳನ್ನು ಸವಾರಿ ಮಾಡಬಾ ರದು ಹಾಗೂ ಲಘುವಾಹನಗಳನ್ನು ಚಲಾಯಿಸುವುದನ್ನು ಮಾಡಬಾರದು, ಒಂದು ವೇಳೆ ಈ ಸಂಚಾರಿ ನಿಯಮ ಉಲ್ಲಂಘಿಸಿದರೆ ಕಟ್ಟು ನಿಟ್ಟಿನ ಕಾನೂನು ಕ್ರಮವನ್ನು ಅಂತಹವರ ಮೇಲೆ ತೆಗೆದುಕೊಳ್ಳುವ ಜೋತೆಗೆ ಅವರ ಪೋಷಕರನ್ನು ಸಹ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ದಂಡ ವಿಧಿಸ ಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Chikkaballapur News: ಆರು ತಿಂಗಳಿಂದ ಸ್ಥಗಿತಗೊಂಡ ರಿಜಿಸ್ಟರ್ ಖಾತೆಗಳು ಪ್ರಾರಂಭ
ಜೂನ್ 2024ರಿಂದ ಈ ವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ವಾಹನ ಅಪಘಾತಗಳಿಂದ ೪೩೦ ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಮತ್ತು ೧೬೧ಸಾವು ನೋವುಗಳು ಸಂಭವಿಸಿವೆ. ಮುಖ್ಯವಾಗಿ ಚಿಕ್ಕಬಳ್ಳಾ ಪುರ ನಗರ, ಪೆರೇಸಂದ್ರ ಮತ್ತು ಚಿಂತಾಮಣಿ ನಗರ ಸಂಚಾರಿ ಠಾಣೆಗಳ ವ್ಯಾಪ್ತಿಯಲ್ಲಿ ಅಪಘಾತ ಗಳು ಹೆಚ್ಚಾಗಿ ಸಂಭವಿಸುತ್ತಿವೆ. ಈ ಠಾಣೆಗಳ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಬಹುದಾದ ಬ್ಲಾಕ್ ಸ್ಪಾಟ್ ಗಳಲ್ಲಿ ಸೂಚನಾ ಫಲಕಗಳು ಸಮರ್ಪಕವಾಗಿ ನಿಯಮಾವಳಿ ರೀತಿ ಹಾಕಬೇಕು ಮತ್ತು ರಸ್ತೆ ಉಬ್ಬು ತಗ್ಗುಗಳನ್ನು (ಹಂಪ್ಸ್) ಅಳವಡಿಸಬೇಕು. ಅತಿವೇಗ ಚಾಲನೆ, ಚಾಲನೆಯಲ್ಲಿ ಮೊಬೈಲ್ ಬಳಕೆ, ಮದ್ಯ ಸೇವಿಸಿ ಚಾಲನೆ ಮಾಡುವುದು ಸೇರಿದಂತೆ ಇನ್ನಿತರ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಸವಾರರು ಮತ್ತು ಚಾಲಕರಿಂದ ದಂಡ ವಸೂಲಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ೧೭ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ೧೧ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ. ಈ ಬ್ಲಾಕ್ ಸ್ಟಾಟ್ ಗಳಿಗೆ ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ಮಾಡಬೇಕು. ಅಪಘಾತ ಸಂಭವಿಸಲು ಕಾರಣವಾಗಿರುವ ಮೂಲ ಸೌಲಭ್ಯ ಗಳ ಕೊರತೆಯನ್ನು ನೀಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸೂಚನಾ ಫಲಕಗಳನ್ನು ಅಳವ ಡಿಸಬೇಕು. ಜೊತೆಗೆ ಸ್ಥಳೀಯವಾಗಿ ಅಪಘಾತಕ್ಕೆ ಒಳಗಾಗಿ ಸಾವು ನೋವು ಆಗಿರುವವರ ವಿವರ ಪಡೆದು ಸ್ಥಳೀಯವಾಗಿ ಜಾಗೃತಿ ಮೂಡಿಸಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅರಿವು ಮೂಡಿಸಬೇಕು.
ಕಳೆದ 7 ತಿಂಗಳಲ್ಲಿ ಜಿಲ್ಲೆಯಲ್ಲಿ ಸಂಜೆ 6 ರಿಂದ 9 ಗಂಟೆಯವರೆಗೆ 118 ಅಪಘಾತಗಳು ಸಂಭವಿ ಸಿವೆ. ಈ ಅವಧಿಯಲ್ಲಿ ಸಾರಿಗೆ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿ ಕರ್ತವ್ಯ ನೀರ್ವಹಿಸಬೇಕು. ಸಂಚಾರಿ ನಿಯಮಗಳ ಪಾಲನೆ ಮತ್ತು ಸೂಚನೆ ನೀಡುವ ತಂತ್ರಾAಶಗಳ ಅಳವಡಿಕೆಯ ವ್ಯವಸ್ಥೆಯನ್ನು ವಾಹನಗಳಲ್ಲಿ ಅಳವಡಿಸಲಾಗಿದೆಯೇ ಅಥವಾ ಇಲ್ಲವೆ ಎಂಬುದನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲಿಸಬೇಕು. ಈ ಕಾರ್ಯಕ್ರಮವನ್ನು ಆಂದೋಲನ ರೂಪದಲ್ಲಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ವೇಳೆ ಸಂಚಾರಿ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ ರೈ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಕೆ.ಎಸ್.ಆರ್.ಟಿ.ಸಿ ವಿಭಾ ಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ.ಮಾದವಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.