Chikkaballapur News: ಬಿಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲಾ ಅವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಸದಾ ನೇರ ನುಡಿಯ ದೂರದೃಷ್ಟಿಯ ನಾಯಕರಾದ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿವೃದ್ಧಿಪರ ಆಲೋಚನೆ ಮಾಡುವ ನಾಯಕರು. ಅವರ ಹುಟ್ಟು ಹಬ್ಬದ ಅಂಗವಾಗಿ ಶಾಲೆಯ ಆವರಣವನ್ನು ಸ್ವಚ್ಛ ಮಾಡುವ ಮೂಲಕ ಆಚರಿಸಿದ್ದೇವೆ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಸಚಿ ವರು ಇನ್ನೂ ಉನ್ನತ ಸ್ಥಾನಗಳನ್ನು ಅಲಂಕರಿಸಲಿ ಆ ದೇವರಲ್ಲಿ ಪ್ರಾರ್ಥಿಸುತ್ತೇವೆ

ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಅವರ ೫೬ನೇ ಹುಟ್ಟು ಹಬ್ಬದ ಪ್ರಯುಕ್ತ ಚಿಂತಾಮಣಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಚಿಂತಾಮಣಿ: ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ. ಸಿ.ಸುಧಾಕರ್ ಅವರ 56ನೇ ಹುಟ್ಟುಹಬ್ಬದ ಪ್ರಯುಕ್ತ ಚಿಂತಾಮಣಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಚಿಂತಾಮಣಿ ತಾಲ್ಲೂಕಿನ ಉಪ್ಪರಪೇಟೆ ಗ್ರಾಮ ಪಂಚಾ ಯತಿ ವ್ಯಾಪ್ತಿಯ ಬಿಂಗನಹಳ್ಳಿ ಗ್ರಾಮಸ್ಥ ರಿಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಸ್ವಚ್ಛತೆಯನ್ನು ಮಾಡು ವುದರ ಮೂಲಕ ಸಚಿವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಿದರು.
ಇದನ್ನೂ ಓದಿ: Chikkaballapur news: ಒತ್ತುವರಿ ತೆರವು ಗೊಳಿಸಿದ ಕಂದಾಯ, ಭೂಮಾಪನ ಇಲಾಖೆ ಅಧಿಕಾರಿಗಳು
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದರೆಡ್ಡಿ ಮಾತನಾಡಿ ಸದಾ ನೇರ ನುಡಿಯ ದೂರದೃಷ್ಟಿಯ ನಾಯಕರಾದ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿವೃದ್ಧಿಪರ ಆಲೋಚನೆ ಮಾಡುವ ನಾಯಕರು. ಅವರ ಹುಟ್ಟು ಹಬ್ಬದ ಅಂಗವಾಗಿ ಶಾಲೆಯ ಆವರಣವನ್ನು ಸ್ವಚ್ಛ ಮಾಡುವ ಮೂಲಕ ಆಚರಿಸಿದ್ದೇವೆ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಸಚಿ ವರು ಇನ್ನೂ ಉನ್ನತ ಸ್ಥಾನಗಳನ್ನು ಅಲಂಕರಿಸಲಿ ಆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಹೇಳಿ ದರು.
ಚಿಂತಾಮಣಿ ನಗರದ ನಗರಸಭೆ ಆವರಣದಲ್ಲಿ ಸಚಿವರ ಹುಟ್ಟುಹಬ್ಬದ ಪ್ರಯುಕ್ತ ಪೌರ ಕಾರ್ಮಿಕ ರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಚಿವರ ಅಭಿಮಾನಿ ಬೀಡಾ ಶ್ರೀನಿವಾಸ್ ಆಯೋಜಿಸಿದ್ದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ,ಹೃದಯ ತಪಾಸಣೆ, ಸೇರಿದಂತೆ ವಿವಿಧ ರೀತಿಯ ತಪಾಸಣೆಗಳನ್ನು ವೈದ್ಯರು ನಡೆಸಿ ಔಷಧಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಂಜಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ಅಂಜನಪ್ಪ ಮುಖಂಡರಾದ ಮುನಿ ರೆಡ್ಡಿ, ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.