ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

NEET exam question paper leak scandal: ನೀಟ್ ಹಗರಣಕ್ಕೆ ಕಾಂಗ್ರೆಸ್ ಆಕ್ರೋಶ: ವಿದ್ಯಾರ್ಥಿಗಳ ಭವಿಷ್ಯ ರಕ್ಷಣೆಗೆ ಹೋರಾಟ ಮುಂದುವರಿಕೆ

"ವಿದ್ಯಾರ್ಥಿಗಳ ಭವಿಷ್ಯವೇ ದೇಶದ ಭವಿಷ್ಯ. ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಸ್‌ಸಿ/ಎಸ್‌ಟಿ ಬ್ಯಾಕ್ಲಾಗ್ ಹುದ್ದೆಗಳನ್ನೂ ಶೀಘ್ರವೇ ಭರ್ತಿ ಮಾಡಲಾಗುವುದು"

ಚಿಕ್ಕಬಳ್ಳಾಪುರ: ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ(NEET exam question paper leak scandal)ವನ್ನು ಖಂಡಿಸಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆ ರಾಜಕೀಯ ಹಾಗೂ ವಿದ್ಯಾರ್ಥಿ ವಲಯದ ಗಮನ ಸೆಳೆಯಿತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಶಾಸಕ ಪ್ರದೀಪ್ ಈಶ್ವರ್(Deputy Chief Minister Dr. G. Parameshwar and MLA Pradeep Eshwar) ಪ್ರತಿಭಟನೆಯಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್, "ವಿದ್ಯಾರ್ಥಿಗಳ ಭವಿಷ್ಯವೇ ದೇಶದ ಭವಿಷ್ಯ. ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಸ್‌ಸಿ/ಎಸ್‌ಟಿ ಬ್ಯಾಕ್ಲಾಗ್ ಹುದ್ದೆಗಳನ್ನೂ ಶೀಘ್ರವೇ ಭರ್ತಿ ಮಾಡಲಾಗುವುದು" ಎಂದು ಘೋಷಿಸಿದರು.

ಇದನ್ನೂ ಓದಿ: NEET UG 2026: ಆಲ್ ಇಂಡಿಯಾ ಟಾಪ್ 10 ರಲ್ಲಿ ನಾಲ್ಕು ಆಕಾಶ್ ವಿದ್ಯಾರ್ಥಿಗಳಿಗೆ ಸ್ಥಾನ

ನೀಟ್ ಹಗರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳಿಗೆ ಧಕ್ಕೆ ಉಂಟಾಗಿದ್ದು, ಅದರ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಹೋರಾಟ ನಡೆಸುತ್ತಿದೆ ಎಂದು ಅವರು ಹೇಳಿದರು. ಕೇಂದ್ರ ಸರ್ಕಾರದ ಶಿಕ್ಷಣ ನೀತಿ ಹಾಗೂ ನಿರುದ್ಯೋಗ ಸಮಸ್ಯೆ ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಧ್ವನಿಯಾಗಿರಲಿದೆ ಎಂದು ತಿಳಿಸಿದರು. ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ಬಂಧನವನ್ನು ತೀವ್ರವಾಗಿ ಖಂಡಿಸಿದರು.

ಇದೇ ವೇಳೆ ಶಾಸಕ ಪ್ರದೀಪ್ ಈಶ್ವರ್ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿ, "ಮಕ್ಕಳಿಗೆ ಹಾಕುವ ಡೈಪರ್ ಲೀಕ್ ಆಗುವುದಿಲ್ಲ, ಆದರೆ ಎನ್‌ಟಿಎ ನಡೆಸುವ ನೀಟ್ ಪ್ರಶ್ನೆಪತ್ರಿಕೆ ಲೀಕ್ ಆಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ" ಎಂದು ಆರೋಪಿಸಿ ದರು.

ವೈದ್ಯಕೀಯ ಪ್ರವೇಶದ ಕನಸಿಗಾಗಿ ವರ್ಷಗಳ ಕಾಲ ಶ್ರಮಿಸುವ ವಿದ್ಯಾರ್ಥಿಗಳಿಗೆ ನ್ಯಾಯ ಸಿಗದಿರು ವುದು ದೇಶದ ಶಿಕ್ಷಣ ವ್ಯವಸ್ಥೆಯ ವೈಫಲ್ಯ ಎಂದು ಟೀಕಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವರು ಮೌನ ವಹಿಸಿರುವುದು ಅಕ್ಷಮ್ಯ ಎಂದರು. ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ಬರುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದರು.

22cbpm1p ಒಕ

ಸಾಮಾಜಿಕ ಜಾಲತಾಣಗಳಲ್ಲಿ ಯಾರನ್ನೂ ಅಂಧಾಭಿಮಾನದಿಂದ ಬೆಂಬಲಿಸುವುದಕ್ಕಿಂತ ತಪ್ಪನ್ನು ಪ್ರಶ್ನಿಸುವ ಮನೋಭಾವ ಯುವಜನರಲ್ಲಿ ಬೆಳೆಯಬೇಕು" ಎಂದು ಕರೆ ನೀಡಿದ ಅವರು ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾದರಿ ಹಾಗೂ ಅಕ್ರಮಗಳಿಂದ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, "ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮೌನ ಸಲ್ಲದು. ಎನ್‌ಟಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆ ಹೊರಬೇಕು. ವಿದ್ಯಾರ್ಥಿಗಳ ಧ್ವನಿಗೆ ನ್ಯಾಯ ಸಿಗುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ" ಎಂದು ಹೇಳಿದರು.

22cbpm1m (1) ok

ಪ್ರತಿಭಟನೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ, ನೀಟ್ ಹಗರಣದ ಸಮಗ್ರ ತನಿಖೆ ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕೂಡ ಕೇಂದ್ರ ಸರಕಾರದ ನೀಟ್ ದ್ರೋಹದ ಬಗ್ಗೆ ತೀವ್ರ ಅಸಮಾದಾನ ಹೊರಹಾಕಿದ್ದು ವಿಶೇಷವಾಗಿತ್ತು.

ಈ ವೇಳೆ ಎಐಸಿಸಿ ಕಾರ್ಯದರ್ಶಿ ಸಂಪತುಕುಮಾರ್, ಎಐಸಿಸಿ ಪದಾಧಿಕಾರಿಗಳಾದ ನೀರಜಾ ಶಾರದಾ, ಬಾಲಾನಾಯ್ಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಶಿಡ್ಲಘಟ್ಟ ಕ್ಷೇತ್ರದ ಬಿ.ವಿ ರಾಜೀವ್‌ ಗೌಡ ಇಂಟಕ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಬೇರ್ ಅಚ್ಚು, ತಾಲೂಕು ಅಧ್ಯಕ್ಷ ನಾಗೇಶ್‌ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ಲಾಯರ್ ನಾರಾಯಣಸ್ವಾಮಿ, ನವೀನ್, ಸಂದೀಪ್ ಚಕ್ರವರ್ತಿ, ಮತ್ತಿತರರು ಇದ್ದರು.