ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur: ಅಡ್ಡಾದಿಡ್ಡಿ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಬೈಕ್​​ ಸವಾರನಿಗೆ ಚೂರಿಯಿಂದ ಇರಿದ ಲೇಡಿ ಟೆಕ್ಕಿ

Chikkaballapur news: ಲೇಡಿ ಟೆಕ್ಕಿಯೊಬ್ಬರು ವಿಚಿತ್ರವಾಗಿ, ಆತಂಕಕಾರಿಯಾಗಿ ವರ್ತಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಓಡಿಸುತ್ತಿದ್ದ ಮಹಿಳೆ, ಹಿಂದೆ ಬರುತ್ತಿದ್ದ ವಾಹನಗಳಿಗೆ ಅಡಚಣೆ ಉಂಟುಮಾಡಿದ್ದರು. ನಂತರ ಇದನ್ನು ಪ್ರಶ್ನಿಸಿದ ಬೈಕ್ ಸವಾರರ ಮೇಲೆ ಮುಗಿಬಿದ್ದು ಚಾಕುವಿನಿಂದ ಇರಿದಿದ್ದಾಳೆ.

ಚಿಕ್ಕಬಳ್ಳಾಪುರದಲ್ಲಿ ಲೇಡಿ ಟೆಕ್ಕಿಯಿಂದ ಚೂರಿ ಇರಿತ

ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟರ್ ಚಾಲನೆ ಮಾಡುತ್ತಿದ್ದದ್ದನ್ನು (reckless scooter driving) ಪ್ರಶ್ನಿಸಿದ ಬೈಕ್ ಸವಾರನಿಗೆ ಮಹಿಳಾ ಟೆಕ್ಕಿಯೊಬ್ಬರು (lady techie) ಚಾಕುವಿನಿಂದ ಇರಿದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapur news) ನಡೆದಿದೆ. ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿ ಬೈಕ್ ಸವಾರ ನರಸಿಂಹ ಮೂರ್ತಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಇದರಿಂದ ನರಸಿಂಹ ಮೂರ್ತಿ ಅವರ ಕೈಗೆ ಗಾಯವಾಗಿದೆ.

ಮೂಲಗಳ ಪ್ರಕಾರ ಆರೋಪಿ ಮಹಿಳೆ ರಿಂಬಿಕಾ ಇಂದು ತಮ್ಮ ತಮಿಳುನಾಡು ನೊಂದಣಿಯ ಸ್ಕೂಟಿ ಏರಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಕಡೆಗೆ ಬಂದು ವಾಪಾಸ್ ಬೆಂಗಳೂರಿನತ್ತ ತೆರಳುತ್ತಿದ್ದರು. ಈ ವೇಳೆ ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಓಡಿಸುತ್ತಿದ್ದರು. ಈ ವೇಳೆ ಹಿಂದೆ ಬರುತ್ತಿದ್ದ ವಾಹನಗಳಿಗೆ ಅಡಚಣೆಯಾಗಿತ್ತು. ಇದೇ ವೇಳೆ ಹಿಂದೆ ಬರುತ್ತಿದ್ದ ಬೈಕ್ ಸವಾರ ನಿಖಿಲ್ ಹಾಗೂ ನರಸಿಂಹಮೂರ್ತಿ ಚಿಕ್ಕಬಳ್ಳಾಪುರದ ಸೇತುವೆ ಕೆಳಗಡೆ ಸ್ಕೂಟಿ ನಿಲ್ಲಿಸಿ ನಿಂತಿದ್ದ ರಿಂಬಿಕಾರನ್ನು ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಆಕ್ರೋಶಗೊಂಡ ಮಹಿಳೆ ಆಕೆ ಬಳಿ ಇದ್ದ ಫೋಲ್ಡೆಡ್ ಚಾಕುವಿನಿಂದ ನರಸಿಂಹ ಮೂರ್ತಿ ಮೇಲೆ ದಾಳಿ ಮಾಡಿಮಾಡಿದ್ದಾರೆ. ಈ ವೇಳೆ ಬೈಕ್ ಸವಾರ ನಿಖಿಲ್ ಕೈಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ಹಿಂಬದಿ ಸವಾರ ನರಸಿಂಹಮೂರ್ತಿಗೂ ಗಾಯವಾಗಿದೆ. ರಿಂಬಿಕಾ ಚಾಕುವಿನಿಂದ ಅಟ್ಯಾಕ್ ಮಾಡ್ತಿದ್ದಂತೆ ನಿಖಿಲ್ ಸಹ ವಾಪಸ್​​ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ಎಲ್ಲಾ ದೃಶ್ಯಗಳು ಸ್ಥಳೀಯ ಹೋಟೆಲ್​ವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.‌

ಇದನ್ನೂ ಓದಿ: ಅನಾರೋಗ್ಯ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡುವುದಾಗಿ ವಂಚನೆ; ಟೆಕ್ಕಿ ದಂಪತಿಗೆ ವಂಚಿಸಿದ್ದು ಬರೋಬ್ಬರಿ 14 ಕೋಟಿ ರೂ.

ಮಹಿಳೆಯ ಹಿಡಿದ ಸ್ಥಳೀಯರು

ಘಟನೆ ನಡೆಯುತ್ತಿದ್ದಂತೆ ಇತರೆ ವಾಹನ ಸವಾರರು, ಸ್ಥಳೀಯರು ಜಮಾಯಿಸಿ ಪೊಲೀಸರನ್ನ ಕರೆಸಿ ಆಕೆಯನ್ನ ವಶಕ್ಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಯುವಕ ನಿಖಿಲ್ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ರಿಂಬಿಕಾರನ್ನ ವಿಚಾರಣೆ ನಡೆಸಿದ್ದಾರೆ.

ಅಂತೆಯೇ ಮಹಿಳೆ ಕೂಡ ಯುವಕರ ವಿರುದ್ಧ ಪ್ರತ್ಯಾರೋಪ ಮಾಡಿದ್ದು, 'ಯುವಕರು ನನ್ನನ್ನ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತನೆ ಮಾಡಿದರು. ಅದಕ್ಕೆ ನಾನು ಚಾಕುವಿನಿಂದ ಅಟ್ಯಾಕ್ ಮಾಡಿದೆ ಎಂದು ರಿಂಬಿಕಾ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಹಿಳೆ ಪೊಲೀಸ್ ಠಾಣೆಯಲ್ಲೇ ಹೈಡ್ರಾಮಾ ಮಾಡಿದ್ದು, ಪೊಲೀಸರ ತನಿಖೆಗೆ ಸಹಕರಿಸದೆ ಪೊಲೀಸ್​ ಠಾಣೆಯಿಂದ‌ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಮಾನಸಿಕವಾಗಿ ಸದೃಢವಾಗಿರದ ರಿಂಬಿಕಾ, ಪೊಲೀಸರಿಗೆ ಸಹಕರಿಸದೆ ಚಿತ್ರವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಬುದ್ಧಿವಾದ ಹೇಳಿದ್ದಕ್ಕೆ ಚಾಕು ತೆಗೆದು ಹಲ್ಲೆ ಮಾಡುವ ಮೂಲಕ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಇದನ್ನೂ ಓದಿ: Bengaluru Digital Arrest: ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್‌ ಅರೆಸ್ಟ್‌; ಮಹಿಳಾ ಟೆಕ್ಕಿಗೆ ಬರೋಬ್ಬರಿ 31.83 ಕೋಟಿ ರೂ. ವಂಚನೆ!

ಹರೀಶ್‌ ಕೇರ

View all posts by this author