ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರ: ಮಾರ್ಕೆಟ್ ಮೋಹನ್ ಆಕ್ರೋಶ

ರಾಜ್ಯದಲ್ಲಿ ಅಗತ್ಯ ವಸ್ತುಗಳು ಹಾಗೂ ವಿವಿಧ ಸೇವೆಗಳ ದರ ನಿರಂತರವಾಗಿ ಏರಿಕೆಯಾಗುತ್ತಿರುವು ದರಿಂದ ಬಡವರು, ಮಧ್ಯಮ ವರ್ಗದವರು, ರೈತರು ಮತ್ತು ವ್ಯಾಪಾರಿಗಳು ಸಂಕಷ್ಟ ಎದುರಿಸು ವಂತಾಗಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಮಾರ್ಕೆಟ್ ಮೋಹನ್ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ

-

Profile
Ashok Nayak Nov 5, 2026 10:29 PM

ಗೌರಿಬಿದನೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳು ಹಾಗೂ ವಿವಿಧ ಸೇವೆಗಳ ದರ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಬಡವರು, ಮಧ್ಯಮ ವರ್ಗದವರು, ರೈತರು ಮತ್ತು ವ್ಯಾಪಾರಿಗಳು ಸಂಕಷ್ಟ ಎದುರಿಸುವಂತಾಗಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಮಾರ್ಕೆಟ್ ಮೋಹನ್ ಆರೋಪಿಸಿದರು.

ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಾಲು, ವಿದ್ಯುತ್, ಬಸ್ ಪ್ರಯಾಣ, ಪೆಟ್ರೋಲ್ ಮತ್ತು ಡೀಸೆಲ್, ಸ್ಟಾಂಪ್ ಶುಲ್ಕ, ತರಕಾರಿ ಹಾಗೂ ದಿನಸಿ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಇದರಿಂದ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ದೂರಿದರು.

ಇದನ್ನೂ ಓದಿ: Gauribidanur News: ವೀರ ಮಹಿಳೆಯ ಹೋರಾಟದ ಆದರ್ಶ ಯುವಜನರಿಗೆ ಸ್ಫೂರ್ತಿ: ಎನ್.ಎಂ.ರವಿನಾರಾಯಣರೆಡ್ಡಿ

ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಮತ ಪಡೆದ ಸರ್ಕಾರ, ಮತ್ತೊಂದೆಡೆ ಬೆಲೆ ಏರಿಕೆಯ ಮೂಲಕ ಜನರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಹೊರಿಸುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.

ಜನರ ಸಂಕಷ್ಟಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಜನರು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರು ಸರ್ಕಾರದ ಆಡಳಿತಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.