ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಪರಿಸರ ಜಾಗೃತಿಗೆ ಬದ್ಧತೆ: ಸುಭಾನ್ ಸೇವೆಗೆ ಜಿಲ್ಲಾ ಆಟೋ ಯೂನಿಯನ್ ವತಿಯಿಂದ ಗೌರವ

ಇನ್ನೂ ಸುಭಾನ್ ಅವರು ಕಳೆದ ಹಲವಾರು ವರ್ಷಗಳಿಂದ ಪರಿಸರ ಜಾಗೃತಿ ಅಭಿಯಾನ,ಗಿಡ–ಮರ ನೆಡುವ ಕಾರ್ಯ ಹಾಗೂ ಸಾಮಾಜಿಕ ಸೇವೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು ಇದರ ಮೂಲಕ ಸ್ಥಳೀಯವಾಗಿ ವಿಶಿಷ್ಟ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದಲ್ಲಿ ನಡೆದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ  ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಸುಭಾನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು

ಆಟೋ ಚಾಲಕ ಮತ್ತು ಪರಿಸರವಾದಿ ಸುಭಾನ್ ಅವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿAದ ಪ್ರದಾನವಾದ ಇಂದಿರಾ ಪ್ರೀಯದರ್ಶಿನಿ ಜಿಲ್ಲಾ ಮಟ್ಟದ ಪ್ರಶಸ್ತಿ ಹಿನ್ನೆಲೆ, ನಗರ ಆಟೋ ಯೂನಿಯನ್ ವತಿಯಿಂದ ಅವರನ್ನು ಇಂದು ಸನ್ಮಾನಿಸಲಾಯಿತು.

ಚಿಕ್ಕಬಳ್ಳಾಪುರ : ನಗರದ ಪರಿಸರ ಸಂರಕ್ಷಣೆಯಲ್ಲಿ ಹಲವಾರು ವರ್ಷಗಳಿಂದ ತೊಡಗಿಸಿ ಕೊಂಡಿರುವ ಆಟೋ ಚಾಲಕ ಮತ್ತು ಪರಿಸರವಾದಿ ಸುಭಾನ್ ಅವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿAದ ಪ್ರದಾನವಾದ ಇಂದಿರಾ ಪ್ರೀಯದರ್ಶಿನಿ ಜಿಲ್ಲಾ ಮಟ್ಟದ ಪ್ರಶಸ್ತಿ ಹಿನ್ನೆಲೆ, ನಗರ ಆಟೋ ಯೂನಿಯನ್ ವತಿಯಿಂದ ಅವರನ್ನು ಇಂದು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪರಿಸರವಾದಿ ಆಟೋ ಸುಭಾನ್ ಪ್ರತಿಯೊಬ್ಬರೂ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗೆ ವಿಶೇಷ ಗಮನ ನೀಡಬೇಕು.ಹೆಚ್ಚಿನ ಪ್ರಮಾಣದಲ್ಲಿ ಗಿಡ–ಮರಗಳನ್ನು ನೆಟ್ಟು ಅವುಗಳ ಪೋಷಣೆಗೆ ಕಾಳಜಿ ವಹಿಸಬೇಕು.ನಗರದಲ್ಲಿ ಎಲ್ಲಾದರೂ ಮರಗಳ ಕಟಾವಾಗು ತ್ತಿದ್ದರೆ ಅದರ ವಿರುದ್ಧ ಪ್ರಶ್ನೆ ಕೇಳುವುದು ನಾಗರಿಕರ ಕರ್ತವ್ಯ ಎಂದರು.

ಇದನ್ನೂ ಓದಿ: Chikkaballapur News: ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ: ಡೀನ್ ಡಾ.ಎಂ.ಎಲ್.ಮಂಜುನಾಥ್

ಇನ್ನೂ ಸುಭಾನ್ ಅವರು ಕಳೆದ ಹಲವಾರು ವರ್ಷಗಳಿಂದ ಪರಿಸರ ಜಾಗೃತಿ ಅಭಿಯಾನ,ಗಿಡ–ಮರ ನೆಡುವ ಕಾರ್ಯ ಹಾಗೂ ಸಾಮಾಜಿಕ ಸೇವೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು ಇದರ ಮೂಲಕ ಸ್ಥಳೀಯವಾಗಿವಿಶಿಷ್ಟ ಗುರುತಿಸಿಕೊಂಡಿದ್ದಾರೆ.ಇತ್ತೀಚೆಗೆ ಬೆಂಗಳೂರು ನಗರದಲ್ಲಿ ನಡೆದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ  ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಸುಭಾನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಆಟೋ ಯೂನಿಯನ್ ಗೌರವಾಧ್ಯಕ್ಷ ಡಾಂಬು ಶ್ರೀನಿವಾಸ್,ಜಿಲ್ಲಾ ಅಧ್ಯಕ್ಷ ಮೊಬೈಲ್ ಬಾಬು, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್,ತಾಲ್ಲೂಕು ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ಲಕ್ಷ್ಮೀನಾರಾಯಣ,ಕಂಚೇಗೌಡ, ಸೇರಿದಂತೆ ಅನೇಕ ಹುದ್ದೆದಾರರು ಮತ್ತು ಆಟೋ ಚಾಲಕರರು ಹಾಜರಿದ್ದರು.