ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Civil Police Constable Recruitment: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ: 946 ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷೆ

ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಜಿಲ್ಲೆ ಹಾಗೂ ರೈಲ್ವೆ ಘಟಕಗಳನ್ನು ಒಳಗೊಂಡ ಕೇಂದ್ರ ವಲಯದಲ್ಲಿ 200 ಹುದ್ದೆಗಳಿದ್ದು, ಒಟ್ಟು 946 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇವರಿಗೆ ಸೆ.28ರಿಂದ ಅ.3ರವರೆಗೆ ಬೆಂಗಳೂರಿನ ಕೊರಮಂಗಲದ ಮಡಿವಾಳ ಮಾರುಕಟ್ಟೆ ಎದುರಿನ 3ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.

ಚಿಕ್ಕಬಳ್ಳಾಪುರ: ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ವತಿಯಿಂದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ (RPC ಮತ್ತು KK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಡ್ಯ ಪರೀಕ್ಷೆ (PST) ಹಾಗೂ ಸಹಿಷ್ಣುತಾ ಪರೀಕ್ಷೆ (ET) ಸೆ.28ರಿಂದ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಆರಂಭವಾಗಲಿದ್ದು, ಚಿಕ್ಕಬಳ್ಳಾಪುರ ಸೇರಿದಂತೆ ಕೇಂದ್ರ ವಲಯದ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೊರಮಂಗಲದಲ್ಲಿ ಪರೀಕ್ಷೆ ನಡೆಯಲಿದೆ.

ಒಟ್ಟು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (RPC) 3,395 ಹುದ್ದೆಗಳಿಗೆ 16,454 ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿ ಗಳು ಅರ್ಹರಾಗಿದ್ದಾರೆ.

ಇದನ್ನೂ ಓದಿ: NEET re-examination: ನೀಟ್ ಮರು ಪರೀಕ್ಷೆ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಜಿ.ಪ್ರಭು ಕಟ್ಟುನಿಟ್ಟಿನ ಸೂಚನೆ

ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಜಿಲ್ಲೆ ಹಾಗೂ ರೈಲ್ವೆ ಘಟಕಗಳನ್ನು ಒಳಗೊಂಡ ಕೇಂದ್ರ ವಲಯದಲ್ಲಿ 200 ಹುದ್ದೆಗಳಿದ್ದು, ಒಟ್ಟು 946 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇವರಿಗೆ ಸೆ.28ರಿಂದ ಅ.3ರವರೆಗೆ ಬೆಂಗಳೂರಿನ ಕೊರಮಂಗಲದ ಮಡಿವಾಳ ಮಾರುಕಟ್ಟೆ ಎದುರಿನ 3ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.

ಬೆಂಗಳೂರು ನಗರ ಘಟಕದ 2,015 ಹುದ್ದೆಗಳಿಗೆ 9,887 ಅಭ್ಯರ್ಥಿಗಳಿಗೆ ಸೆ.28ರಿಂದ ಅ.5ರವರೆಗೆ ಚಾಮರಾಜಪೇಟೆ, ಆಡುಗೋಡಿ ಹಾಗೂ ತನಿಷಂದ್ರದ ಸಿಎಆರ್ ಮೈದಾನಗಳಲ್ಲಿ ಪರೀಕ್ಷೆ ನಡೆಯಲಿದೆ.

ಇದೇ ಅವಧಿಯಲ್ಲಿ ದಕ್ಷಿಣ, ಪೂರ್ವ, ಪಶ್ಚಿಮ ಹಾಗೂ ಉತ್ತರ ವಲಯಗಳ ಅಭ್ಯರ್ಥಿಗಳಿಗೂ ಆಯಾ ಜಿಲ್ಲೆಗಳಲ್ಲಿ ನಿಗದಿತ ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅಕ್ಟೋಬರ್‌ನಲ್ಲಿ ಬೆಂಗಳೂರು, ಕೊಪ್ಪಳ ಹಾಗೂ ಕಲಬುರಗಿಯಲ್ಲಿ ಪರೀಕ್ಷೆ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಿಂದ ಕರೆ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು, ಅದರಲ್ಲಿ ನಮೂದಿಸಿರುವ ದಿನಾಂಕ ಮತ್ತು ಸಮಯಕ್ಕೆ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಪೊಲೀಸ್ ನೇಮಕಾತಿ ವಿಭಾಗ ತಿಳಿಸಿದೆ.