B K Hariprasad: ಹರಿಪ್ರಸಾದ್ ಪದಗ್ರಹಣಕ್ಕೆ ಶಿಡ್ಲಘಟ್ಟದಿಂದ ಕಾಂಗ್ರೆಸ್ ಶಕ್ತಿ ಪ್ರದರ್ಶನ; ರಾಜೀವ್ ಗೌಡ ಪರ ಘೋಷಣೆಗಳು
ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮೇಲೆ ಅಪಾರ ನಿಷ್ಠೆ ಮತ್ತು ಬದ್ಧತೆ ಹೊಂದಿದ್ದು, ಸಾವಿರಾರು ಸಂಖ್ಯೆಯಲ್ಲಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿರುವುದು ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ ಮತ್ತು ಕಾಂಗ್ರೆಸ್ ಸಂಘಟನೆ ಬಲವರ್ಧನೆಗಾಗಿ ಮುಂದೆಯೂ ಜನರೊಂದಿಗೆ ಹೆಜ್ಜೆ ಹಾಕಿ ಕೆಲಸ ಮಾಡುವುದಾಗಿ ಹೇಳಿದರು
-
ಶಿಡ್ಲಘಟ್ಟ: ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್(B K Hariprasad) ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಸುಮಾರು 6 ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಅರಮನೆ ಮೈದಾನಕ್ಕೆ ತೆರಳಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದರು.
ನಗರದ ಪ್ರವಾಸಿ ಮಂದಿರದ ಮುಂಭಾಗದಿಂದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ನೂರಕ್ಕೂ ಹೆಚ್ಚು ಬಸ್‌ಗಳು ಹಾಗೂ ಕಾರುಗಳಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ಪರ ಹಾಗೂ ರಾಜೀವ್ ಗೌಡ ಪರ ಘೋಷಣೆ ಗಳು ಮೊಳಗಿದವು.
ಇದನ್ನೂ ಓದಿ: Shidlaghatta News: ಅಕ್ಷರಾಭ್ಯಾಸಕ್ಕೆ ಪೇಜಾವರ ಶ್ರೀಗಳ ಆಶೀರ್ವಾದ; ನೂತನ ಕಟ್ಟಡ ಉದ್ಘಾಟನೆ
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೀವ್ ಗೌಡ, ಬಿ.ಕೆ. ಹರಿಪ್ರಸಾದ್ ಅವರ ನಾಯಕ ತ್ವದಲ್ಲಿ ರಾಜ್ಯ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಿ ಸಂಘಟನೆಯಾಗಲಿದ್ದು, ಪಕ್ಷದ ತತ್ವ-ಸಿದ್ಧಾಂತ ಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಹೊಸ ಚೈತನ್ಯ ದೊರೆಯಲಿದೆ ಎಂದು ಹೇಳಿದರು.
ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮೇಲೆ ಅಪಾರ ನಿಷ್ಠೆ ಮತ್ತು ಬದ್ಧತೆ ಹೊಂದಿದ್ದು, ಸಾವಿರಾರು ಸಂಖ್ಯೆಯಲ್ಲಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿರುವುದು ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ ಮತ್ತು ಕಾಂಗ್ರೆಸ್ ಸಂಘಟನೆ ಬಲವರ್ಧನೆಗಾಗಿ ಮುಂದೆಯೂ ಜನರೊಂದಿಗೆ ಹೆಜ್ಜೆ ಹಾಕಿ ಕೆಲಸ ಮಾಡುವುದಾಗಿ ಹೇಳಿದರು.
ಸಮಾವೇಶದ ವೇಳೆ "28ಕ್ಕೆ ರಾಜೀವ್ ಗೌಡ ಎಂಎಲ್ಎ" ಹಾಗೂ "ಶಿಡ್ಲಘಟ್ಟದ ಮುಂದಿನ ಶಾಸಕ ರಾಜೀವ್ ಗೌಡ" ಎಂಬ ಘೋಷಣೆಗಳು ನಿರಂತರವಾಗಿ ಕೇಳಿಬಂದು ಗಮನ ಸೆಳೆದವು.