ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುರುಕುಗೊಂಡ ಸ್ವಚ್ಛತಾ ಅಭಿಯಾನ

ರಸ್ತೆಗಳ ಎರಡೂ ಬದಿಗಳಲ್ಲಿ ಬಿದ್ದಿರುವ ಕಲ್ಲು, ಮಣ್ಣುಗುಡ್ಡೆಗಳು ಮುಂತಾದ ತ್ಯಾಜ್ಯ ಹಾಗೂ ಉಪಯೋಗಿಸದೇ ಬಿಟ್ಟಿರುವ ತಳ್ಳುವ ಬಂಡಿಗಳನ್ನು ತೆಗೆಸಿ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ರಾಜಕಾಲುವೆಗಳು, ಕೆಳಸೇತುವೆಗಳು ಹಾಗೂ ತೆರೆದ ಚರಂಡಿ ಗಳನ್ನು ಸ್ವಚ್ಛಗೊಳಿಸುತ್ತಿರುವುದರಿಂದ ಮಳೆಯಿಂದ ಯಾವುದೇ ರೀತಿಯ ಅಡಚಣೆ ಯಾಗುವುದನ್ನು ತಡೆಯಲಾಗುತ್ತಿದೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಳೆದ 5 ತಿಂಗಳಿಂದ ಸ್ವಚ್ಛತೆಗೆ ಒತ್ತು ನೀಡಿ ಹಲವು ದಿಟ್ಟ ಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ. ಪ್ರತಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿಶೇಷ ತಂಡಗಳನ್ನು ರಚಿಸಿ ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳು, ರಸ್ತೆ ವಿಭಜಕಗಳು, ಡ್ರೈನ್ ಗಳು, ರಾಜಕಾಲುವೆಗಳು ಮುಂತಾದವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುತ್ತಿದೆ.

ರಸ್ತೆಗಳ ಎರಡೂ ಬದಿಗಳಲ್ಲಿ ಬಿದ್ದಿರುವ ಕಲ್ಲು, ಮಣ್ಣುಗುಡ್ಡೆಗಳು ಮುಂತಾದ ತ್ಯಾಜ್ಯ ಹಾಗೂ ಉಪಯೋಗಿಸದೇ ಬಿಟ್ಟಿರುವ ತಳ್ಳುವ ಬಂಡಿಗಳನ್ನು ತೆಗೆಸಿ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ರಾಜಕಾಲುವೆಗಳು, ಕೆಳಸೇತುವೆಗಳು ಹಾಗೂ ತೆರೆದ ಚರಂಡಿಗಳನ್ನು ಸ್ವಚ್ಚಗೊಳಿಸುತ್ತಿರುವುದರಿಂದ ಮಳೆಯಿಂದ ಯಾವುದೇ ರೀತಿಯ ಅಡಚಣೆಯಾಗುವುದನ್ನು ತಡೆಯಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕಸದ ಬ್ಲಾಕ್ ಸ್ಪಾಟ್ ಗಳ ತೆರವು ಕಾರ್ಯವನ್ನು ಪೌರಾಯುಕ್ತರು, ಮುಖ್ಯಾಧಿಕಾರಿಗಳು ವಿಶೇಷ ಒತ್ತು ನೀಡಿದ್ದು, ಕಮ್ಯೂನಿಟಿ ಮೊಬಿಲೈಸರ್ ಗಳನ್ನು ಬಳಸಿಕೊಂಡು ತೆರವು ಗೊಳಿಸಲಾಗುತ್ತಿದೆ.

ಇದನ್ನೂ ಓದಿ: Chikkaballapur News: ವೈಭವ ಮತ್ತು ಲವಲವಿಕೆಯಿಂದ 91ನೇ ಹುಟ್ಟುಹಬ್ಬ ಆಚರಿಸಿಕೊಂಡ ಜಿ.ಪಂ.ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ

ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಯಂತ್ರಿ ಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದು, ಅದರಂತೆ ಚಿಂತಾಮಣಿ ನಗರದಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದ ವರ್ತಕರಿಗೆ ರೂ.50 ಸಾವಿರ ದಂಡ ವಿಧಿಸಿ ಅಂಗಡಿಯ ಪರವಾನಿಗೆ ರದ್ದುಗೊಳಿಸಲಾಗಿದೆ. ಗೌರಿಬಿದನೂರು ನಗರಸಭೆ ವ್ಯಾಪ್ತಿಯಲ್ಲಿ ಸಿ & ಡಿ ತ್ಯಾಜ್ಯವನ್ನು ನಿಗಧಿತ ಸ್ಥಳದಲ್ಲಿ ವಿಲೇವಾರಿ ಮಾಡದ ಟ್ರ‍್ಯಾಕ್ಟರ್ ಚಾಲಕನಿಗೆ ದಂಡ ವಿಧಿಸಲಾಗಿದೆ.

ಜಿಲ್ಲೆಯಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಮಾನ್ಯ ಜಿಲ್ಲಾಧಿಕಾರಿ ಗಳು ಕಾಲೋಚಿತವಾಗಿ ನೀಡುತ್ತಿರುವ ಸಲಹೆ ಸೂಚನೆಗಳನ್ನು ಪಾಲಿಸಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಸಮಸ್ತ ನಾಗರಿಕರು ಈ ಅಭಿಯಾನಕ್ಕೆ ಕೈ ಜೋಡಿಸಬೇಕು. ಹಸಿ ಮತ್ತು ಒಣ ಕಸವನ್ನು ಸರ್ಕಾರಿ ಕಸ ಸಂಗ್ರಹಣೆಯ ವಾಹನಗಳಿಗೆ ನೀಡಬೇಕು. ನಿಷೇಧಿತ ಪ್ಲಾಸ್ಟಿಕ್ ಅನ್ನು ಬಳಸ ದಂತೆ ಪಣತೊಡಬೇಕು. ಬ್ಲಾಕ್ ಸ್ಟಾಟ್ʼಗಳಲ್ಲಿ ಕಸ ಎಸೆಯದಂತೆ ಎಚ್ಚರ ವಹಿಸಬೇಕು. ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಗಿಡ ಗಂಟಿಗಳು ಬೆಳೆಯದಂತೆ ಹಾಗೂ ಯಾವುದೇ ರೀತಿಯ ತ್ಯಾಜ್ಯ ಸಂಗ್ರಹವಾಗದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.