Shidlaghatta News: ಕಾಂಗ್ರೆಸ್ ಒಗ್ಗಟ್ಟಿನ ಮಹೋತ್ಸವ: ಬಿ.ಕೆ. ಹರಿಪ್ರಸಾದ್ ಪದಗ್ರಹಣ, ಸಿದ್ದರಾಮಯ್ಯಗೆ ಕೃತಜ್ಞತೆ
ಶಿಡ್ಲಘಟ್ಟ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು, ಯುವ ಕಾಂಗ್ರೆಸ್ ಮುಖಂಡರು, ಮಹಿಳಾ ಘಟಕದ ಸದಸ್ಯರು ಹಾಗೂ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಇದು ಪಕ್ಷದ ಒಗ್ಗಟ್ಟು, ಶಕ್ತಿ ಮತ್ತು ನಾಯಕತ್ವಕ್ಕೆ ಬೆಂಬಲ ಸೂಚಿಸುವ ಮಹತ್ವದ ಕಾರ್ಯಕ್ರಮವಾಗಿದ್ದು, ಎಲ್ಲರೂ ಭಾಗಿಯಾಗಬೇಕು ಎಂದು ಪುಟ್ಟು ಆಂಜಿನಪ್ಪ ಮನವಿ ಮಾಡಿದರು
-
ಶಿಡ್ಲಘಟ್ಟ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ (B K Hariprasad)ಅವರು ಜೂ.21ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತಾ ಸಮಾರಂಭವೂ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ತಿಳಿಸಿದ್ದಾರೆ.
ಶಿಡ್ಲಘಟ್ಟ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Chief Minister D K Shivkumar) ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದ್ದು, ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಿ.ಕೆ. ಹರಿಪ್ರಸಾದ್ ರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಇದನ್ನೂ ಓದಿ: Shidlaghatta News: ದೇಶದ ಅಭಿವೃದ್ಧಿಗೆ ಮೋದಿ ಕೊಡುಗೆ ಸ್ಮರಣೀಯ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅಭಿಮತ
ಪದಗ್ರಹಣ ಸಮಾರಂಭದ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರವಹಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah) ಅವರ ಸೇವೆಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮವೂ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಶಿಡ್ಲಘಟ್ಟ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು, ಯುವ ಕಾಂಗ್ರೆಸ್ ಮುಖಂಡರು, ಮಹಿಳಾ ಘಟಕದ ಸದಸ್ಯರು ಹಾಗೂ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಇದು ಪಕ್ಷದ ಒಗ್ಗಟ್ಟು, ಶಕ್ತಿ ಮತ್ತು ನಾಯಕತ್ವಕ್ಕೆ ಬೆಂಬಲ ಸೂಚಿಸುವ ಮಹತ್ವದ ಕಾರ್ಯಕ್ರಮವಾಗಿದ್ದು, ಎಲ್ಲರೂ ಭಾಗಿಯಾಗಬೇಕು ಎಂದು ಪುಟ್ಟು ಆಂಜಿನಪ್ಪ ಮನವಿ ಮಾಡಿದರು.
"ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದಲ್ಲಿ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿದ್ದು, ಸಿದ್ದರಾಮಯ್ಯ ಅವರ ಕೊಡುಗೆ ಸ್ಮರಿಸುವ ಈ ಕಾರ್ಯಕ್ರಮ ಕಾಂಗ್ರೆಸ್ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆಯಲಿದೆ" ಎಂದು ಹೇಳಿದರು.
ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜಕುಮಾರ್ ಬಸವರಾಜ್ ಆನೂರು ದೇವರಾಜ್, ಬಳುವನಹಳ್ಳಿ ಮೂರ್ತಿ, ದರ್ಶನ್, ವರದರಾಜ್, ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಗಳು ಹಾಜರಿದ್ದರು