ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Clean Shidlaghatta: ಶಿಡ್ಲಘಟ್ಟ ನಗರದಲ್ಲಿ ಸ್ವಚ್ಛತೆ ಕಾಪಾಡಲು ನಾಗರೀಕರು ಪಣತೊಡುವಂತಾಗಲಿ : ಇ.ಒ ಹೇಮಾವತಿ ಅಭಿಮತ

ಸ್ವಚ್ಛತಾಹೀ ಸೇವಾ ಅಭಿಯಾನವು ಭಾರತದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ.ಈ ಅಭಿಯಾನದ ಮೂಲಕವಾದರೂ  ಸಮುದಾಯಗಳಲ್ಲಿ ಸ್ವಚ್ಛತೆಯ ಅರಿವನ್ನು ಉತ್ತೇಜಿಸುವುದು,ಆಮೂಲಕ ತ್ಯಾಜ್ಯದ ನಿರ್ವಹಣೆಯನ್ನು ಸುಧಾರಿಸುವುದೇ ಆಗಿದೆ. ಆ ಮೂಲಕ ಪರಿಸರ ಸಂರಕ್ಷಣೆಯನ್ನು ಮಾಡಲು ಸಾಧ್ಯವಾಗಲಿದೆ

ಶಿಡ್ಲಘಟ್ಟ ನಗರದಲ್ಲಿ ಸ್ವಚ್ಛತೆ ಕಾಪಾಡಲು ನಾಗರೀಕರು ಪಣತೊಡುವಂತಾಗಲಿ

ನಗರವನ್ನುಸ್ವಚ್ಛವಾಗಿಡುವದರಿಂದ ನಗರದ ಆರೋಗ್ಯ ಕಾಪಾಡಲು ಸಾಧ್ಯ.ಆಮೂಲಕ ದೇಶದ ಆರ್ಥಿಕತೆಗೆ ಕೊಡುಗೆ ನೀಡಲು ಸಾಧ್ಯ ಎಂದು ತಾಲ್ಲೂಕು ಪಂಚಾಯಿತಿ ಇ ಒ ಹೇಮಾವತಿ ಕರೆ ನೀಡಿದರು. -

Ashok Nayak Ashok Nayak Sep 26, 2025 12:03 AM

ಶಿಡ್ಲಘಟ್ಟ : ನಗರವನ್ನುಸ್ವಚ್ಛವಾಗಿಡುವುದರಿಂದ ನಗರದ ಆರೋಗ್ಯ ಕಾಪಾಡಲು ಸಾಧ್ಯ. ಆ ಮೂಲಕ ದೇಶದ ಆರ್ಥಿಕತೆಗೆ ಕೊಡುಗೆ ನೀಡಲು ಸಾಧ್ಯ ಎಂದು ತಾಲ್ಲೂಕು ಪಂಚಾಯಿತಿ ಇ ಒ ಹೇಮಾವತಿ ಕರೆ ನೀಡಿದರು.

ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಟರಾಯನಸ್ವಾಮಿ ದೇವಸ್ಥಾನದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛತಾಹೀ ಸೇವಾ ಅಅಭಿಯಾನವು ಭಾರತದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಈ ಅಭಿಯಾನದ ಮೂಲಕವಾದರೂ  ಸಮುದಾಯ ಗಳಲ್ಲಿ ಸ್ವಚ್ಛತೆಯ ಅರಿವನ್ನು ಉತ್ತೇಜಿಸುವುದು,ಆಮೂಲಕ ತ್ಯಾಜ್ಯದ ನಿರ್ವಹಣೆಯನ್ನು ಸುಧಾರಿಸುವುದೇ ಆಗಿದೆ. ಆ ಮೂಲಕ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಾಗಲಿದೆ ಎಂದರು.

ಇದನ್ನೂ ಓದಿ: Shidlaghatta News: ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

ಮಹಾತ್ಮ ಗಾಂಧಿಯವರು ಸಮಾಜದ ಅಭಿವೃದ್ಧಿಗಾಗಿ ಶ್ರಮದಾನವನ್ನು ಒಂದು ಉತ್ತಮ ಮಾರ್ಗವೆಂದು ಪರಿಗಣಿಸಿದ್ದರು. ಆ ಮೂಲಕ ಸಮುದಾಯ ಅಭಿವೃದ್ಧಿ, ಪರಿಸರ ಸಂರಕ್ಷಣೆ, ಸಾಮಾಜಿಕ ಏಕತೆ, ಸಮಾನತೆಯ ಪ್ರಜ್ಞೆ, ವೈಯಕ್ತಿಕ ಮತ್ತು ಸಮುದಾಯದ ಬೆಳವಣಿಗೆಯಾಗಿದೆ. ಪರಿಸರ ಸಂರಕ್ಷಣೆ ಮೇಲೆ ನಮ್ಮೆಲ್ಲರ ಭವಿಷ್ಯವಿದ್ದು, ಶುದ್ಧ ಪರಿಸರ ಇದ್ದರೆ ಮಾತ್ರ ಎಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ ೧೭ ರಿಂದ ಅಕ್ಟೋಬರ್ ೨ ವರೆಗೆ ತಾಲ್ಲೂಕು ಹಾಗೂ ಜಿಲ್ಲೆಯಾದ್ಯಂತ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಸಪ್ತಾಹ ಆಚರಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದರು.

ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕರ ಚಂದ್ರಪ್ಪ ಮಾತನಾಡಿ, ತಾಲ್ಲೂಕಿನ ೨೮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಚ್ಛತಾ ಆಂದೋಲನ ಹಮ್ಮಿಕೊಂಡಿದ್ದು, ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಸೇರಿ ಶ್ರಮದಾನ ಮಾಡುವ ಮುಖಾಂತರ ಸ್ವಚ್ಛತಾ ಆಂದೋ ಲನ ಹಮ್ಮಿಕೊಂಡಿದ್ದು, ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಟರಾಯನಗುಡಿ ದೇವಸ್ಥಾನದ ಬಳಿ ನರೇಗಾ ಸಿಬ್ಬಂದಿ, ಸ್ವ-ಸಹಾಯ ಸಂಘದವರು, ಅಂಗನವಾಡಿ ಕಾರ್ಯಕರ್ತೆ ಯರು, ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು ಎಂದರು.

ಈ ಸಂದರ್ಭದಲ್ಲಿ  ಮಳಮಾಚನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೈಲ, ನರೇಗಾ ಸಿಬ್ಬಂದಿ, ಸ್ವ-ಸಹಾಯ ಸಂಘದವರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮಸ್ಥರು ಸೇರಿದಂತೆ ಇತರರು ಹಾಜರಿದ್ದರು.