ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಮಕ್ಕಳು ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಿ: ಡಿಡಿಪಿಐ ವೆಂಕಟೇಶ್ ರೆಡ್ಡಿ

ಬೇಸಿಗೆ ರಜೆ ಅವಧಿಯಲ್ಲಿ ಮಕ್ಕಳು ಕಾಲ ಕಳೆಯುವುದನ್ನು ಬಿಟ್ಟು ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತರಬೇತಿ ಪಡೆಯುವುದರ ಮೂಲಕ 15 ದಿನಗಳ ಕಾಲ ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಪೋಷಕರಿಗೆ ಮನವಿ ಮಾಡಿದರು

ಮಕ್ಕಳು ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಿ: ಡಿಡಿಪಿಐ ವೆಂಕಟೇಶ್ ರೆಡ್ಡಿ

Profile Ashok Nayak May 15, 2025 10:23 AM

ಚಿಕ್ಕಬಳ್ಳಾಪುರ : ಬೇಸಿಗೆ ರಜೆ ಅವಧಿಯಲ್ಲಿ ಮಕ್ಕಳು ಕಾಲ ಕಳೆಯುವುದನ್ನು ಬಿಟ್ಟು ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತರಬೇತಿ ಪಡೆಯುವುದರ ಮೂಲಕ 15 ದಿನಗಳ ಕಾಲ ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಪೋಷಕರಿಗೆ ಮನವಿ ಮಾಡಿದರು. ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಬಾಲ ಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

೨೦೨೫-೨೬ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ೧೫ ದಿನಗಳ ಕಾಲ ಪ್ರತಿ ದಿನ ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧:೩೦ ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ಶಿಬಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸಲಾಗುವುದು ಎಂದರು.

ಇದನ್ನೂ ಓದಿ: IAF Chief Amar Preet Singh: ಆಪರೇಶನ್ ಸಿಂದೂರ್ ಹಿಂದಿರುವ ಮಾಸ್ಟರ್ ಮೈಂಡ್ ಇವ್ರೇ ನೋಡಿ

ಚಿಕ್ಕ ವಯಸ್ಸಿನ ಮಕ್ಕಳಿಗೆ ನಮ್ಮ ಕಲೆ, ಸಂಸ್ಕೃತಿಯನ್ನು ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ  ಕಾರ್ಯಕ್ರಮ ಬಾಲಕಿಯರ ಬಾಲಮಂದಿರದಲ್ಲಿ ನಡೆಯಲಿದ್ದು, ಈ ಶಿಬಿರದಲ್ಲಿ ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ, ಕಸದಿಂದ ರಸ, ಸಮೂಹ ನೃತ್ಯ, ಸಮೂಹ ಗೀತೆ, ಯೋಗ, ಕರಾಟೆ ಚಟುವಟಿಕೆಗಳು ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್. ಗಂಗಾಧರಯ್ಯ, ಸರ್ಕಾರಿ ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಗಾಯಿತ್ರಿದೇವಿ, ಸಮಾಜ ಕಾರ್ಯಕರ್ತ ಕೆ. ಮಂಜುನಾಥ್, ಜಿಲ್ಲಾ ಬಾಲ ಭವನದ ಸಿಬ್ಬಂದಿ ಪವಿತ್ರ, ಪವನ್ ಕಲ್ಯಾಣ್, ಸಂಪನ್ಮೂಲ ವ್ಯಕ್ತಿಗಳಾದ ಶ್ರೀನಿವಾಸ್, ನಿಖಿತ, ಶಶಿಂದ್ರ, ನಶ್ರಾ ಸುಲ್ತಾನ್ ಹಾಗೂ ಮಕ್ಕಳು ಇದ್ದರು.

೧೪ಸಿಬಿಪಿಎಂ೨ : ಬೇಸಿಗೆ ರಜೆ ಅವಧಿಯಲ್ಲಿ ಮಕ್ಕಳು ಕಾಲ ಕಳೆಯುವುದನ್ನು ಬಿಟ್ಟು ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತರಬೇತಿ ಪಡೆಯುವುದರ ಮೂಲಕ ೧೫ ದಿನಗಳ ಕಾಲ ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಪೋಷಕರಿಗೆ ಮನವಿ ಮಾಡಿದರು.