ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಲಾರಿ ಡಿಕ್ಕಿಯಾಗಿ ನಾಲ್ವರು ಯುವಕರ ಸಾವು, ಸಿಎಂರಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಅಪಘಾತದಲ್ಲಿ ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ, ನಂದೀಶ್, ಅರುಣ್, ಮನೋಜ್ ಎಂಬವರು ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಟಿಪ್ಪರ್ ವಶಕ್ಕೆ ಪಡೆದು, ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಲಾರಿ ಡಿಕ್ಕಿಯಾಗಿ ನಾಲ್ವರು ಯುವಕರ ಸಾವು; ಸಿಎಂ 5 ಲಕ್ಷ ರೂ. ಪರಿಹಾರ ಘೋಷಣೆ

ಮೃತ ನರಸಿಂಹಮೂರ್ತಿ, ನಂದೀಶ್, ಅರುಣ್, ಮನೋಜ್ -

ಹರೀಶ್‌ ಕೇರ
ಹರೀಶ್‌ ಕೇರ Dec 26, 2025 12:42 PM

ಚಿಕ್ಕಬಳ್ಳಾಪುರ, ಡಿ.26: ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ (Road Accident) ಪರಿಣಾಮ ಒಂದೇ ಗ್ರಾಮದ ನಾಲ್ವರು ಯುವಕರು (youth death) ಮೃತಪಟ್ಟಿರುವಂತಹ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura news) ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ನಡೆದಿದೆ. ಮೃತರ ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಪರಿಹಾರ ವಿತರಣೆಗೆ ಕ್ರಮ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಅಪಘಾತದಲ್ಲಿ ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ, ನಂದೀಶ್, ಅರುಣ್, ಮನೋಜ್ ಎಂಬವರು ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ನಾಲ್ವರು ಹೊರಟಿದ್ದು, ಕೆಲ ನಿಮಿಷಗಳಲ್ಲಿ ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲ ತಿರುವು ಪಡೆದುಕೊಳ್ಳಬೇಕಿತ್ತು. ಅಷ್ಟರಲ್ಲೇ ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಬೈಕ್‌ ನಜ್ಜುಗುಜ್ಜಾಗಿದೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ಅಪಘಾತದ ವಿಚಾರ ತಿಳಿದ ಚಿಕ್ಕಬಳ್ಳಾಪುರ ಪೊಲೀಸರು ಸ್ಥಳ ಪರಿಶೀಲಿಸಿ, ಮೃತ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಘಟನೆ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಟಿಪ್ಪರ್ ವಶಕ್ಕೆ ಪಡೆದು, ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕಾರು ಪಲ್ಟಿ, ಯುವಕ ಸಾವು, ಯುವತಿ ಗಂಭೀರ

ಮಂಡ್ಯ : ಕೆಆರ್ ಪೇಟೆ ತಾಲೂಕಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಹಾಕಲಾಗಿದ್ದ ರಾಗಿ ಒಕ್ಕಣೆ ಮೇಲೆ ಸಾಗಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿ ಇದ್ದ ಇಬ್ಬರಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆಆರ್ ಪೇಟೆ ತಾಲೂಕಿನ ಅಶೋಕನಗರದಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ಯುವಕನನ್ನು ಪ್ರಜ್ವಲ್ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 26 ವರ್ಷದ ಕಾವ್ಯ ಎಂಬಾಕೆಯ ಸ್ಥಿತಿ ಗಂಭೀರವಾಗಿದೆ. ಕೆಆರ್ ಪೇಟೆ ಗ್ರಾಮಾಂತರ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.