ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಪ್ರತಿ ತಿಂಗಳಿಗೊಮ್ಮೆ ಓವರ್‌ ಹೆಡ್‌ ಟ್ಯಾಂಕ್‌ ಸ್ವಚ್ಛತೆ ಕಡ್ಡಾಯ: ಸಿಇಒ ಡಾ.ನವೀನ್ ಭಟ್‌.ವೈ

ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಭೆಯನ್ನು ಕರೆದು ಗ್ರಾಮದ ನೀರು ಮತ್ತು ನೈರ್ಮಲ್ಯ ಬಗ್ಗೆ ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕು, ಆ ಮೂಲಕ ಪ್ರತಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡ ಬೇಕು. ಪ್ರತಿ ಮೂರು ತಿಂಗಳಿ ಗೊಮ್ಮೆ ಕಡ್ಡಾಯವಾಗಿ ಏಫ್‌ಟಿಕೆ ಮೂಲಕ ನೀರು ಪರೀಕ್ಷೆ ಮಾಡಿಸಬೇಕು

ಪ್ರತಿ ತಿಂಗಳಿಗೊಮ್ಮೆ ಓವರ್‌ ಹೆಡ್‌ ಟ್ಯಾಂಕ್‌ ಸ್ವಚ್ಛತೆ ಕಡ್ಡಾಯ

Ashok Nayak Ashok Nayak Jul 27, 2025 3:43 PM

ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದಲ್ಲಿ ಜಲ್ ಜೀವನ್ ಮಿಷನ್ ಗ್ರಾಮೀಣ ಯೋಜನೆಯಡಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ಗಳನ್ನು ಪ್ರತಿ ತಿಂಗಳಿಗೊಮ್ಮೆ ಶುಚಿಗೊಳಿಸಬೇಕು, ಶುಚಿ ಗೊಳಿಸಿರುವ ಬಗ್ಗೆ ಒವರ್ ಹೆಡ್ ಟ್ಯಾಂಕ್ ಮೇಲೆ ಮುಂದ್ರಿಸಬೇಕು ಹಾಗೂ ಹೊಸದಾಗಿ ನಿರ್ಮಾಣ ಮಾಡುವ ಟ್ಯಾಂಕ್ ಗಳ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ನಿರ್ಮಾಣ ಮಾಡಬೇಕು ಎಂದು ಮಾನ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ನವೀನ್ ಭಟ್.ವೈ. ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಮಂಚೇನಹಳ್ಳಿ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಜಲ್‌ ಜೀವನ್‌ ಮಿಷನ್‌, ನರೇಗಾ ಹಾಗೂ ಸ್ವಚ್ಛ ಭಾರತ್‌ ಮಿಷನ್‌ ಗ್ರಾಮೀಣ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಭೆಯನ್ನು ಕರೆದು ಗ್ರಾಮದ ನೀರು ಮತ್ತು ನೈರ್ಮಲ್ಯ ಬಗ್ಗೆ ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕು, ಆ ಮೂಲಕ ಪ್ರತಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ಪ್ರತಿ ಮೂರು ತಿಂಗಳಿ ಗೊಮ್ಮೆ ಕಡ್ಡಾಯವಾಗಿ ಏಫ್‌ಟಿಕೆ ಮೂಲಕ ನೀರು ಪರೀಕ್ಷೆ ಮಾಡಿಸಬೇಕು. ಕೆಟ್ಟು ಹೋಗಿರುವ ಗೇಟ್‌ ವಾಲ್ ಗಳನ್ನು ತಕ್ಷಣವೇ ಬದಲಾಯಿಸಬೇಕು ಇಲ್ಲವೇ ದುರಸ್ಥಿ ಮಾಡಬೇಕು ಎಂದು ಸೂಚಿಸಿದರು. 

ಇದನ್ನೂ ಓದಿ: Chikkaballapur News: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಕಾನೂನಿನ ಅರಿವು ಅಗತ್ಯ

ಪೆರೇಸಂದ್ರ ಗ್ರಾಮದಲ್ಲಿ ಜಲ್‌ ಜೀವನ್‌ ಮೀಷನ್‌ ಯೋಜನೆಯ ಕಾಮಗಾರಿ ವಿಳಂಭವಾಗಿದೆ, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರ ರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಕಾರ್ಯಪಾಲಕ ಅಭಿಯಂತರರಿಗೆ ಆದೇಶಿಸಿದರು. 

ಅರಿವು ಕೇಂದ್ರಕ್ಕೆ ಭೇಟಿ

ನಂತರ ಗ್ರಾಮದ ಡಿಜಿಟಲ್ ಗ್ರಾಂಥಲಾಯಕ್ಕೆ ಭೇಟಿ ಪರಿಶೀಲನೆ ನಡೆಸಿದರು ಅರಿವು ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ವಿದ್ಯಾರ್ಥಿಗಳು, ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತಹ ಪುಸ್ತಕಗಳನ್ನು ಇಡುವಂತೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ತಾಲ್ಲೂಕಿನ ಪಟ್ರೇನಹಳ್ಳಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ತಾಂಡ್ರಮರದಹಳ್ಳಿ ಗ್ರಾಮದಲ್ಲಿನ ಜೆಜೆಎಮ್ ಕಾಮಗಾರಿ ವೀಕ್ಷಿಸಿದರು. ನಂತರ ಶಾಲೆ ಮತ್ತು ಅಂಗನವಾಡಿಗೆ ಭೇಟಿ ನೀಡಿ ಸಲಹೆ ಸೂಚನೆ ನೀಡಿದರು. 

ಎಂಆರ್‌ಎಫ್‌ ಘಟಕ ಕಾಮಗಾರಿ ವೀಕ್ಷಣೆ

ನಂತರ ಮಂಚೇನಹಳ್ಳಿ ತಾಲ್ಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಮಾನ್ಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳು, ಪಂಚಾಯಿತಿ ವ್ಯಾಪ್ತಿಯ ಕಾಟನಾಗೇನಹಳ್ಳಿ ಗ್ರಾಮ ದಲ್ಲಿ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಸುಮಾರು ಎರಡೂವರೆ ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಘಟಕ(ಎಂ.ಆರ್‌.ಎಫ್‌)ದ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಮಾಡಬೇಕು. ಯಾವುದೇ ಲೋಪದೋಷಗಳಿಲ್ಲದೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಮುಂದಿನ ಅಕ್ಟೋಬರ್‌ ೨ ರ ಗಾಂಧಿ ಜಯಂತಿ ವೇಳೆಗೆ ಸಂಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಿ, ಚಾಲನೆ ಮಾಡಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳು ಕಾಲಕಾಲಕ್ಕೆ ಪ್ರಗತಿಯನ್ನು ವರದಿ ಮಾಡಬೇಕು ಎಂದು ಸೂಚಿಸಿದರು. 

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಾಮಕೃಷ್ಣಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಂಜುನಾಥ್, ಗೌರಿಬಿದನೂರು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೊನ್ನಯ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, JJM, ನರೇಗಾ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಜಿಲ್ಲಾ ಸಮಾಲೋಚಕರು ಉಪಸ್ಥಿತರಿದ್ದರು.

ಟ್ಯಾಂಕ್‌ ಹತ್ತಿ ಸ್ವಚ್ಛತೆ ವೀಕ್ಷಿಸಿದ ಸಿಇಒ!

ಇದೇ ವೇಳೆ ಮಾನ್ಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮ ಪಂಚಾಯಿತಿಯ ತಿಪ್ಪಾರಡ್ಡಿ ನಾಗೇನಹಳ್ಳಿಯಲ್ಲಿ ಜಲ್‌ ಜೀವನ್‌ ಮಿಷನ್‌ ಯೋಜನೆಯಡಿ ನಿರ್ಮಾಣ ಮಾಡಲಾದ ಓವರ್‌ ಹೆಡ್‌ ಟ್ಯಾಂಕ್ ನ್ನು ಹತ್ತಿ ಟ್ಯಾಂಕ್‌ ನ ಗುಣ ಮಟ್ಟ ಹಾಗೂ ಶುಚಿತ್ವದ ಬಗ್ಗೆ ಪರಿಶೀಲಿಸಿ ಖಾತ್ರಿ ಪಡಿಸಿಕೊಂಡರು.