ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

7ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಚಿಕ್ಕಬಳ್ಳಾಪುರ ವಿದ್ಯಾರ್ಥಿಗಳ ಸಾಧನೆ

ಶಿವಮೊಗ್ಗದಲ್ಲಿ ಆ.22 ಮತ್ತು 23ರಂದು ನಡೆದ 7ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಕೂಟ ದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ಆ.22 ಮತ್ತು 23ರಂದು ನಡೆದ 7ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ಸಹ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾ ಕರಾಟೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿಹಾನ್ ನಾಸಿರುದ್ದೀನ್ ಪಿ.ವೈ., ತರಬೇತುದಾರರಾದ ನಶ್ರಾ ಸುಲ್ತಾನ್ ಎ. ಹಾಗೂ ವಾರಿಯರ್ಸ್ ಅಕಾಡೆಮಿಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.

ಇದನ್ನೂ ಓದಿ: Chikkaballapur News: ಎಸ್‌ಐಆರ್‌ ಕಾರ್ಯ ಪಾರದರ್ಶಕವಾಗಿರಲಿ; ಅರ್ಹರ ಹೆಸರು ಸೇರ್ಪಡೆ, ಅನರ್ಹರ ಪರಿಶೀಲನೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಜಿ.ಪ್ರಭು

ಸಾಧಕ ವಿದ್ಯಾರ್ಥಿಗಳು: ಪುಟಾಣಿ ಸುಚಲ್ ಪಿ.ಜಿ., ಮೊಹಮ್ಮದ್ ಯಾಮಿನ್ ಎನ್., ನೂರ್ ಫಾತಿಮಾ, ಅರ್ಚನಾ ವಿ., ಸಾಕ್ಷಿ ಕೆ.ಎಂ., ನಿಶಾ, ರಾಮ್ಯ, ವರ್ಷಿಣಿ, ಹರಿಪ್ರಸಾದ್, ಉಲ್ಲಾಸ್ ಗೌಡ, ಪೃಥ್ವಿ ತೇಜ್, ಜತಿಕ್ ಸುಶೀಲ್, ಧೀರಜ್ ಗೌಡ, ಜತಿನ್ ಶ್ರೀನಿಧಿ ಹಾಗೂ ಋತ್ವಿಕ್ ಅವರು ಕಟಾ ಮತ್ತು ಕುಮಿಟೆ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಗಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.