ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಜ್ಞಾನಾಂಕುರ ಕಾರ್ಯಕ್ರಮ ಚುಂಚಶ್ರೀ ಚಾಲನೆ

ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ತಾಯಿಯ ಪಾತ್ರ ನಿರಂತರವಾಗಿರಬೇಕು. ತಾಯಿಯಿಂದ ಪ್ರಾರಂಭವಾದ ಪಾಠ ಸರಿಯಾದ ದಾರಿಯಲ್ಲಿ ಸಾಗಿದರೆ ಮಕ್ಕಳು ಅತ್ಯುನ್ನತ ಸ್ಥಾನವನ್ನು ತಲುಪ ಬಹುದು. ತಾಯಿಯು ಮಕ್ಕಳ ತಪ್ಪುಗಳನ್ನು ತಿದ್ದುವ ಸಮಾಜದಲ್ಲಿಆತ್ಮವಿಶ್ವಾಸ ಮೂಡಿಸುವ ಕಾರ್ಯವನ್ನು ಮಾಡಬೇಕು

ಚಿಕ್ಕಬಳ್ಳಾಪುರ : ಬಿಜಿಎಸ್ ಶಿಕ್ಷಣ ಸಂಸ್ಥೆಗಳ ನರ್ಸರಿ ಮತ್ತು ಎಲ್‌ಕೆಜಿ ಮಕ್ಕಳಿಗೆ ಶ್ರೀ ವೀರಾಂಜನೇ ಯಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಆದಿಚುಂಚನ ಗಿರಿ ಮಠಧ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು.

ಈ ವೇಳೆ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಾತನಾಡಿ, ಪೋಷಕರು ಬೆಳೆಯನ್ನು ಬೆಳೆಸುವ ರೀತಿಯಲ್ಲಿ ಮಕ್ಕಳನ್ನು ಪೋಷಣೆ ಮಾಡಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಜಗಳವಾಡಬಾರದು ಎಂಬ ಕಿವಿಮಾತನ್ನು ಹೇಳಿದರು. 

ಇದನ್ನೂ ಓದಿ: Chikkaballapur News: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಕಾಧಿಕಾರಿಯಾಗಿ ಡಾ.ವೈ.ನವೀನ್ ಭಟ್ ಅಧಿಕಾರ ಸ್ವೀಕಾರ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ತಾಯಿಯ ಪಾತ್ರ ನಿರಂತರವಾಗಿರಬೇಕು. ತಾಯಿಯಿಂದ ಪ್ರಾರಂಭವಾದ ಪಾಠ ಸರಿಯಾದ ದಾರಿಯಲ್ಲಿ ಸಾಗಿದರೆ ಮಕ್ಕಳು ಅತ್ಯುನ್ನತ ಸ್ಥಾನವನ್ನು ತಲುಪಬಹುದು. ತಾಯಿಯು ಮಕ್ಕಳ ತಪ್ಪುಗಳನ್ನು ತಿದ್ದುವ ಸಮಾಜದಲ್ಲಿಆತ್ಮವಿಶ್ವಾಸ ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದರು.

ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಗಾರ ಡಾ.ಎನ್.ಶಿವರಾಮರೆಡ್ಡಿ, ಶ್ರೀ ಮಂಗಳನಾಥ ಸ್ವಾಮೀಜಿ, ದುಬೈನ ರಶ್ಮಿ, ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ.ಬಿ, ತಹಸೀಲ್ದಾರ್ ಅನಿಲ್, ಮುಖ್ಯಶಿಕ್ಷಕ ಮೋಹನ್‌ಕುಮಾರ್.ಡಿ.ಸಿ ಇದ್ದರು.