MLA S N Subbareddy: ಧುಮ್ಮುಕ್ಕಿದ ಚಿತ್ರಾವತಿ ಜಲಾಶಯ; ಜನರಲ್ಲಿ ಸಂತಸ: ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಬಾಗೀನ ಅರ್ಪಣೆ
ಚಿತ್ರಾವತಿ ತುಂಬಿ ಕೋಡಿ ಹರಿದ ಪರಿಣಾಮ ಪುರಸಭೆಯ ವತಿಯಿಂದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಯವರ ಬಾಗೀನವನ್ನು ಅರ್ಪಿಸಿದರು. ಈ ವೇಳೆ ಮಾತನಾಡಿ ಚಿತ್ರಾವತಿ ಜಲಾಶಯ ತುಂಬಿ ಹರಿದಿದ್ದು ಎಲ್ಲರಲ್ಲೂ ಸಂತಸ ಮನೆ ಮಾಡುವಂತೆ ಮಾಡಿದೆ. ಪ್ರಮುಖವಾಗಿ ಬಾಗೇಪಲ್ಲಿ ಪಟ್ಟಣದ ಜನತೆಗೆ ಕುಡಿಯುವ ನೀರನ್ನು ಇಲ್ಲಿಂದಲೇ ಸರಬರಾಜು ಮಾಡಲಾಗುತ್ತಿದೆ.

ಚಿತ್ರಾವತಿ ಜಲಾಶಯ ಕೋಡಿಬಿದ್ದ ಪರಿಣಾಮ ಶಾಸಕ ಶುಕ್ರವಾರ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದರು. -

ಬಾಗೇಪಲ್ಲಿ: ಕಳೆದ ಕೆಲ ದಿನಗಳಿಂದ ಸುರಿದ ಭರ್ಜರಿ ಮಳೆಗೆ ಬಾಗೇಪಲ್ಲಿ ಪಟ್ಟಣಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುವ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿದ್ದು, ಪಟ್ಟಣ ಮತ್ತು ಸುತ್ತಮುತ್ತಲಿನ ಜನರ ಮೊಗದಲ್ಲಿ ಸಂತಸ ಮೂಡಿದ್ದು ತಂಡೋಪತಂಡಗಳಾಗಿ ಬಂದು ಜಲಾಶಯ ವೀಕ್ಷಣೆ ಮಾಡುತ್ತಿದ್ದಾರೆ.
ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿಯ ಪರಗೋಡು ಸಮೀಪದಲ್ಲಿ ನಿರ್ಮಾಣ ಮಾಡಿರುವ ಚಿತ್ರಾವತಿ ಜಲಾಶಯ ಕಳೆದ ವರ್ಷ ಮಳೆಯ ಕೊರತೆಯಿಂದ ತುಂಬಿರಲಿಲ್ಲ. ಇದೀಗ ತಾಲೂಕಿನ ಬಹುತೇಕ ಎಲ್ಲೆಡೆ ಮತ್ತು ಚಿತ್ರಾವತಿ ಜಲಾನಯನ ಪ್ರದೇಶದಲ್ಲಿ ಸುರಿದ ಭರ್ಜರಿ ಮಳೆಯಿಂದಾಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾದ ಕಾರಣ ಕೋಡಿ ಬಿದ್ದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ನಾಗರೀಕರಲ್ಲಿ ಸಂತೋಷ ಮನೆ ಮಾಡಿದಂತೆ ತಾಲೂಕು ಆಡಳಿತ ಕೂಡ ಬಾಗೀನಕ್ಕೆ ಸಿದ್ಧತೆ ಮಾಡಿಕೊಂಡು ಶಾಸಕರ ಮುಖೇನ ಇದನ್ನು ಮಾಡಿಸಿದೆ.
ಇದನ್ನೂ ಓದಿ: MLA S N Subbareddy: 70 ಲಕ್ಷ ವೆಚ್ಚದಲ್ಲಿ ಪೋತೇಪಲ್ಲಿ ರಸ್ತೆ ಕಾಮಗಾರಿ; ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ
ಒಮ್ಮೆ ಚಿತ್ರಾವತಿ ಜಲಾಶಯ ತುಂಬಿ ಹರಿದರೆ ಕನಿಷ್ಠ ೨ ವರ್ಷದವರೆಗೆ ಬಾಗೇಪಲ್ಲಿ ಪಟ್ಟಣದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಎಂಬುದೇ ಸುತ್ತಮುತ್ತಲಿನ ಜನರು ಹಾಗೂ ರೈತರ ಸಂತಸಕ್ಕೆ ಪ್ರಮುಖ ಕಾರಣವಾಗಿದೆ.
ಚಿತ್ರಾವತಿ ತುಂಬಿ ಕೋಡಿ ಹರಿದ ಪರಿಣಾಮ ಪುರಸಭೆಯ ವತಿಯಿಂದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರ ಬಾಗೀನವನ್ನು ಅರ್ಪಿಸಿದರು. ಈ ವೇಳೆ ಮಾತನಾಡಿ ಚಿತ್ರಾವತಿ ಜಲಾಶಯ ತುಂಬಿ ಹರಿದಿದ್ದು ಎಲ್ಲರಲ್ಲೂ ಸಂತಸ ಮನೆ ಮಾಡುವಂತೆ ಮಾಡಿದೆ. ಪ್ರಮುಖವಾಗಿ ಬಾಗೇಪಲ್ಲಿ ಪಟ್ಟಣದ ಜನತೆಗೆ ಕುಡಿಯುವ ನೀರನ್ನು ಇಲ್ಲಿಂದಲೇ ಸರಬರಾಜು ಮಾಡಲಾಗುತ್ತಿದೆ.ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿರುವುದರಿಂದಾಗಿ ಇನ್ನೂ ಎರಡು ವರ್ಷಗಳ ಕಾಲ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ಶ್ರೀನಿವಾಸ್, ಉಪಾದ್ಯಕ್ಷೆ ಸುಜಾತ ನರಸಿಂಹ ನಾಯ್ಡು, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಸದಸ್ಯ ಶ್ರೀನಿವಾಸ್ ರೆಡ್ಡಿ, ಹಾಗೂ ಸಾರ್ವಜನಿಕರು ಹಾಜರಿ ದ್ದರು.