ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದಾಗ ಮೃತಪಟ್ಟ ನೌಕರರ ಕುಟುಂಬಕ್ಕೆ ಕೇವಲ ಒಂದು ತಿಂಗಳೊ ಳಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ನೀಡುವ ಮೂಲಕ ಜಿಲ್ಲಾ ಪಂಚಾಯಿತಿ ಮಾನವೀಯತೆ ಮೆರೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಪ್ರಕಾಶ್ ಅವರು ಇತ್ತೀಚೆಗೆ ಮೃತಪಟ್ಟ ಹಿನ್ನೆಲೆಯಲ್ಲಿ, ಅವರ ಕುಟುಂಬದ ಅವಲಂಬಿತೆ ಕುಮಾರಿ ಗಗನಾಶ್ರೀ ಅವರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್ ವೈ.,ಭಾ.ಆ.ಸೇ. ಅವರು ಆ.7ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಿದರು.
ಇದನ್ನೂ ಓದಿ: Chikkaballapur News: ಯುವಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ರಾಜಕೀಯ ಅಗತ್ಯ: ಕಾಮ್ರೇಡ್ ಲವಿತ್ರ
ಮೃತ ನೌಕರರ ಕುಟುಂಬಕ್ಕೆ ಒಂದು ತಿಂಗಳೊಳಗೇ ನೇಮಕಾತಿ ಆದೇಶ ನೀಡಿರುವುದು ಗಮನಾರ್ಹ ವಾಗಿದ್ದು, ಕುಟುಂಬಕ್ಕೆ ಆರ್ಥಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ತ್ವರಿತವಾಗಿ ಕ್ರಮ ಕೈಗೊಂಡಿದೆ.
ನೂತನವಾಗಿ ನೇಮಕಗೊಂಡಿರುವ ಗಗನಾಶ್ರೀ ಅವರು ತಮಗೆ ವಹಿಸಿರುವ ಹುದ್ದೆಯ ಜವಾಬ್ದಾರಿ ಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್ ತಿಳಿಸಿದರು.