Chikkaballapur News: ಜ.21 ರಂದು ಗುಲಾಬಿ ಆಂದೋಲನ ಹಾಗೂ ಇತರ ಸುದ್ದಿಗಳು
ತಂಬಾಕು ಸೇವನೆಯಿಂದಾಗುವ ದುಷ್ಟರಿ ಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲಾದ್ಯಂತ ಏಕಕಾಲದಲ್ಲಿ ಗುಲಾಬಿ ಆಂದೋಲವನ್ನು ಏರ್ಪಡಿಸಿದ್ದು, ಜ.21 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬಿ.ಬಿ.ರಸ್ತೆಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
Source : Chikkaballapur Reporter
ಚಿಕ್ಕಬಳ್ಳಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಚಿಕ್ಕಬಳ್ಳಾಪುರ ಇವರ ವತಿಯಿಂದ ತಂಬಾಕು ಸೇವನೆಯಿಂದಾಗುವ ದುಷ್ಟರಿ ಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲಾದ್ಯಂತ ಏಕಕಾಲದಲ್ಲಿ ಗುಲಾಬಿ ಆಂದೋಲವನ್ನು ಏರ್ಪಡಿಸಿದ್ದು, ಜನವರಿ 21 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬಿ.ಬಿ.ರಸ್ತೆಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಂತ ಉದ್ಯಮ ಸ್ಥಾಪಿಸಲು ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಚಿಕ್ಕಬಳ್ಳಾಪುರ ಇವರು ಸ್ವಂತ ಉದ್ಯಮವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ೧೦ ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ವನ್ನು ಜನವರಿ 27 ರಿಂದ ಹಮ್ಮಿಕೊಳ್ಳಲಿದ್ದಾರೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳಿಗೆ ಪಿ.ಎಂ. ಇ.ಜಿ.ಪಿ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಉದ್ಯಮ ಸ್ಥಾಪನೆ ಮಾಡಲು ಸಹಾಯ ಮಾಡಲಾಗುವುದು. ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಚಿಸುವರು ೧೮ ರಿಂದ ೪೫ ವರ್ಷ ವಯಸ್ಸಿನವರಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಎ.ಟಿ.ಐ ಕಟ್ಟಡ, ಬಿಬಿ ರಸ್ತೆ, ಒಕ್ಕಲಿಗರ ಕಲ್ಯಾಣ ಮಂಟಪ ಹತ್ತಿರ, ಚಿಕ್ಕಬಳ್ಳಾಪುರ ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜನವರಿ ೨೪ ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:೯೪೮೧೫೪೩೨೪೫, ೯೦೦೮೧೭೫೭೦೨, ೯೯೪೫೯೧೪೭೨೫ ಗೆ ಸಂಪರ್ಕಿ ಸಬಹುದೆಂದು ಸಿಡಾಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಧ್ಯಮ ಆಹ್ವಾನ
ತಂಬಾಕು ಸೇವನೆಯಿಂದಾಗುವ ದುಷ್ಟರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲಾದ್ಯಂತ ಏಕಕಾಲದಲ್ಲಿ ಗುಲಾಬಿ ಆಂದೋಲವನ್ನು ಏರ್ಪಡಿಸಿದ್ದ, ಜನವರಿ ೨೧ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಬಿ.ಬಿ.ರಸ್ತೆಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಚಾಲನೆ ನೀಡಲಿದ್ದಾರೆ.
ಸದರಿ ಕಾರ್ಯ ಕ್ರಮಕ್ಕೆ ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.